ಬೆಂಗಳೂರು:ಹುಬ್ಬಳ್ಳಿಯಲ್ಲಿ ನಡೆದ ಗಲಾಟೆ ಪ್ರಕರಣ ಸಂಬಂಧ ಅಮಾಯಕರಿಗೆ ತೊಂದರೆ ಕೊಡಬೇಡಿ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ತಿಳಿಗೇಡಿ ಯುವಕನ ಪ್ರಚೋದನಾತ್ಮಕ ಪೋಸ್ಟ್‌ನಿಂದ ಹುಬ್ಬಳ್ಳಿಯಲ್ಲಿ ನಡೆದ ಗಲಾಟೆಗೆ ಸಂಬಂಧಿಸಿ, ಕಿಡಿಗೇಡಿಗಳ ಜತೆಗೆ ಕೆಲ ಅಮಾಯಕರನ್ನೂ ಪೊಲೀಸರು ಬಂಧಿಸಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ. ಉದ್ರಿಕ್ತ ಮತಿಗೇಡಿ ಯುವಕರು ಎಸಗಿದ ಕೃತ್ಯಕ್ಕೆ ಸಂಬಂಧವಿಲ್ಲದವರನ್ನೂ ವಶಕ್ಕೆ ಪಡೆಯಲಾಗಿದೆ. ಕೆಲ ಕುಟುಂಬಗಳ ತಂದೆ-ತಾಯಂದಿರು ನನಗೆ ನಿರಂತರವಾಗಿ ಮೊಬೈಲ್ ಕರೆ ಮಾಡಿ ಕಣ್ಣೀರು ಹಾಕುತ್ತಿದ್ದಾರೆ. ಈ ಬಗ್ಗೆ ನಾನು ಈಗಾಗಲೇ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರ ಜತೆ ಮಾತನಾಡಿದ್ದೇನೆ. ಪೊಲೀಸ್ ಠಾಣೆ, ಆಸ್ಪತ್ರೆ, ದೇವಾಲಯದ ಮೇಲೆ ಕಲ್ಲು ಹೊಡೆದವರನ್ನು ಬಿಡಬೇಡಿ. ಆದರೆ ಅಮಾಯಕರಿಗೆ ತೊಂದರೆ ಕೊಡಬೇಡಿ ಎಂದು ಸರಣಿ ಟ್ವಿಟ್​ ಮೂಲಕ ಎಚ್​ಡಿಕೆ ಮನವಿ ಮಾಡಿದ್ದಾರೆ.
ಸಿಸಿ ಕ್ಯಾಮರಾ ದೃಶ್ಯಾವಳಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಆ ದೃಶ್ಯಗಳಲ್ಲಿ ಇಲ್ಲದವರನ್ನು ಬಿಟ್ಟು ಕಳಿಸಲಾಗುವುದು ಎಂದು ಪೊಲೀಸ್ ಆಯುಕ್ತರು ನನಗೆ ಭರವಸೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಗಲಾಟೆಗೆ ಸಂಬಂಧವಿಲ್ಲದ ಮುಗ್ಧರಿಗೆ ತೊಂದರೆ ಆಗುವುದು ಬೇಡ. ಅಂಜುಮನ್ ಸಂಸ್ಥೆ ಮುಖಂಡರ ಜತೆ ತೆರಳಿ ಪೊಲೀಸರಿಗೆ ಮನವಿ ಕೊಡಿ ಎಂದು ಈಗಾಗಲೇ ನಮ್ಮ ಪಕ್ಷದ ಮುಖಂಡರಿಗೂ ಸೂಚಿಸಿದ್ದೇನೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ, ಮುಗ್ಧರಿಗೆ ಅನ್ಯಾಯ ಆಗದಿರಲಿ ಎಂದು ಎಚ್​ಡಿಕೆ ಕೋರಿದ್ದಾರೆ.
ಹುಬ್ಬಳ್ಳಿ ಸದಾ ಶಾಂತಿಯನ್ನು ಬಯಸುವ ನಗರ. ಸಾಹಿತ್ಯ, ಸಾಂಸ್ಕೃತಿಕ ಪರಂಪರೆಯುಳ್ಳ ತಾಣ. ಕೆಲ ವರ್ಷಗಳಿಂದ ಇಲ್ಲಿ ಎಲ್ಲ ಸಮುದಾಯದವರು ಸಹೋದರರಾಗಿ ಬಾಳಿ ಬದುಕುತ್ತಿದ್ದಾರೆ. ಬವಣೆಯಲ್ಲಿ ಬೇಯುತ್ತಿರುವ ಬದುಕನ್ನು ಕಟ್ಟಿಕೊಳ್ಳುವ ಬದಲು ಕೋಮುದಳ್ಳುರಿ ಹರಡುವುದು ಬೇಡ ಎಂದು ಕುಮಾರಸ್ವಾಮಿ ಸಲಹೆ ಮಾಡಿದ್ದಾರೆ.
ಫ್ರೆಂಡ್ಸ್ ಜತೆ ಲೈಂಗಿಕವಾಗಿ ಸಹಕರಿಸು… ಮೊದಲ ಪತಿಗೆ ಡಿವೋರ್ಸ್​ ಕೊಟ್ಟು ಮತ್ತೊಬ್ಬನ ಮದ್ವೆ ಆದಾಕೆ ಬಾಳಲ್ಲಿ ದುರಂತ

BJP ಜತೆ ಡೀಲ್ ಕುದುರಿಸಿ ಡಿಂಗ್ ಡಾಂಗ್ ಹಾಡಿದ್ಯಾರಯ್ಯ? ಆ ಪಾಪದ ಕೂಸಿಗೆ ಹಾಲೆರೆದದ್ಯಾರಯ್ಯ? ಸಿದ್ದು ವಿರುದ್ಧ ಎಚ್​ಡಿಕೆ ಆಕ್ರೋಶ

545 PSI ಹುದ್ದೆ ನೇಮಕಾತಿಯಲ್ಲಿ ಅಕ್ರಮ: ಕಲಬುರಗಿ ಬಿಜೆಪಿ ನಾಯಕಿಯ ಪತಿ ಅರೆಸ್ಟ್

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three × five =
Remember me
