ಬೆಂಗಳೂರು:ಜನವರಿ ಕೊನೆಯ ವಾರದಲ್ಲಿ ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಉದ್ಯೋಗ ಮೇಳ ಆಯೋಜಿಸಲು ಸರ್ಕಾರ ಉದ್ದೇಶಿಸಿದೆ.ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಉನ್ನತ ಮಟ್ಟದ ಸಭೆ ನಡೆಸಿ, ಸೂಚನೆಗಳನ್ನು ನೀಡಿದರು. ಪ್ರಮುಖವಾಗಿ ಮೇಳವನ್ನು ಪರಿಣಾಮಕಾರಿಯಾಗಿ ಆಯೋಜಿಸಲು ಸಚಿವರ ತಂಡವನ್ನು ರಚಿಸುವ ತೀರ್ಮಾನ ಕೈಗೊಂಡರು.ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ, ಐಟಿ, ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಕೌಶಲ್ಯಾಭಿವೃದ್ಧಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ಯುವ ಸಬಲೀಕರಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ, ಕಾರ್ಮಿಕ ಸಚಿವ ಸಂತೋಷ್ ಲಾಡ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರನ್ನೊಳಗೊಂಡ ಸಚಿವರ ತಂಡ ರಚಿಸುವ ತೀರ್ಮಾನವನ್ನು ಸಿಎಂ ಪ್ರಕಟಿಸಿದರು.ಈ ತಂಡವು ಉದ್ಯೋಗದಾತರೊಂದಿಗೆ ಸಭೆ ನಡೆಸಿ ಈ ಕುರಿತು ಚರ್ಚಿಸಿ ಅವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಹಾಗೂ ವಿದೇಶದಲ್ಲಿರುವ ಉದ್ಯೋಗಾವಕಾಶಗಳ ಕುರಿತೂ ಸಹ ಪರಿಶೀಲಿಸಲು ಮುಖ್ಯಮಂತ್ರಿಗಳು ಸೂಚಿಸಿದರು.ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಉದ್ಯೋಗ ಮೇಳ ಆಯೋಜಿಸಲಾಗುವುದು. ಕೈಗಾರಿಕೆಗಳೊಂದಿಗೆ ಚರ್ಚಿಸಿ, ಉದ್ಯೋಗಾಕಾಂಕ್ಷಿಗಳ ಕೌಶಲ್ಯ ಹಾಗೂ ಕೈಗಾರಿಕೆಗಳ ಅಗತ್ಯತೆಯ ನಡುವಿನ ಅಂತರ ಸರಿಪಡಿಸುವ ಬಗ್ಗೆ ದೂರಗಾಮಿ ಕಾರ್ಯಕ್ರಮಗಳನ್ನು ರೂಪಿಸುವ ಬಗ್ಗೆಯೂ ಶಿಫಾರಸುಗಳನ್ನು ಮಾಡುವಂತೆ ಸಚಿವರ ತಂಡಕ್ಕೆ ತಿಳಿಸಿದರು.ಇದಲ್ಲದೆ ರಾಜ್ಯದ ಯುವಕರಿಗೆ ಉದ್ಯೋಗಾವಕಾಶಗಳನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಉದ್ಯೋಗ ನೀತಿಯನ್ನು ಹೊಂದುವ ಅಗತ್ಯವಿದೆ. ಈ ನೀತಿಯನ್ನು ರೂಪಿಸಲು ಸಿದ್ಧತೆ ನಡೆಸುವಂತೆ ಮುಖ್ಯಮಂತ್ರಿಗಳು ತಿಳಿಸಿದರು.ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ. ಜಿ. ಪರಮೇಶ್ವರ ಸೇರಿಂದತೆ ಆರು ಸಚಿವರು, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕಚಂದ್ರ ಹಾಗೂ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + two =
Remember me
