ಬೆಳಗಾವಿ:ವ್ಯಕ್ತಿಯೊಬ್ಬರ ಕಂಠದಲ್ಲಿ ಸೇರಿಕೊಂಡಿದ್ದ ಕೃಷ್ಣನನ್ನು ಶಸ್ತ್ರ ಚಿಕಿತ್ಸೆ ಮೂಲಕ ಹೊರ ತೆಗೆಯಲಾಗಿದೆ. ಇದೇನಿದು? ಕಂಠದಲ್ಲಿ ಕೃಷ್ಣ ಇದ್ದನೇ? ಎಂದು ಆಶ್ಚರ್ಯ ಆಗೋದು ಸಹಜ. ನಿಜವಾಗಿಯೂ ವ್ಯಕ್ತಿಯೊಬ್ಬರ ಕಂಠದಲ್ಲಿ ಶ್ರೀಕೃಷ್ಣ ಇದ್ದ!
45 ವರ್ಷದ ವ್ಯಕ್ತಿಯೊಬ್ಬರಿಗೆ ದೇವರ ತೀರ್ಥ ಸೇವನೆ ಮಾಡುವ ಅಭ್ಯಾಸ ಇತ್ತು. ಎಂದಿನಂತೆ ತೀರ್ಥ ಸೇವನೆ ಮಾಡುವಾಗ ಅದರಲ್ಲಿದ್ದ ಶ್ರೀಕೃಷ್ಣ ದೇವರ ಪುಟ್ಟ ವಿಗ್ರಹ ಇರೋದನ್ನು ಗಮನಿಸದೆ ನುಂಗಿದ್ದಾರೆ. ನಂತರ ಅವರಿಗೆ ಗಂಟಲು ನೋವು ಮತ್ತು ಗಂಟಲು ಊತ ಉಂಟಾಗಿ ಸ್ಥಳೀಯ ವೈದ್ಯರನ್ನು ಸಂಪರ್ಕಿಸಿದ್ದಾರೆ. ವೈದ್ಯರು ಎಕ್ಸ್​ರೇ ಮಾಡಿಸಲು ಸೂಚಿಸಿದ್ದಾರೆ. ಎಕ್ಸರೇ ರಿಪೋರ್ಟ್​ನಲ್ಲಿ ಆ ವ್ಯಕ್ತಿಯ ಗಂಟಲಲ್ಲಿ ಬಾಲಕೃಷ್ಣನ ವಿಗ್ರಹ ಇರುವುದು ಗೊತ್ತಾಗಿದೆ.
ಕೂಡಲೇ ಚಿಕಿತ್ಸೆ ಪಡೆಯಲು ಬೆಳಗಾವಿಯ ಕೆಎಲ್ಇಎಸ್ ಡಾ.ಪ್ರಭಾಕರ ಕೋರೆ ಆಸ್ಪತ್ರೆಗೆ ಅವರು ದಾಖಲಾಗಿದ್ದಾರೆ. ಕೃಷ್ಣನ ಮೂರ್ತಿಯ ಎಡಗಾಲು ವ್ಯಕ್ತಿಯ ಆಹಾರ ನಾಳದಲ್ಲಿ ಸಿಲುಕಿರುವುದನ್ನು ಎಂಡೋಸ್ಕೋಪಿ ಮುಖಾಂತರ ದೃಢಪಡಿಸಿಕೊಂಡು ಇಎನ್​ಟಿ ವಿಭಾಗದ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿ ಕೃಷ್ಣನ ವಿಗ್ರಹವನ್ನು ಹೊರ ತೆಗೆದಿದ್ದಾರೆ.

ಇಎನ್​ಟಿ ವಿಭಾಗದ ವೈದ್ಯರಾದ ಡಾ.ಪ್ರೀತಿ ಹಜಾರೆ, ಡಾ.ವಿನಿತಾ ಮೆಡಗುಡ್ಡಮಠ, ಅರವಳಿಕೆ ವೈದ್ಯ ಡಾ. ಚೈತನ್ಯ ಕಾಮತ್ ತಂಡವು ರೋಗಿಯ ಗಂಟಲಿನಲ್ಲಿದ್ದ ಕೃಷ್ಣನ ವಿಗ್ರಹವನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದೆ.
ಮದ್ವೆಯಾಗಿ ಇಬ್ಬರು ಮಕ್ಕಳಿದ್ರೂ 21 ವರ್ಷದ ಅರ್ಚಕನ ಜತೆ 35ರ ಮಹಿಳೆ ಪರಾರಿ! ಮಧ್ಯರಾತ್ರಿ ಕಾಡಲ್ಲಿ ಈಕೆ ಪಟ್ಟ ಪಾಡು ಅಷ್ಟಿಷ್ಟಲ್ಲ

ಬೆಳಗಾವಿಯಲ್ಲಿ ತ್ರಿವಳಿ ಕೊಲೆ: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ‌ಪ್ರವೀಣ್ ಭಟ್​ನನ್ನು ನಿರ್ದೋಷಿ ಎಂದ ಧಾರವಾಡ ಹೈಕೋರ್ಟ್

ಕೂಲಿ ಕೆಲಸಕ್ಕಾಗಿ ಆಂಧ್ರದಿಂದ ಚಿಕ್ಕಬಳ್ಳಾಪುರಕ್ಕೆ ಬಂದವ ಈಗ ಕೋಟ್ಯಧೀಶ! ತನಿಖೆಯಲ್ಲಿ ಬಯಲಾಯ್ತು ಸ್ಫೋಟಕ ರಹಸ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × four =
Remember me
