ದಾವಣಗೆರೆ:ಎಲೆಬೇತೂರ ಗ್ರಾಮದಲ್ಲಿ ಸೋಮವಾರ ತಡರಾತ್ರಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ವೃದ್ಧ ದಂಪತಿಯನ್ನು ಭೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದು, ಇಂದು ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ.
ಗುರುಸಿದ್ದಯ್ಯ (80) ಮತ್ತು ಇವರ ಪತ್ನಿ ಸರೋಜಮ್ಮ (75) ಕೊಲೆಯಾದ ದಂಪತಿ. ಗ್ರಾಮದ ಮನೆಯಲ್ಲಿ ಪತಿ‌-ಪತ್ನಿ ಇಬ್ಬರೇ ವಾಸವಿದ್ದರು. ಇವರಿಗೆ ಮೂವರು ಹೆಣ್ಣು ಮಕ್ಕಳಿದ್ದು, ಮದುವೆ ಮಾಡಿದ್ದರು.
ಸೋಮವಾರ ರಾತ್ರಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ದಂಪತಿಯನ್ನು ಮಾಸಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಒಳಗೆ ಶವ ಬಿಟ್ಟು ಹೊರಗಿನಿಂದ ಬಾಗಿಲು ಹಾಕಿಕೊಂಡು ಪರಾರಿಯಾಗಿದ್ದಾರೆ. ಇಂದು ಬೆಳಗ್ಗೆ ಪಕ್ಕದ ಮನೆಯವರು ಸರೋಜಮ್ಮರನ್ನ ಭೇಟಿ ಮಾಡಲು ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸರು, ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡ ಪರಿಶೀಲನೆ ನಡೆಸಿದೆ. ಕೊಲೆಗಾರರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಇನ್ನು ದಂಪತಿ ಹತ್ಯೆ ಗ್ರಾಮಸ್ಥರಲ್ಲಿ ಭಯದ ವಾತಾವಾರಣ ಸೃಷ್ಟಿಸಿದೆ.
ಸೇತುವೆ ಮೇಲಿಂದ ಪ್ರಪಾತಕ್ಕೆ ಕಾರು ಪಲ್ಟಿ: ಬಿಜೆಪಿ ಶಾಸಕನ ಪುತ್ರ ಸೇರಿ 7 ವೈದ್ಯಕೀಯ ವಿದ್ಯಾರ್ಥಿಗಳು ದಾರುಣ ಸಾವು

ಗ್ರಾಪಂ ಕಚೇರಿಯಲ್ಲೇ ಪ್ರೇಮಿಗಳ ಮದುವೆ, ಪೌರೋಹಿತ್ಯ ವಹಿಸಿದ ಪಿಡಿಒ! ನಂಜನಗೂಡಲ್ಲಿ ನವಜೋಡಿ ಪ್ರಕರಣ ಸುಖಾಂತ್ಯ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three × 2 =
Remember me
