ಬೆಂಗಳೂರು:ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಲ್ಲಿ ಎಂಬಿಎ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಹೇಯ ಕೃತ್ಯವೆಸಗಿದ ಕಾಮುಕರನ್ನು ಬಂಧಿಸಿ ನಡುರಸ್ತೆಯಲ್ಲಿ ಗುಂಡಿಕ್ಕಿ ಕೊಲ್ಲಬೇಕು. ಸಂತ್ರಸ್ತೆಗೆ ನ್ಯಾಯ ಕೊಡಿಸಬೇಕು ಎಂದು ಸಾವಿರಾರು ವಿದ್ಯಾರ್ಥಿಗಳು ರಾಜ್ಯಾದ್ಯಂತ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಈ ಪಕರಣ ಸಂಬಂಧ ಗೃಹ ಸಚಿವ ಆರಗ ಜ್ಞಾನೇಂದ್ರ, ‘ಸಂತ್ರಸ್ತ ಯುವತಿ ನಿರ್ಜನ‌‌ ಪ್ರದೇಶಕ್ಕೆ ಹೋಗಬಾರದಿತ್ತು…’ ಎನ್ನುವ ಮೂಲಕ ಮಹಿಳೆಯರು ಸೇರಿದಂತೆ ವಿವಿಧ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಬೆಂಗಳೂರಿನ ಶೇಷಾದ್ರಿ ರಸ್ತೆಯಲ್ಲಿರುವ ಬಂಧೀಖಾನೆ‌ ಇಲಾಖೆಯ‌ ಹಿರಿಯ ಅಧಿಕಾರಿಗಳೊಂದಿಗೆ ಗುರುವಾರ ಸಭೆ ನಡೆಸಿದ ಗೃಹ ಸಚಿವರು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಘಟನೆಗೂ ಮುಂಚೆ ಯುವಕ-ಯುವತಿ ಅಂದು ರಾತ್ರಿ 7.30ಕ್ಕೆ ನಿರ್ಜನ ಪ್ರದೇಶಕ್ಕೆ ಹೋಗಿದ್ದಾರೆ. ಅಷ್ಟೊತ್ತಿಗೆ ಅಲ್ಲಿ ಹೋಗಬಾರದಿತ್ತು. ಆದರೆ ಹೋಗಬೇಡಿ ಎಂದು ತಡೆಯೋದಕ್ಕೂ ಆಗಲ್ಲ. ಸದ್ಯಕ್ಕೆ ಯುವಕ, ಯುವತಿ ಶಾಕ್‌ನಲ್ಲಿದ್ದಾರೆ. ಅವರ ಸಂಪೂರ್ಣ ಹೇಳಿಕೆ ಪಡೆಯಲು ಆಗಿಲ್ಲ. ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ ಎಂದರು.
ಸಂತ್ರಸ್ತ ಯುವತಿ ನಿರ್ಜನ‌‌ ಪ್ರದೇಶಕ್ಕೆ ಹೋಗಬಾರದಿತ್ತು ಎಂಬ ಸಚಿವರ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಗೃಹ ಸಚಿವರು ಇಂತಹ ಹೇಳಿಕೆ ನೀಡಿರುವುದು ಸರಿಯಲ್ಲ. ಕೂಡಲೇ ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಕೆಲ ಸಂಘಟನೆಗಳು ಒತ್ತಾಯಿಸಿವೆ.
ಮೈಸೂರಲ್ಲಿ ಗ್ಯಾಂಗ್​ ರೇಪ್​: ವಿಡಿಯೋ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಕಾಮುಕರು, ರಾತ್ರಿವರೆಗೂ ಕಾದು ಅಟ್ಟಹಾಸ ಮೆರೆದ್ರು…

ಯುವತಿ ಜತೆ ನನ್ನ ಗಂಡನಿಗಿದೆ ಅಕ್ರಮ ಸಂಬಂಧ! ಪತ್ನಿ ಮತ್ತು ಆಕೆ ನಡುವೆ ಜಾಲತಾಣದಲ್ಲೇ ನಡೀತು ವಾರ್​, ವಿಡಿಯೋ ವೈರಲ್​

ಅಪಘಾತದಲ್ಲಿ ಪತ್ನಿ ಸತ್ತಳು ಎಂದು ಕಣ್ಣೀರಿಟ್ಟ ಗಂಡ! ಸ್ಥಳ ಪರಿಶೀಲನೆ ವೇಳೆ ಸಿಕ್ಕ ಸುಳಿವು ಬೆನ್ನಟ್ಟಿದ ಪೊಲೀಸರಿಗೆ ಕಾದಿತ್ತು ಶಾಕ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × four =
Remember me
