ಬೆಂಗಳೂರು:ರಾಜ್ಯ ಸರ್ಕಾರಕ್ಕೆ ಮೀಸಲಾತಿಯ ಮತ್ತೊಂದು ಸಂಕಟ ಎದುರಾಗಲಿದೆ. ‘ಮಾಡು ಇಲ್ಲವೆ ಮೀಸಲಾತಿ ಪಡೆದು ಮಡಿ’ ಎಂಬ ಘೋಷವಾಕ್ಯದೊಂದಿಗೆ ವಿಧಾನಸೌಧದ ಮುಂದೆ ಪಂಚಮಸಾಲಿ ಸಮುದಾಯ ಹೋರಾಟ ನಡೆಸಲು ಸಜ್ಜಾಗಿದೆ.
ಈ ಕುರಿತು ಗುರುವಾರ ಸುದ್ದಿಗೋಷ್ಠಿ ನಡೆಸಿದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ, ಬೇರೆ ಸಮುದಾಯದ ಮೀಸಲಾತಿ ಕಿತ್ತು ಕೊಡಿ ಎಂದು ನಾವು ಕೇಳುತ್ತಿಲ್ಲ. ನಮ್ಮ‌ ಬೇಡಿಕೆ ಸ್ಪಷ್ಟವಾಗಿದೆ. ಪಂಚಮಸಾಲಿಗೆ 2ಎ ಮೀಸಲಾತಿ ಬೇಕೆಂದು ಹೋರಾಟ ‌ಮಾಡುತ್ತಾ ಬಂದಿದ್ದೇವೆ. ನಮ್ಮ ಬೇಡಿಕೆಗೆ ಸರ್ಕಾರದಿಂದ ಸರಿಯಾದ ಸ್ಪಂದನೆ ಸಿಕ್ಕಿಲ್ಲ. ಆ ಆಕ್ರೋಶ ಸಮುದಾಯದಲ್ಲಿದೆ. ಬಿ.ಎಸ್​.ಯಡಿಯೂರಪ್ಪ ಅವರು ಸೆಪ್ಟೆಂಬರ್ ಒಳಗೆ ಮೀಸಲಾತಿ ಕೊಡುವ ಭರವಸೆ ನೀಡಿದ್ದರು. ಆದರೆ ಅವರು ಸಿಎಂ ಸ್ಥಾನದಿಂದ ಕೆಳಗಿಳಿದರು. ಬಸವರಾಜ ಬೊಮ್ಮಾಯಿ ಕೂಡ ನಾಲ್ಕು ಬಾರಿ ಮಾತು ಕೊಟ್ಟು ತಪ್ಪಿದ್ದಾರೆ. ಸರ್ವಪಕ್ಷಗಳ ಸಭೆ ಕರೆಯುವುದಾಗಿ ಸಿಎಂ ಸದನದಲ್ಲಿ ಹೇಳಿದ್ದರು. ಆದರೆ ಎಸ್​ಸಿ- ಎಸ್ಟಿ ಸಮುದಾಯದ ಮೀಸಲಾತಿ ಬಗ್ಗೆ ಮಾತ್ರ ಸರ್ವಪಕ್ಷ ಸಭೆ ಕರೆದಿದ್ದಾರೆ. ನಮ್ಮ ಬೇಡಿಕೆಯನ್ನು ಕಡೆಗಣಿಸಲಾಗಿದೆ ಎಂದು ಅಸಮಾಧಾನ ಹೊರಹಾಕಿದರು.
ಅ.21ರಂದು ಈ ಬಗ್ಗೆ ಹುಕ್ಕೇರಿಯಲ್ಲಿ ಸಮುದಾಯದ ಸಮಾವೇಶ ಕರೆಯಲಾಗಿದೆ. ಮೀಸಲಾತಿ ಕೊಡುತ್ತೀರಾ ಅಥವಾ ಇಲ್ಲವೋ ಎಂಬುದನ್ನು ಸಿಎಂ ಸ್ಪಷ್ಟ ನಿಲುವು ಪಡಿಸಬೇಕು. 2ಎ ಮೀಸಲಾತಿ ನೀಡದಿದ್ದರೆ ಪಂಚಮಸಾಲಿ ಸಮುದಾಯದ 25 ಲಕ್ಷ ಜನರು ವಿಧಾನಸೌಧದ ಮುಂದೆ ಧರಣಿ ಕೂರುತ್ತಾರೆ. ವಿಧಾನಸೌಧದ ಮುಂದೆ ಧರಣಿ ನಡೆಸುವ ದಿನಾಂಕವನ್ನು ಅ.21ರ ಸಮಾವೇಶದಲ್ಲಿ ಪ್ರಕಟಿಸಲಾಗುವುದು ಎಂದು ಸರ್ಕಾರಕ್ಕೆ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಸಿದ್ದಾರೆ.
ಮುಸ್ಲಿಂ ಸಮುದಾಯದ ಮೀಸಲಾತಿ ಕಿತ್ತು ಪಂಚಮಸಾಲಿ ಸಮುದಾಯಕ್ಕೆ ನೀಡೋದು ಬೇಡ. ನಾವು 3ಬಿನಲ್ಲಿ ಈಗ ಇದ್ದೇವೆ. ನಮ್ಮನ್ನು 2ಎ ಗೆ ಸೇರಿಸಬೇಕು ಎಂದು ಆಗ್ರಹಿಸಿದರು.
ರಾಜ್ಯಾದ್ಯಂತ ‘ಪುನೀತ್ ಫುಡ್ ಫೆಸ್ಟಿವಲ್’! ಅಪ್ಪು ಇಷ್ಟಪಡುತ್ತಿದ್ದ ಎಲ್ಲ ರೀತಿಯ ಆಹಾರ ಸವಿಯಲು ಫ್ಯಾನ್ಸ್​ಗೆ ಅವಕಾಶ

ಮಂಗಳೂರಲ್ಲಿ ಡೆತ್​ನೋಟ್​ ಬರೆದಿಟ್ಟು ಗುಂಡು ಹಾರಿಸಿಕೊಂಡ ಮಹಿಳಾ ಪಿಎಸ್​ಐ! ಸ್ಥಿತಿ ಗಂಭೀರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 2 =
Remember me
