ಮಂಗಳೂರು:ಭಾರತೀಯ ಕಬಡ್ಡಿ ತಂಡದ ಮಾಜಿ ಆಟಗಾರ, ಏಕಲವ್ಯ ಪ್ರಶಸ್ತಿ ವಿಜೇತ ಉದಯ ಚೌಟ ಅವರು ಶನಿವಾರ ಮುಂಜಾನೆ ಹೃದಯಾಘಾತದಿಂದ ನಿಧನರಾದರು.
ಬಂಟ್ವಾಳ ತಾಲೂಕಿನ ಮಾಣಿಯ ಬದಿಗುಡ್ಡೆಯಲ್ಲಿ ವಾಸವಿದ್ದ ಉದಯ ಚೌಟ, ಬ್ಯಾಂಕ್ ಆಫ್ ಬರೋಡಾದ ಸುರತ್ಕಲ್ ಶಾಖೆಯಲ್ಲಿ ಉಪ ಪ್ರಬಂಧಕರಾಗಿ ಕೆಲಸ ಮಾಡುತ್ತಿದ್ದರು. ಮಾಣಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಪುತ್ತೂರು ಸರ್ಕಾರಿ ಕಾಲೇಜಿನಲ್ಲಿ ಪಿಯುಸಿ, ಪುತ್ತೂರು ಸಂತ ಫಿಲೋಮಿನ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡಿರುವ ಇವರು ವಿದ್ಯಾರ್ಥಿಯಾಗಿದ್ದಾಗಲೇ ಕ್ರೀಡಾಕ್ಷೇತ್ರದಲ್ಲಿ ಅಪಾರ ಆಸಕ್ತಿ ಹೊಂದಿದ್ದರು. ವಾಲಿಬಾಲ್ ಮತ್ತು ಕಬಡ್ಡಿ ಅಂದ್ರೆ ಅವರಿಗೆ ಅತೀವ ಪ್ರೀತಿ.
ವಿದ್ಯಾಭ್ಯಾಸ ಮಾಡುತ್ತಿದ್ದಾಗಲೇ ನಾಲ್ಕು ವರ್ಷ ಅಂತರ್ ಕಾಲೇಜು ಕಬಡ್ಡಿ ಪಂದ್ಯಾಟದಲ್ಲಿ ಜಯಗಳಿಸಿದ್ದ ಉದಯ ಚೌಟ ಅವರು ಅಂತರ್ ವಿಶ್ವವಿದ್ಯಾನಿಲಯಕ್ಕೆ ಸೌತ್‌ಲೈನ್‌ಗೆ ಮಂಗಳೂರು ವಿವಿಯನ್ನು ಮೂರು ವರ್ಷ ಪ್ರತಿನಿಧಿಸಿದ್ದರು. 1993ರಲ್ಲಿ ಜ್ಯೂನಿಯರ್ ನ್ಯಾಷನಲ್‌ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಉದಯ ಚೌಟ, 2000ದಿಂದ 2008ರವರೆಗೆ ರಾಷ್ಟ್ರೀಯ ತಂಡದಲ್ಲಿದ್ದರು. ಬ್ಯಾಂಕ್ ಒಲಿಂಪಿಯಾಡ್ ತಂಡದ ನಾಯಕನಾಗಿ, ಬ್ಯಾಂಕ್ ಸ್ಪೋರ್ಟ್ಸ್ ಬೋರ್ಡ್ ತಂಡದ ನಾಯಕನಾಗಿ ಜವಾಬ್ದಾರಿ ನಿರ್ವಹಿಸಿದ್ದರು. ಇವರಿಗೆ ಹಲವು ಪ್ರಶಸ್ತಿಗಳು ಸಂದಿದ್ದವು.
ಏಕಲವ್ಯ ಪ್ರಶಸ್ತಿ ಪಡೆದ ಜಿಲ್ಲೆಯ ಪ್ರಥಮ ಕಬಡ್ಡಿ ಆಟಗಾರ:2004ರಲ್ಲಿ ಭಾರತ-ಬಾಂಗ್ಲಾ ಟೆಸ್ಟ್ ಕಬಡ್ಡಿ ಪಂದ್ಯಾಟದಲ್ಲಿ 5 ಪಂದ್ಯಗಳನ್ನು ಜಯಿಸಿ ಉದಯ ಚೌಟ ಅವರು ಚಿನ್ನದ ಪದಕ ಪಡೆದಿದ್ದರು. ಕ್ರೀಡೆಯಲ್ಲಿ ಅತ್ಯುತ್ತಮ ಸಾಧನೆಗೆ ಕರ್ನಾಟಕ ಸರ್ಕಾರ ನೀಡುವ ಏಕಲವ್ಯ ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಪ್ರಥಮ ಬಾರಿಗೆ ಪಡೆದ ಹೆಗ್ಗಳಿಕೆ ಅವರದ್ದು. 20 ವರ್ಷಗಳ ಕಾಲ ಕಬಡ್ಡಿ ಜೀವನದಲ್ಲಿ ಅಖಿಲ ಭಾರತ ಮಟ್ಟದಲ್ಲಿ 100ಕ್ಕೂ ಅಧಿಕ, ರಾಜ್ಯಮಟ್ಟದಲ್ಲಿ 300ಕ್ಕೂ ಅಧಿಕ ಪಂದ್ಯಾಟಗಳನ್ನು ಆಡಿದ್ದಾರೆ.
‘ಮಸೀದಿಯಲ್ಲಿ ಸಿಕ್ಕಿದ್ದು ಶಿವಲಿಂಗವಲ್ಲ, ಕಾರಂಜಿ ಕಲ್ಲು! ಡಮರುಗ, ಕಮಲ, ಆನೆ, ಕುದುರೆ… ಹಿಂದೂ ಚಿಹ್ನೆಯಲ್ಲ’

ನೀವು ತಿನ್ನುತ್ತಿರುವ ಎಣ್ಣೆಯಲ್ಲಿ ಸೂರ್ಯಕಾಂತಿಯೂ ಇಲ್ಲ, ಕಡಲೆ ಬೀಜವೂ ಇಲ್ಲ: ಶೋಭಾ ಕರಂದ್ಲಾಜೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × two =
Remember me
