ಮೈಸೂರು:ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕೊಡುತ್ತಿರುವ ಕಿರುಕುಳ ಸಹಿಸಿಕೊಳ್ಳಲಾಗ್ತಿಲ್ಲ. ವೈಯಕ್ತಿಕವಾಗಿ ಟಾರ್ಗೆಟ್​ ಮಾಡಿ ನಿರಂತರವಾಗಿ ಕಿರುಕುಳ ಕೊಡುತ್ತಿದ್ದಾರೆ. ಅವರೂ ಒಬ್ಬ ಐಎಎಸ್ ಅಧಿಕಾರಿಯಾಗಿ ಮತ್ತೊಬ್ಬ ಐಎಎಸ್ ಅಧಿಕಾರಿ ಮೇಲೆ ದಬ್ಬಾಳಿಕೆ ಮಾಡೋದು ಎಷ್ಟು ಸರಿ? ನನ್ನನ್ನು ತುಳಿಯುವ ವ್ಯವಸ್ಥಿತ ಪಿತೂರಿ ನಡೆದಿದೆ. ಅವರ ದುರಾಹಂಕಾರ, ಹೀಗೋದಿಂದ ನಮ್ಮ ಕೆಲಸಕ್ಕೆ ಮನ್ನಣೆ ಸಿಗುತ್ತಿಲ್ಲ. ಉಸಿರುಗಟ್ಟಿಸುವ ವಾತಾವರಣದಲ್ಲಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಐಎಎಸ್​ ಹುದ್ದೆಗೇ ರಾಜೀನಾಮೆ ಕೊಟ್ಟೀದ್ದೀನಿ ಎಂದು ನಿನ್ನೆ(ಗುರುವಾರ) ಮಾಧ್ಯಮಗಳ ಮುಂದೆ ಘೋಷಿಸುವ ಮೂಲಕ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್​ ಭಾರೀ ಸಂಚಲನ ಮೂಡಿಸಿದ್ದರು.
ಇದೀಗ ರಾಜೀನಾಮೆ ವಿದ್ಯಮಾನವೇ ಹೈಡ್ರಾಮ, ಬೆದರಿಕೆ ತಂತ್ರಕ್ಕೆ ಶಿಲ್ಪಾನಾಗ್ ಮುಂದಾಗಿದ್ದಾರಾ? ಎಂಬ ಅನುಮಾನ ಮೂಡಿದೆ. ಇಬ್ಬರು ಐಎಎಸ್​ ಅಧಿಕಾರಿಗಳ ಸಮರ ಬಹಿರಂಗಗೊಂಡ ಬೆನ್ನಲ್ಲೇ ಶುಕ್ರವಾರ ಮೈಸೂರಿಗೆ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಭೇಟಿ ನೀಡಿದ್ದಾರೆ. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ರವಿಕುಮಾರ್​, ಶಿಲ್ಪಾನಾಗ್ ಅವರ ರಾಜೀನಾಮೆ ಪತ್ರ ಬಂದಿಲ್ಲ. ರಾಜೀನಾಮೆ ಬಗ್ಗೆ ನನಗೆ ಗೊತ್ತಿಲ್ಲ ಎಂದಿದ್ದಾರೆ.ಇದನ್ನೂ ಓದಿರಿಪ್ರಿಯಕರನ ಜತೆಗೂಡಿ ಗಂಡನನ್ನು ಕೊಂದು ಬೆಡ್​ ರೂಂನಲ್ಲೇ ಸುಟ್ಟುಹಾಕಿದ ಪತ್ನಿ! ವಾರದ ಬಳಿಕ ಬಯಲಾಗಿದ್ದೇ ರೋಚಕ
ರಾಜೀನಾಮೆ ವಿದ್ಯಮಾನವೇ ಹೈಡ್ರಾಮ? ಮಹಾನಗರ ಪಾಲಿಕೆ ಆಯುಕ್ತರು ರಾಜೀನಾಮೆಯನ್ನೇ ಕೊಟ್ಟಿಲ್ವ? ನಿನ್ನೆ ನಡೆದ ಸುದ್ದಿಗೋಷ್ಠಿ ‘ಬುಟ್ಟಿಯಲ್ಲಿ ಹಾವಿದೆ’ ಅನ್ನುವ ಸಂದೇಶ ರವಾನೆಗೆ ಮಾತ್ರ ಸೀಮಿತನಾ? ರಾಜೀನಾಮೆ ಪತ್ರ ತಲುಪಿಲ್ಲ ಅಂದಿದ್ದೀಕೆ ಸಿಎಸ್? ಮುಖ್ಯ ಕಾರ್ಯದರ್ಶಿಗೆ ರಾಜೀನಾಮೆ ತಲುಪಿಲ್ಲ ಅಂದ್ರೆ ರಾಜೀನಾಮೆ ಕೊಟ್ಟಿರೋದೇ ಸುಳ್ಳಾ? ಹೀಗೆ ಹಲವು ಪ್ರಶ್ನೆಯನ್ನು ಹುಟ್ಟುಹಾಕಿದೆ ಸಿಎಸ್​ ರವಿಕುಮಾರ್​ರ ಹೇಳಿಕೆ.
ಇತ್ತ ಶುಕ್ರವಾರ ಜಿಲ್ಲೆಗೆ ಭೇಟಿ ನೀಡಿದ ಮುಖ್ಯಕಾರ್ಯದರ್ಶಿ ರವಿಕುಮಾರ್​ ಸಭೆ ನಡೆಸಿದ್ದು. ಸಭೆಗೆ ಗೈರಾಗಿದ್ದ ಶಿಲ್ಪಾನಾಗ್ ಅವರು ಸಿಎಸ್​ ಅವರ ಸೂಚನೆಗೆ ಮೇರೆಗೆ ಸಭೆಗೆ ಆಗಮಿಸಿದರು. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಶಿಲ್ಪಾನಾಗ್​ ಅವರು ಸಭೆಯಲ್ಲಿ ಮುಖಾಮುಖಿ ಕುಳಿತಿದ್ದರು.(ದಿಗ್ವಿಜಯ ನ್ಯೂಸ್​)
ಸ್ವಾಭಿಮಾನದ ಹೆಸರು ಹೇಳಿ ಗೆದ್ದು ಹೋದಲ್ಲವ್ವ.. ಹೊಟ್ಟೆಗೆ ಇಟ್ಟಿಲ್ಲ, ಆಕ್ಸಿಜನ್ ಬೆಡ್ ಇಲ್ಲ, ಕೊಡಿಸಿ ಬಾ…

ಚಾಮರಾಜನಗರದಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ, ಕಾರಣ ಕೇಳಿದ್ರೆ ಶಾಕ್​ ಆಗ್ತೀರಿ

ರೋಹಿಣಿ ಸಿಂಧೂರಿ ಕಿರುಕುಳ ಸಹಿಸೋಕೆ ಆಗ್ತಿಲ್ಲ ಎಂದು ಐಎಎಸ್​ ಹುದ್ದೆಗೇ ರಾಜೀನಾಮೆ ಕೊಟ್ಟ ಶಿಲ್ಪಾನಾಗ್​

ಬೆತ್ತಲೆ ಸ್ಥಿತಿಯಲ್ಲೇ ಕಂಬದಲ್ಲಿ ನೇತಾಡುತ್ತಿದ್ದ ಮಹಿಳೆ! ಬೆಳ್ಳಂಬೆಳಗ್ಗೆ ನಡೆದ ಈ ಕೃತ್ಯ ಕೇಳಿದ್ರೆ ಬೆಚ್ಚಿಬೀಳ್ತೀರಿ

ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿಯ ಹತ್ಯೆ! ‘ಕಾಮ’ದಾಹ ತೀರದ ಸಿಟ್ಟಿಗೆ ಮೂರು ಮಕ್ಕಳನ್ನ ನಾಲೆಗೆ ಎಸೆದ

ಅತ್ತ ಪ್ರಿಯಕರನೊಂದಿಗೆ ಓಡಿ ಹೋದ ಮಗಳು, ಇತ್ತ ತೋಟದ ಮನೆಯಲ್ಲಿ ನಡೆಯಿತು ಘನಘೋರ ದುರಂತ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 2 =
Remember me
