ಬೆಂಗಳೂರು:ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಸಿಕ್ಕಿಬೀಳುವ ಗ್ರಾಹಕರ ವಿರುದ್ಧ ಕಾನೂನು ಕ್ರಮ ಜರುಗಿಸಲು ಅವಕಾಶವಿಲ್ಲ ಎಂದು ಹೈಕೋರ್ಟ್​ ಪುನರುಚ್ಚರಿಸಿದೆ.
ಬೆಂಗಳೂರಿನ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶ ಮಾಡಿದ್ದು, ಅರ್ಜಿದಾರರ ವಿರುದ್ಧ ಮಾನವ ಕಳ್ಳಸಾಗಣೆ ತಡೆ ಕಾಯ್ದೆ ಹಾಗೂ ಐಪಿಸಿ ಸೆಕ್ಷನ್​ 370ರ ಅಡಿ ದಾಖಲಾಗಿದ್ದ ಪ್ರಕರಣ ರದ್ದುಪಡಿಸಿದೆ.
ಗಿರಾಕಿಯಾಗಿ ತೆರಳಿದ್ದ ಅರ್ಜಿದಾರ:ಪ್ರಾಸಿಕ್ಯೂಷನ್​ ಪ್ರಕಾರ, ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ 2021ರ ಸೆ.23ರಂದು ಬಂದ ಖಚಿತ ಮಾಹಿತಿ ಆಧರಿಸಿ ಮಾನವ ಕಳ್ಳಸಾಗಣೆ ತಡೆ ಕಾಯ್ದೆ ಹಾಗೂ ಐಪಿಸಿ ಸೆಕ್ಷನ್​ ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪ್ರಕಿಯೆ ಆರಂಭಿಸಿದ್ದರು. ಮನೆಯೊಂದರ ಮೇಲೆ ದಾಳಿ ನಡೆಸಿದಾಗ ಅಲ್ಲಿ ಅರ್ಜಿದಾರ ವ್ಯಕ್ತಿಯೂ ಇದ್ದರು. ಪೊಲೀಸರು ಶೋಧ ನಡೆಸಿದಾಗ ಅರ್ಜಿದಾರ ವ್ಯಕ್ತಿ ಗ್ರಾಹಕನಾಗಿ ಅಲ್ಲಿಗೆ ತೆರಳಿದ್ದರು ಎಂದುಕೊಂಡರೂ, ವೇಶ್ಯಾಗೃಹದಲ್ಲಿರುವ ಗ್ರಾಹಕನನ್ನು ಕ್ರಿಮಿನಲ್​ ಮೊಕದ್ದಮೆಗಳಿಗೆ ಎಳೆಯಲಾಗುವುದಿಲ್ಲ ಎಂದು ಇದೇ ಹೈಕೋರ್ಟ್​ ಹಲವಾರು ಪ್ರಕರಣಗಳಲ್ಲಿ ಸ್ಪಷ್ಟ ನಿಲುವು ತೆಗೆದುಕೊಂಡಿದೆ ಎಂದು ತಿಳಿಸಿರುವ ಪೀಠ, ಅರ್ಜಿದಾರನ ವಿರುದ್ಧದ ಪ್ರಕರಣ ರದ್ದುಪಡಿಸಿದೆ.
ಹೈಕೋರ್ಟ್​ ಹೇಳಿದ್ದೇನು?:ಮಾನವ ಕಳ್ಳಸಾಗಣೆ ತಡೆ ಕಾಯ್ದೆಯ ಸೆಕ್ಷನ್​ 3ರ ಪ್ರಕಾರ ವೇಶ್ಯಾಗೃಹ ಇಟ್ಟುಕೊಳ್ಳುವುದಕ್ಕೆ ಅಥವಾ ಯಾವುದೇ ಜಾಗವನ್ನು ವೇಶ್ಯಾಗೃಹವಾಗಿ ಬಳಸಲು ಅನುಮತಿ ನೀಡಿದರೆ ಶಿಕ್ಷೆ ವಿಧಿಸಬಹುದಾಗಿದೆ. ಇದೇ ಕಾಯ್ದೆ ಸೆಕ್ಷನ್​ 4ರ ಪ್ರಕಾರ ವೇಶ್ಯಾವಾಟಿಕೆಯಿಂದ ಹಣ ಗಳಿಕೆ ಮಾಡಿ ಜೀವನ ಸಾಗಿಸುವವರಿಗೆ ಶಿಕ್ಷೆ ವಿಧಿಸಬಹುದು. ವೇಶ್ಯಾವಾಟಿಕೆಗಾಗಿ ವ್ಯಕ್ತಿಗಳನ್ನು ಸಾಗಿಸುವುದು, ಪ್ರಚೋದಿಸುವುದು ಅಥವಾ ಕರೆದೊಯ್ಯುವುದಕ್ಕೆ ಶಿಕ್ಷೆ ವಿಧಿಸಲು ಸೆಕ್ಷನ್​ 5ರಲ್ಲಿ ಅವಕಾಶವಿದ್ದು, ಸೆಕ್ಷನ್​ 6ರ ಪ್ರಕಾರ ವೇಶ್ಯಾವಾಟಿಕೆ ನಡೆಯುತ್ತಿರುವ ಸ್ಥಳದಲ್ಲಿ ಯಾವುದೇ ವ್ಯಕ್ತಿಯನ್ನು ಬಂಧಿಸಿಟ್ಟರೆ ಶಿಕ್ಷಿಸಬಹುದು. ಆದರೆ, ಅರ್ಜಿದಾರರು ಈ ಯಾವ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರು ಎಂದು ದೂರಿನಲ್ಲಿ ಹೇಳಲಾಗಿಲ್ಲ. ಆದ್ದರಿಂದ, ಅವರ ವಿರುದ್ಧದ ಪ್ರಕರಣ ಊರ್ಜಿತವಾಗದು ಎಂದು ನ್ಯಾಯಪೀಠ ಹೇಳಿದೆ.
ದೂರುದಾರನಿಗೆ ತನ್ನ ಕಾರನ್ನೇ ಕೊಟ್ಟು PSIಗೆ ಬೆವರಿಳಿಸಿ ಭಾರೀ ಸುದ್ದಿಯಾಗಿದ್ದ ತುಮಕೂರು SPಗೆ ಆತ್ಮಹತ್ಯೆ ಬೆದರಿಕೆ!

ರಾಮನಗರದಲ್ಲಿ ಕಾಂಗ್ರೆಸ್​ ಮುಖಂಡನ ಕೊಲೆ: 49 ದಿನದ ಬಳಿಕ ಬಯಲಾಯ್ತು ಸೊಸೆ ರಹಸ್ಯ

ಸನ್ನಿ ಲಿಯೋನ್​ ಫ್ಯಾನ್ಸ್​ಗೆ ಬಂಪರ್​ ಆಫರ್​ ಕೊಟ್ಟ ಮಂಡ್ಯದ ಯುವಕ! ಆದ್ರೆ ಈ 3 ಷರತ್ತು ಪೂರೈಸಲೇಬೇಕು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − nine =
Remember me
