ಹುಬ್ಬಳ್ಳಿ:ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಉಣಕಲ್ ಕೆರೆ ಬಳಿಯ ದಿ ಪ್ರೆಸಿಡೆಂಟ್ ಹೋಟೆಲ್​ನಲ್ಲಿ ಭಕ್ತರ ಸೋಗಲ್ಲಿ ಬಂದ ಸರಳ ವಾಸ್ತು ಸಂಸ್ಥೆಯ ಮಾಜಿ ಉದ್ಯೋಗಿಗಳಿಬ್ಬರು ಚಂದ್ರಶೇಖರ ಗುರೂಜಿ ಅವರ ಕಾಲಿಗೆ ಬಿದ್ದು ನಮಸ್ಕರಿಸುಂತೆ ನಟಿಸಿ ನೋಡ ನೋಡುತ್ತಿದ್ದಂತೆ ಚಾಕುವಿನಿಂದ 43 ಬಾರಿ ಚುಚ್ಚಿ ಭೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದರು. ಸಿಸಿಟಿವಿಯಲ್ಲಿ ಸೆರೆಯಾದ ಭಯಾನಕ ದೃಶ್ಯ ನೋಡಿದ ಜನ ಬೆಚ್ಚಿಬಿದ್ದಿದ್ದಾರೆ. ಕೊಲೆ ನಡೆದ ದಿನವೇ ಆರೋಪಿಗಳನ್ನು ಬಂಧಿಸಿರುವ ಪೊಲೀಸರ ತನಿಖೆ ಮುಂದುವರಿಸಿದ್ದಾರೆ. ಇಷ್ಟೆಲ್ಲಾ ಬೆಳವಣಿಗೆ ನಡುವೆ ಹೋಟೆಲ್ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ದೇವರ ಮೊರೆ ಹೋಗಿದ್ದಾರೆ.
ಚಂದ್ರಶೇಖರ್​ ಗುರೂಜಿ ಹತ್ಯೆ ನಡೆದ ಸ್ಥಳದಲ್ಲೇ ಹೋಮ-ಹವನ ನಡೆಸಲಾಗಿದೆ. ಗುರೂಜಿ ಹತ್ಯೆಯಿಂದ ಹೋಟೆಲ್​ನಲ್ಲಿ ಆತಂಕ ನಿರ್ಮಾಣವಾಗಿತ್ತು. ಭಯ ದೂರ ಮಾಡಲು ಮತ್ತು ಹೋಟೆಲ್ ಶುದ್ಧಗೊಳಿಸಲು ಇಬ್ಬರು ಪುರೋಹಿತರಿಂದ ಸುದರ್ಶನ ಹೋಮ ಮಾಡಿಸಲಾಗಿದೆ.

ಜು.5ರಂದು ಚಂದ್ರಶೇಖರ ಗುರೂಜಿ ಮೃತಪಟ್ಟಿದ್ದರು. 6ರಂದು ಸಂಜೆ ಕುಟುಂಬಸ್ಥರು ಮತ್ತು ಭಕ್ತರ ಆಕ್ರಂದನದ ನಡುವೆಯೇ ಹುಬ್ಬಳ್ಳಿಯ ಸುಳ್ಳ ರಸ್ತೆಯಲ್ಲಿರುವ ಗುರೂಜಿ ಅವರ ಹೊಲದಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿತ್ತು.
ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಶಾಲೆಗೆ ಹೊರಟ್ಟಿದ್ದ ತಾಯಿ-ಮಗ ಸಾವು

ಇಂದಿರಾನಗರದಲ್ಲಿ ಬೀದಿನಾಯಿ ಕೊಂದ ಚಾಲಕನ ಸೆರೆ: ಮಲಗಿದ್ದ ‘ಬ್ರೋನಿ’ ಮೇಲೆ ಕಾರು ಹರಿಸಿದ ದೃಶ್ಯ ವೈರಲ್​

ಸ್ಮಶಾನಕ್ಕೆ ಸಾಗಿಸುತ್ತಿದ್ದ ಶವವನ್ನು ಚಟ್ಟದಿಂದ ಕೆಳಗಿಳಿಸಿ ಶಿವಮೊಗ್ಗದ ಆಸ್ಪತ್ರೆಗೆ ರವಾನೆ! ಅಂತ್ಯಕ್ರಿಯೆಗೆ ಬಂದ ಗ್ರಾಮಸ್ಥರಿಗೆ ಶಾಕ್​

ಹತ್ಯೆಗೂ ಮುನ್ನ ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಮುಂದೆ ಹಂತಕರ ಹೈಡ್ರಾಮ ಹೀಗಿತ್ತು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 4 =
Remember me
