ಬೆಂಗಳೂರು:ನಾನು ಮಾಜಿ ಮುಖ್ಯಮಂತ್ರಿ, ಮತ್ತೆ ಮಂತ್ರಿ ಆಗುವುದಿಲ್ಲ. ಉಳಿದ ಹಿರಿಯರ ವಿಚಾರ ನನಗೆ ಗೊತ್ತಿಲ್ಲ. ನಾನಂತೂ ಸ್ವಾಭಿಮಾನ ಹಾಗೂ ಗೌರವದ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಜಗದೀಶ ಶೆಟ್ಟರ್​, ಬಸವರಾಜ ಬೊಮ್ಮಾಯಿ‌ ಅವರ ಸಚಿವ ಸಂಪುಟದಲ್ಲಿ ನಾನು ಸೇರಲ್ಲ ಎಂಬುದು ನನ್ನ ವೈಯಕ್ತಿಕ ನಿರ್ಧಾರ. ಇದು ಅಚಲವಾಗಿದ್ದು, ನನ್ನ ಈ ತೀರ್ಮಾನಕ್ಕೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಇನ್ಮುಂದೆ ಶಾಸಕನಾಗಿ ಕೆಲಸ ಮಾಡುವೆ. ವರಿಷ್ಠರು ಅವಕಾಶ ನೀಡಿದರೆ ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವೆ. ಯಡಿಯೂರಪ್ಪ ಹಾಗೂ ನಾನು ಒಟ್ಟಿಗೆ ಪಕ್ಷ ಕಟ್ಟುವ ಕೆಲಸದಲ್ಲಿ ಭಾಗಿಯಾಗಿದ್ದೆವು. ಹಾಗಾಗಿ ಅವರ ನೇತೃತ್ವದ ಸಂಪುಟದಲ್ಲಿ ಮಂತ್ರಿಯಾಗಿದ್ದೆ. ಆಗ ಯಾವುದೇ ಮುಜುಗರ ಉಂಟಾಗಲಿಲ್ಲ ಎಂದು ಶೆಟ್ಟರ್ ಸ್ಪಷ್ಟಪಡಿಸಿದರು.
ಪಕ್ಷದ ರಾಜ್ಯಾಧ್ಯಕ್ಷ, ವಿಧಾನಸಭೆ ಸ್ಪೀಕರ್, ಮಂತ್ರಿ, ಮುಖ್ಯಮಂತ್ರಿ… ಹೀಗೆ ಹಲವಾರು ಸ್ಥಾನಮಾನವನ್ನು ಪಕ್ಷ ನನಗೆ ನೀಡಿದೆ. ಯಾವುದೇ ಬೇಸರ ಅಥವಾ ಇನ್ನಾವುದೇ ಉದ್ದೇಶದಿಂದ ಬೊಮ್ಮಾಯಿ ಸಚಿವ ಸಂಪುಟಕ್ಕೆ ಸೇರದಿರುವ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಜಗದೀಶ ಶೆಟ್ಟರ್ ಸಮಜಾಯಿಷಿ ನೀಡಿದರು.
ಸಿಎಂ ಬೆಂಗಾವಲು ವಾಹನಕ್ಕೆ ಮಾಜಿ ಸಚಿವ ಶಿವರಾಮ್​ ಹೆಬ್ಬಾರ್​ ಕಾರು ಡಿಕ್ಕಿ!

ಕಿಡ್ನ್ಯಾಪ್‌ ಆಗಿದ್ದ ಕೇರಳ ಯುವಕನನ್ನು ಪ್ರಾಣದ ಹಂಗು ತೊರೆದು ಕಾಪಾಡಿದ ಹಾಸನ ಪೊಲೀಸರು! ವಿಡಿಯೋ ವೈರಲ್​

ಬೊಮ್ಮಾಯಿ ಸಂಪುಟದಲ್ಲಿ ಯಾರಿಗೆ ಕೊಕ್​? ಸಂಭಾವ್ಯ ಸಚಿವರ EXCLUSIVE ಪಟ್ಟಿ ಇಲ್ಲಿದೆ

ಗಂಡನಿಗೆ ಹಣದಾಹ, ಮಾವನಿಗೆ ಕಾಮದಾಹ… ಪೊಲೀಸರ ಮುಂದೆ ನರಕಯಾತನೆ ಬಿಚ್ಚಿಟ್ಟ ಯುವತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − seven =
Remember me
