ಬೆಂಗಳೂರು:ಶಾಲಾ ಸಮವಸ್ತ್ರ ಧರಿಸುವ ವಿಷಯದಲ್ಲಿ ಕಾಂಗ್ರೆಸ್ ನಾಯಕರು ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡುತ್ತಿದ್ದಾರೆ. ಇದೇ ರೀತಿ ಮುಂದುವರಿದರೆ ಜನರೇ ಆ ಪಕ್ಷವನ್ನು ಅರಬ್ಬಿಸಮುದ್ರಕ್ಕೆ ಎಸೆಯುತ್ತಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ವಾಗ್ದಾಳಿ ನಡೆಸಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ವಿದ್ಯಾರ್ಥಿಗಳು ಶಿವಮೊಗ್ಗದಲ್ಲಿ ರಾಷ್ಟ್ರಧ್ವಜ ಇಳಿಸಿ, ಕೇಸರಿ ಧ್ವಜ ಏರಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷರು ಸುಳ್ಳು ಮಾಹಿತಿ ನೀಡಿದ್ದಾರೆ. ಕಾಲೇಜು ಆವಣದಲ್ಲಿ ರಾಷ್ಟ್ರಧ್ವಜ ಹಾರುತ್ತಿರಲಿಲ್ಲ. ಡಿ.ಕೆ. ಶಿವಕುಮಾರ್ ಬೇಜವಾಬ್ದಾರಿಯಾಗಿ ಮಾತನಾಡಿದ್ದಾರೆ. ಬೆಂಕಿಗೆ ತುಪ್ಪ ಸುರಿಸುವ ಕೆಲಸ ಮಾಡಿದ್ದಾರೆ ಎಂದು ಕಿಡಿಕಾರಿದರು.
ಇಂಥಹ ಬೇಜವಾಬ್ದಾರಿ ಹಾಗೂ ಹಸಿಸುಳ್ಳು ಹೇಳಿಕೆ ಒಬ್ಬ ಹಿರಿಯ ಕಾಂಗ್ರೆಸ್ ನಾಯಕರಿಂದ ಬರುತ್ತೆ ಎಂದರೆ, ಅವರ ಉದ್ದೇಶ ಏನಿರಬಹುದು? ಎಂದು ಸಾರ್ವಜನಿಕರೇ ಊಹಿಸುತ್ತಾರೆ. ವಿದ್ಯಾರ್ಥಿಗಳ ಮನಸ್ಸಿನಲ್ಲಿ ಮತೀಯ ಭಾವನೆಗಳನ್ನು ತುಂಬಬಾರದು ಎಂದು ಗೃಹ ಸಚಿವ ತಿಳಿಹೇಳಿದರು. ಘಟನೆಯ ಪ್ರೇರಣಾ ಶಕ್ತಿಗಳು ಯಾರಿದ್ದಾರೆ? ಎಂಬುದರ ಬಗ್ಗೆಯೂ ತನಿಖೆ ಆಗಲಿದೆ ಎಂದರು.
‘ಅಲ್ಲಾಹು ಅಕ್ಬರ್’ ಘೋಷಣೆ ಕೂಗಿದ್ದ ವಿದ್ಯಾರ್ಥಿನಿಗೆ 5 ಲಕ್ಷ ರೂ. ಬಹುಮಾನ?

ಬೆಂಗಳೂರಲ್ಲಿ ವೈದ್ಯ ದಂಪತಿ ಪುತ್ರ ಆತ್ಮಹತ್ಯೆ: ಅಯ್ಯೋ ಕಂದ ಸಾಯುವಂತಹದ್ದು ಏನಾಯ್ತಪ್ಪಾ…

ಭುಗಿಲೆದ್ದ ಹಿಜಾಬ್​ ವಿವಾದ: ಬನಹಟ್ಟಿಯಲ್ಲಿ ಕಲ್ಲು ತೂರಾಟ, ಕಾಲೇಜಿಗೆ ರಜೆ ಘೋಷಣೆ, ಪೊಲೀಸರಿಂದ ಲಾಠಿ ಚಾರ್ಜ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + nineteen =
Remember me
