ಮಂಗಳೂರು:ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದಲ್ಲಿ ದೇಗುಲದ ಮಹಿಳಾ ಟ್ರಸ್ಟಿಯೊಬ್ಬರು ಹುಂಡಿ ಹಣ ಕದ್ದಿದ್ದಾರೆ. ಫೆಬ್ರವರಿಯಲ್ಲಿ ನಡೆದಿರುವ ಈ ಪ್ರಕರಣ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಹಲವು ತಿರುವು ಪಡೆದುಕೊಂಡಿದೆ.
ಸ್ಥಳೀಯರು ಹಾಗೂ ದೇಗುಲದ ಭಕ್ತರು ಈ ಪ್ರಕರಣದ ಕುರಿತು ಮೈಸೂರಿನ ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿ, ಧಾರ್ಮಿಕ ದತ್ತಿ ಇಲಾಖೆ ಸಹಾಯಕ ಆಯುಕ್ತರು, ಮಂಗಳೂರು ಪೊಲೀಸ್‌ ಆಯುಕ್ತರಿಗೂ ದೂರು ನೀಡಿದ್ದಾರೆ.
ವ್ಯವಸ್ಥಾಪನಾ ಸಮಿತಿ ಸದಸ್ಯೆ ತನ್ನ ಸ್ಥಾನದ ಜವಾಬ್ದಾರಿ ಮತ್ತು ಗೌರವಕ್ಕೆ ತಕ್ಕಂತೆ ನಡೆದುಕೊಳ್ಳದೆ ದುರಾಸೆಗೆ ಒಳಗಾಗಿ ದೇವಸ್ಥಾನದ ಹುಂಡಿ ಹಣ ಕದ್ದಿರುವುದು ದೃಶ್ಯಾವಳಿಯಲ್ಲಿ ಸ್ಪಷ್ಟವಾಗಿ ಗೋಚರಿಸಿದೆ. ವ್ಯವಸ್ಥಾಪನಾ ಸಮಿತಿ ಸದಸ್ಯೆ ಇಂತಹ ಅವ್ಯವಹಾರಕ್ಕೆ ಕೈಹಾಕಿರುವುದು ದೇವಸ್ಥಾನದ ಪ್ರತಿಷ್ಠೆಗೆ ಕಳಂಕ ತರುವ ವಿಷಯ. ಇಂತಹ ವ್ಯಕ್ತಿಗಳನ್ನು ದೇವಸ್ಥಾನದ ಕೆಲಸ ಕಾರ್ಯದಲ್ಲಿ ಮುಂದುವರಿಯಲು ಅವಕಾಶ ನೀಡಿದರೆ ಕಳಂಕ ತಟ್ಟುತ್ತದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಲಭ್ಯ ಮಾಹಿತಿ ಪ್ರಕಾರ ಈ ಪ್ರಕರಣ ಕುರಿತು ಟ್ರಸ್ಟಿಗಳು ಸಭೆ ನಡೆಸಿದ್ದು, ಸಮಿತಿ ಸದಸ್ಯೆ ರಾಜಿನಾಮೆ ನೀಡಲು ಮುಂದಾಗಿದ್ದರು. ಆದರೆ ರಾಜಕೀಯ ವ್ಯಕ್ತಿಗಳ ಕೃಪಾಕಟಾಕ್ಷದಿಂದ ಈಗಲೂ ಮುಂದುವರಿದಿದ್ದಾರೆ ಎಂದು ತಿಳಿದುಬಂದಿದೆ.
ಮೂರು ಮದ್ವೆ ಆದ್ರೂ ಮುಗಿಯದ ಚೆಲ್ಲಾಟ! 3ನೇ ಗಂಡನಿಗೆ ಪ್ರಾಣಸಂಕಟ

ಬಟ್ಟೆ ಬ್ಯಾಗ್​ನಿಂದ ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿಗೆ ಎದುರಾಯ್ತು ಸಂಕಷ್ಟ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − seven =
Remember me
