ಬೆಂಗಳೂರು:ಎರಡು ದಿನಗಳ ಕಾಲ ಕರ್ನಾಟಕ ಪ್ರವಾಸ ಕೈಗೊಂಡಿದ್ದ ಜಮ್ಮು-ಕಾಶ್ಮೀರದ ನೋಂದಣಿ ಇಲಾಖೆ ಅಧಿಕಾರಿಗಳು ಇಲ್ಲಿನ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾರ್ಯ ವೈಖರಿ ಬಗ್ಗೆ ಖುದ್ದು ಮಾಹಿತಿ ಪಡೆದರು.
ಮೇ 10 ಮತ್ತು 11 ರಂದು ಕರ್ನಾಟಕದಲ್ಲೇ ಇದ್ದ ಜಮ್ಮು-ಕಾಶ್ಮೀರದ ನೋಂದಣಿ ಇಲಾಖೆ ಅಧಿಕಾರಿಗಳಿಗೆ ಕರ್ನಾಟಕದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಕಾರ್ಯ ವಿಧಾನಗಳ ಬಗ್ಗೆ ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರಾದ ಡಾ. ಬಿ.ಆರ್​.ಮಮತಾ ಮಾರ್ಗದರ್ಶನದಲ್ಲಿ ಮಾತಿ ನೀಡಲಾಯಿತು. ಆಡಳಿತ, ನೋಂದಣಿ, ಮುದ್ರಾಂಕ, ಮಾರುಕಟ್ಟೆ ಮೌಲ್ಯ, ಕಾನೂನು, ತಪಾಸಣೆ, ಗಣಕೀಕರಣ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ಜಮ್ಮು ಕಾಶ್ಮೀರದ ಅಧಿಕಾರಿಗಳೊಂದಿಗೆ ಮಾಹಿತಿ ವಿನಿಮಯ ಮಾಡಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಗಾಂಧಿನಗರ ಉಪನೋಂದಣಿ ಕಚೇರಿಗೂ ಭೇಟಿ ನೀಡಿದ ಜಮ್ಮು-ಕಾಶ್ಮೀರದ ನೋಂದಣಿ ಇಲಾಖೆ ಅಧಿಕಾರಿಗಳಿಗೆ ನೋಂದಣಿ ಪ್ರಕ್ರಿಯೆ, ಹಳೆಯ ಕಡತಗಳ ಡಿಜಿಟಲೀಕರಗಳ ಬಗ್ಗೆ ವಿವರಿಸಲಾಯಿತು. ಕರ್ನಾಟಕದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾರ್ಯ ವಿಧಾನ ಮತ್ತು ಡಿಜಿಟಲೀಕರಗಳ ಬಗ್ಗೆ ಜಮ್ಮು ಕಾಶ್ಮೀರದ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ತಾಳಿ ಕಟ್ಟಿಸಿಕೊಂಡ ಮರುಕ್ಷಣವೇ ಪರೀಕ್ಷಾ ಕೇಂದ್ರಕ್ಕೆ ದೌಡಾಯಿಸಿದ ಮದುಮಗಳು! ಮಂಡ್ಯ ಯುವತಿಯ ನಡೆಗೆ ಎಲ್ಲೆಡೆ ಮೆಚ್ಚುಗೆ
ದಾಖಲೆ ಬರೆದ ಕೆಂಪಡಕೆ ಬೆಲೆ! ಅಡಕೆ ಬೆಳೆಗಾರರ ಮೊಗದಲ್ಲಿ ಸಂತಸ
ಬಿಕಿನಿ ಧರಿಸಿಕೊಂಡೇ ಬರ್ತ್​ ಡೇ ಕೇಕ್​ ಕತ್ತರಿಸಿದ ಆಮಿರ್​ ಖಾನ್​ ಪುತ್ರಿ ಇರಾ! ಫೋಟೋ ವೈರಲ್​, ನೆಟ್ಟಿಗರಿಂದ ಬಗೆಬಗೆಯ ಕಮೆಂಟ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + twenty =
Remember me
