ಬೆಂಗಳೂರು:ನಾಲ್ಕು ದಿನದ ಹಿಂದೆ ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ಮುಖಂಡ ಅನಂತರಾಜು ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಅನಾರೋಗ್ಯದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಲ್ಲ, ಹನಿಟ್ರ್ಯಾಪ್​ಗೆ ಬಿಜೆಪಿ ಮುಖಂಡ ಬಲಿಯಾಗಿದ್ದಾರೆ!
ಹೇರೋಹಳ್ಳಿ ವಾರ್ಡ್​ನ ನಿವಾಸಿ, ಬಿಜೆಪಿ ಮುಖಂಡ ಅನಂತರಾಜು ಮೇ 12ರ ರಾತ್ರಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಬ್ಯಾಡರಹಳ್ಳಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮೇಲ್ನೋಟಕ್ಕೆ ಅನಾರೋಗ್ಯ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಳ್ಳಲಾಗಿದೆ ಎನ್ನಲಾಗಿತ್ತಾದರೂ ಇದೀಗ ಸ್ಫೋಟಕ ತಿರುವು ಪಡೆದಿದೆ. ಬಿಬಿಎಂಪಿ ಚುನಾವಣೆಗೆ ಸ್ಪರ್ಧಿಸಲು ಅನಂತರಾಜು ಸಿದ್ಧತೆ ನಡೆಸುತ್ತಿದ್ದರು. ಅಷ್ಟರಲ್ಲಿ ನಡೆಯಬಾರದ್ದು ನಡೆದೇ ಹೋಗಿದೆ.
ಅನಂತರಾಜು ಪತ್ನಿ ಕೊಟ್ಟ ದೂರಿನ ಮೇರೆಗೆ ಎಫ್​ಐಆರ್​ ದಾಖಲಾಗಿದೆ. ಕೆ.ಆರ್.ಪುರಂನ ನಿವಾಸಿ ರೇಖಾ ಮತ್ತು ಈಕೆಯ ಪತಿ ವಿನೋದ್ ಹಾಗೂ ಸ್ನೇಹಿತೆ ಸ್ಪಂದನ ಎಂಬುವವರು ಅಶ್ಲೀಲ ಫೋಟೋಗಳನ್ನ ಇಟ್ಟುಕೊಂಡು ಬ್ಲಾಕ್​ಮೇಲ್ ಮಾಡುತ್ತಿದ್ದರು. ಫೇಸ್​ಬುಕ್​ ಮೂಲಕ ರೇಖಾಳ ಪರಿಚಯ ಅನಂತರಾಜು ಆಗಿತ್ತು. ಇದನ್ನೇ ಬಂಡವಾಳ ಮಾಡಿಕೊಂಡ ರೇಖಾ ಮತ್ತು ಈಕೆಯ ಗಂಡ ವಿನೋದ್​, ಸ್ಪಂದನಾ ಮೂವರು ಸಂಚು ರೂಪಿಸಿ ಅನಂತರಾಜು ಅವರ ಖಾಸಗಿ ಫೋಟೋ ವಿಡಿಯೋ ಇಟ್ಟುಕೊಂಡು ಹಣಕ್ಕಾಗಿ ಹಿಂಸಿಸಿದ್ದಾರೆ. ಇವರ ಕಾಟ ಸಹಿಸಲಾಗದೆ ಈ ಹಿಂದೆಯೂ ಆತ್ಮಹತ್ಯೆಗೆ ಅನಂತರಾಜು ಯತ್ನಿಸಿದ್ದರು. ಇಷ್ಟಕ್ಕೆ ಸುಮ್ಮನಾಗದ ರೇಖಾ, ಪದೆಪದೇ ಕಾಲ್​ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದಳು. ಈ ಬಗ್ಗೆ ಅನಂತರಾಜು ಅವರ ಪತ್ನಿಗೆ ಗೊತ್ತಾಗಿ, ಹೆದರಬೇಡಿ ಎಂದು ಗಂಡನಿಗೆ ಧೈರ್ಯ ತುಂಬಿದ್ದರು. ಆದರೂ ಆ ಗ್ಯಾಂಗ್​ ಬ್ಲ್ಯಾಕ್​ಮೇಲ್​ ಮಾಡುತ್ತಲೇ ಇತ್ತು. ಇದರಿಂದ ಬೇಸತ್ತ ಅನಂತರಾಜು ನೇಣಿಗೆ ಶರಣಾಗಿದ್ದಾರೆ ಎಂದು ಡೆತ್​ನೋಟ್ ಸಮೇತ ದೂರು ನೀಡಿದ್ದಾರೆ.
ಸಾವಿಗೂ ಮುನ್ನ ಅನಂತರಾಜು ಬರೆದ ಡೆತ್​ನೋಟ್​ನಲ್ಲಿ ‘ಪ್ರಿಯ ಸುಮಾ, ನನ್ನನ್ನು ಕ್ಷಮಿಸಿಬಿಡು, ನಿನಗೆ ಮೋಸ ಮಾಡಿದ್ದೇನೆ. ನಿನ್ನಿಂದ ಕ್ಷಮೆ ಕೇಳಲು ಅರ್ಹನಲ್ಲ, ಹೆಣ್ಣಿನ ಸಹವಾಸ ಮಾಡಿ ಅವಳಿಂದ ಫೋಟೋ-ವಿಡಿಯೋಗಳ ಟ್ರ್ಯಾಪ್​ಗೆ ಸಿಲುಕಿ ಬ್ಲ್ಯಾಕ್​ಮೇಲ್​ ಮಾಡಿಸಿಕೊಂಡು ನಿನಗೆ ಮುಖ ತೋರಿಸಲು ಸಾಧ್ಯವಾಗುತ್ತಿಲ್ಲ. ನನ್ನ ಮಕ್ಕಳನ್ನು ಚೆನ್ನಾಗಿ ನೋಡಿಕೊ’ ಎಂದಿದೆ. ಆರೋಪಿಗಳಿಗಾಗಿ ಬ್ಯಾಡರಹಳ್ಳಿ ಪೊಲೀಸರು ಬಲೆ ಬೀಸಿದ್ದಾರೆ.
ವರದಕ್ಷಿಣೆ ಕಿರುಕುಳ: ಶಿವಮೊಗ್ಗದಲ್ಲಿ ಪುಟ್ಟ ಮಕ್ಕಳಿಬ್ಬರ ಜೊತೆ ತಾಯಿ ಆತ್ಮಹತ್ಯೆ

ರಕ್ತದಲ್ಲಿ ಪ್ರಧಾನಿಗೆ ಪತ್ರ: ನಮ್ಗೆ ನ್ಯಾಯ ಕೊಡ್ಸಿ… ಇಲ್ಲದಿದ್ರೆ ನಕ್ಸಲರ ಜೊತೆ ಕೈ ಜೋಡಿಸ್ತೀವಿ…

ವಾಕಿಂಗ್​ ವೇಳೆ ಅಪಘಾತ: ‘ಕರಿಯ’ ಸಿನಿಮಾ ನಿರ್ಮಾಪಕ ಆನೇಕಲ್​ ಬಾಲರಾಜ್​ ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 17 =
Remember me
