ಮೈಸೂರು:ಚಾಮರಾಜಪೇಟೆ ಶಾಸಕ ಜಮೀರ್​ ಅಹ್ಮದ್​ ಅವರ ಮನೆ, ಪ್ಲ್ಯಾಟ್​, ಕಚೇರಿ, ಗೆಸ್ಟ್​ಹೌಸ್​ ಮೇಲೆ ಗುರುವಾರ ಇಡಿ(ಜಾರಿ ನಿರ್ದೇಶನಾಲಯ) ಅಧಿಕಾರಿಗಳು ದಾಳಿ ಮಾಡಿದ್ದು, ಮಹತ್ವದ ದಾಖಲೆಗಳನ್ನ ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ. ಇತ್ತ ಈ ದಾಳಿ ಕುರಿತು ಮೈಸೂರಿನಲ್ಲಿ ಶುಕ್ರವಾರ ಸಚಿವ ಎಸ್​.ಟಿ. ಸೋಮಶೇಖರ್​ ಸ್ಫೋಟಕ ಹೇಳಿಕೆ ಕೊಟ್ಟಿದ್ದು, ಡಿಕೆಶಿಯತ್ತ ಕೈ ತೋರಿದ್ದಾರೆ.
ಸಿದ್ದರಾಮಯ್ಯ ಮುಂದಿನ ಸಿಎಂ ಎಂದು ಜಮೀರ್ ಅಹಮ್ಮದ್ ಪದೇಪದೆ ಹೇಳುತ್ತಿದ್ದರು. ಇದು ಡಿ.ಕೆ.ಶಿವಕುಮಾರ್‌ಗೆ ಅಜೀರ್ಣವಾಗಿರಬೇಕು. ಡಿಕೆಶಿಗೆ ಐಟಿ, ಇಡಿ ಲಿಂಕ್ ಜಾಸ್ತಿ ಇದೆ. ಹಾಗಾಗಿ ಅವರೇ ಏಕೆ ಜಮೀರ್ ಮನೆ ಮೇಲೆ ದಾಳಿ ಮಾಡಿಸಿರಬಾರದು? ಎಂದು ಸೋಮಶೇಖರ್​ ಹೇಳಿದ್ದಾರೆ.
ಬಿಜೆಪಿ ಇಂತಹ ದಾಳಿ ಮಾಡಿಸುತ್ತಿದೆ ಎಂದು ಕಾಂಗ್ರೆಸ್ ಹೇಳಿದ್ರೆ, ನಾವು ಡಿಕೆಶಿ ಮೇಲೆಯೇ ಹೀಗೆ ಬೆರಳು ಮಾಡಬಹುದಲ್ವಾ? ಐಟಿ ಮತ್ತು ಇಡಿ ಅವರು ತಮ್ಮ ಕೆಲಸ ಮಾಡುತ್ತಾರೆ. ವ್ಯವಹಾರಗಳು ಸರಿ ಇದ್ದಾಗ, ಯಾರೊಬ್ಬರೂ ಅದಕ್ಕೆ ಹೆದರುವ ಅಗತ್ಯವಿಲ್ಲ. ಐಟಿ, ಇಡಿ ಅಧಿಕಾರಿಗಳಿಗೆ ದಾಖಲೆ ಕೊಟ್ಟರೆ ಸಾಕು. ಆದರೆ ಇವರದ್ದನ್ನು ನೋಡಿದ್ರೆ ಏನೋ ವ್ಯವಹಾರ ಸರಿ ಇಲ್ಲ ಅನ್ನಿಸುತ್ತದೆ ಸೋಮಶೇಖರ್​ ಹೇಳಿದರು.
ಕಣ್ಣು ಕುಕ್ಕುವಂತಿದೆ ಶಾಸಕ ಜಮೀರ್‌ ಬಂಗಲೆ! ಅರೇಬಿಯನ್‌ ಶೈಲಿಯ ಅರಮನೆಗೆ ಚಿನ್ನದ ಲೇಪನ…

ಒಂದೇ ಮನೆಯಲ್ಲಿದ್ದರು ಪತ್ನಿ-ಪತಿ-ಸ್ನೇಹಿತ! ಪೊಲೀಸರ ಮುಂದೆ ಬಯಲಾಯ್ತು ಚೆಂದುಳ್ಳಿ ಚೆಲುವೆಯ ಅಸಲಿ ಮುಖ

ಬಿಜೆಪಿಗೆ ಬಂದ ಶಾಸಕ ಮಹೇಶ್​ಗೆ ವೇದಿಕೆಯಲ್ಲೇ ಸಿಹಿ ಸುದ್ದಿ ಕೊಟ್ಟ ಬಿಎಸ್​ವೈ!

ಹುಟ್ಟುಹಬ್ಬದ ದಿನವೇ ರಾಜಕೀಯಕ್ಕೆ ವಿದಾಯ ಘೋಷಿಸಿದ ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 1 =
Remember me
