ಹಾಸನ:ಪೊಲೀಸ್​ ಠಾಣೆಗೆ ನುಗ್ಗಿ ಕರ್ತವ್ಯನಿರತ ಮಹಿಳಾ ಪಿಎಸ್ಐ ಮೇಲೆ ಗ್ರಾಮ ಪಂಚಾಯಿತಿ‌ ಸದಸ್ಯರೊಬ್ಬರ ಅವಾಚ್ಯವಾಗಿ ನಿಂದಿಸಿ ಹಲ್ಲೆಗೆ ಯತ್ನಿಸಿದ್ದಾರೆ ಎಂದು ಜಾವಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೇರ್ಲಿಗೆ ಗ್ರಾಮ ಪಂಚಾಯಿತಿ ಸದಸ್ಯ ಶ್ರೀನಿವಾಸ್‌ ವಿರುದ್ಧ ಜಾವಗಲ್ ಠಾಣೆ ಪಿಎಸ್‌ಐ ಶೋಭ ಭರಮಕ್ಕನವರ್ ದೂರು ನೀಡಿದ್ದಾರೆ.
ಇಸ್ಪಿಟ್ ಅಡ್ಡೆ ಮೇಲೆ ದಾಳಿ ಮಾಡಿ ಕೆಲವರನ್ನು ಪಿಎಸ್‌ಐ ಶೋಭ ಭರಮಕ್ಕನವರ್ ಬಂಧಿಸಿದ್ದರು. ಈ ವಿಚಾರವಾಗಿ ಗುರುವಾರ ರಾತ್ರಿ ಏಕಾಏಕಿ ಪೊಲೀಸ್​ ಠಾಣೆಗೆ ಆಗಮಿಸಿದ ಶ್ರೀನಿವಾಸ್​, ನನ್ನ ಕಡೆಯವರನ್ನ ಈ ಕೇಸ್​ನಿಂದ ಹೊರಗಿಡಬೇಕು. ಸುಳ್ಳು ಹೇಳಿ ಅವರನ್ನ ಈ ಪ್ರಕರಣದಲ್ಲಿ ಸಿಲುಕಿಸಿದ್ದೀಯಾ? ಅದ್ಹೇನ್​ ಮಾಡ್ಕೋತ್ತೀಯಾ ಮಾಡ್ಕೋ, ನಾನು ಗ್ರಾಪಂ ಸದಸ್ಯ… ನೀನು ಪಿಎಸ್​ಐ ಅಂದಾಕ್ಷಣ ಹೆದರಲ್ಲ… ಎಂದು ಏಕವಚನದಲ್ಲೇ ಅವಾಚ್ಯವಾಗಿ ನಿಂದಿಸಿ, ಬಟ್ಟೆ ಹಿಡಿದು ಎಳೆದಾಡಿ ಹಲ್ಲೆಗೆ ಯತ್ನಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಇವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಶೋಭಾ ದೂರಿನಲ್ಲಿ ವಿವರಿಸಿದ್ದಾರೆ.
ಹಸು ಮೇಯಿಸಿಕೊಂಡು ಮನೆಗೆ ತೆರಳುತ್ತಿದ್ದ ಚನ್ನಪಟ್ಟಣದ ರೈತ ದಂಪತಿ ದುರಂತ ಅಂತ್ಯ

ಆಂಬುಲೆನ್ಸ್​ನಲ್ಲಿ 25.80 ಕೋಟಿ ರೂಪಾಯಿ ಮೌಲ್ಯದ ನಕಲಿ ನೋಟು ಪತ್ತೆ! ಪೊಲೀಸರೇ ಶಾಕ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 5 =
Remember me
