ಬೆಂಗಳೂರು:ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿರುವ “ಜನಸ್ಪಂದನ” ಕಾರ್ಯಕ್ರಮಕ್ಕೆ ಜನಸಾಗರವೇ ಹರಿದುಬಂದಿದ್ದು, ಬಿಜೆಪಿ ಶಕ್ತಿ ಪ್ರದರ್ಶನ ಅನಾವರಣಗೊಂಡಿದೆ. ಪುಷ್ಪಾರ್ಚನೆ ಮಾಡುವ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ದಿವಂಗತ ಉಮೇಶ್​ ಕತ್ತಿ ಮತ್ತು ಪ್ರವೀಣ್​ ನೆಟ್ಟಾರು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಕೇಂದ್ರ ಸಚಿವೆ ಸ್ಮೃತಿ ಇರಾನಿ, ಹಿರಿಯ ನಾಯಕರಾದ ಸದಾನಂದಗೌಡ, ಶೋಭಾ ಕರಂದ್ಲಾಜೆ, ಆರಗ ಜ್ಞಾನೇಂದ್ರ, ಎಂಟಿಬಿ ನಾಗರಾಜ್, ಮುನಿರತ್ನ, ಗೋಪಾಲಯ್ಯ, ಶ್ರೀರಾಮುಲು, ಅಂಗಾರ, ನಾರಾಯಣ ಸ್ವಾಮಿ, ಸಿ.ಟಿ.ರವಿ, ನಳಿನ್ ಕುಮಾರ್ ಕಟೀಲ್, ಆರ್​. ಅಶೋಕ್​, ಬಿ.ವೈ.ವಿಜಯೇಂದ್ರ, ಬಿಡಿಎ ಅಧ್ಯಕ್ಷ ವಿಶ್ವನಾಥ್, ಬಿಜೆಪಿ ಶಾಸಕರು ಮತ್ತು ಸಂಸದರು ಸೇರಿದಂತೆ ಹಲವು ಮುಖಂಡರು ಪಾಲ್ಗೊಂಡಿದ್ದಾರೆ.
ಸಮಾವೇಶ ಆರಂಭದಲ್ಲೇ ವೇದಿಕೆಯಲ್ಲಿ ಮಾತು ಆರಂಭಿಸಿದ ಡಾ.ಕೆ.ಸುಧಾಕರ್, ಬಿ.ಎಸ್​.ಯಡಿಯೂರಪ್ಪ ಅವರೇ ನಮ್ಮ ಪರಮೋಚ್ಛ ನಾಯಕ ಎಂದು ಪ್ರತಿಪಾದಿಸಿದರು. ‘ಬಾಳಿಗೊಂದು ಎಲ್ಲೆ ಎಲ್ಲಿದೆ..’ ಎಂಬ ಹಾಡನ್ನು ಹೇಳುತ್ತಾ ಡಿಕೆಶಿ ಮತ್ತು ಸಿದ್ದರಾಮಯ್ಯ ಅವರ ಕನಸು ಎಂದೂ ಈಡೇರುವುದಿಲ್ಲ. ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬರಲ್ಲ ಎಂದು ಹಾಸ್ಯಭರಿತವಾಗಿ ಹೇಳಿದರು.
LIVE| ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ: ಜನಸ್ಪಂದನ ಸಮಾವೇಶದ ನೇರ ಪ್ರಸಾರ

ಬೆಂಗ್ಳೂರಲ್ಲಿ 14 ವರ್ಷದ ಬಾಲಕಿಯನ್ನ ಮದ್ವೆಯಾದ 45 ವರ್ಷದ ಅಂಕಲ್​! ಮದ್ವೆಯಾದ 3 ದಿನದಲ್ಲೇ ಆಯ್ತು ತಕ್ಕಶಾಸ್ತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − 1 =
Remember me
