ತುಮಕೂರು:ಗುಬ್ಬಿ ಶಾಸಕ ಶ್ರೀನಿವಾಸ್ ಮನೆ ಮುಂದೆ ಪರ-ವಿರೋಧ ಪ್ರತಿಭಟನೆ ನಡೆಯುತ್ತಿದ್ದು, ಪ್ರತಿಭಟನಾಕರನ್ನು ತಡೆಯಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದ್ದಕ್ಕೆ ಶುಕ್ರವಾರ ಗರಂ ಆದ ಎಚ್​ಡಿಕೆ, ವಾಸು ವಿರುದ್ಧ ವಾಗ್ದಾಳಿ ನಡೆಸಿದ್ದರು. ಪಕ್ಷ ದ್ರೋಹ ಮಾಡಿದ್ದಾರೆ ಎಂದು ಕಿಡಿಕಾರಿದ್ದರು. ಈ ವಿಚಾರವಾಗಿ ಶನಿವಾರ ಬೆಳಗ್ಗೆ ತುಮಕೂರು ಜೆಡಿಎಸ್ ಜಿಲ್ಲಾಧ್ಯಕ್ಷ ಆಂಜಿನಪ್ಪ ನೇತೃತ್ವದಲ್ಲಿ ಕಾರ್ಯಕರ್ತರು ತುಮಕೂರಿನ ವಿದ್ಯಾ ನಗರದಲ್ಲಿರುವ ಶ್ರೀನಿವಾಸ್ ಮನೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಅತ್ತ ಶ್ರೀನಿವಾಸ್ ಬೆಂಬಲಿಗರೂ ಪರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಪ್ರತಿಭಟನೆಯಲ್ಲಿ ವಾಸು ಬೆಂಬಲಿಗರು ಹಾಗೂ ಜೆಡಿಎಸ್ ಮುಖಂಡರ ನಡುವೆ ವಾಕ್ಸಮರ ನಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಬ್ಯಾರಿಕೇಡ್ ಹಾಕಿ ಪೊಲೀಸರು ಭದ್ರತೆ ನೀಡಿದ್ದಾರೆ. ಶ್ರೀನಿವಾಸ್ ವಿರುದ್ಧ ಒಂದು ಕಡೆ ಧಿಕ್ಕಾರ ಕೂಗುತ್ತಿದ್ದರೆ, ಮತ್ತೊಂದು ಕಡೆ ಕುಮಾರಸ್ವಾಮಿ ವಿರುದ್ಧ ಧಿಕ್ಕಾರ ಕೂಗಲಾಗುತ್ತಿದೆ. ತುಮಕೂರಿನ ಮನೆ ಬಳಿಯೇ ಶ್ರೀನಿವಾಸ್ ಇದ್ದಾರೆ.
ವೈದ್ಯರ ಸಲಹೆ ಮೇರೆಗೆ ಎಚ್​ಡಿಕೆ ವಿಶ್ರಾಂತಿ: ಒಂದು ವಾರ ಸಾರ್ವಜನಿಕರ ಭೇಟಿಗಿಲ್ಲ ಅವಕಾಶ

ಹೈಕೋರ್ಟ್​ನಲ್ಲಿ ಬಯಲಾಯ್ತು ತಾಯಿ-ಮಗಳ ಕಳ್ಳಾಟ! ಮ್ಯಾಟ್ರಿಮೋನಿಯಲ್​ ಮೂಲಕ ಪರಿಚಯ, ಮದ್ವೆ… ಬಳಿಕ ನಡೆದದ್ದೇ ಬೇರೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + six =
Remember me
