ಬಳ್ಳಾರಿ ಜಿಲ್ಲಾ ಮತ್ತು ಸೆಷನ್ಸ್​ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ 33 ಜವಾನ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್​ಲೈನ್​ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಇತರ ಯಾವುದೇ ಮೂಲದಿಂದ ಬಂದ ಅರ್ಜಿಗಳಿಗೆ ಮಾನ್ಯತೆ ಇಲ್ಲ ಎಂದು ತಿಳಿಸಲಾಗಿದೆ. ಆಯಾ ಸ್ಥಾನಕ್ಕೆ ಮೀಸಲಾತಿ ಅಭ್ಯರ್ಥಿಗಳು ಇರದಿದ್ದರೆ ಇತರ ಅರ್ಹ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುವುದು. ಈ ಹುದ್ದೆಗಳು ಹೈದರಾಬಾದ್​- ಕರ್ನಾಟಕ ಸ್ಥಳೀಯ ವೃಂದದ ಹುದ್ದೆಗಳಾಗಿವೆ.
ಅರ್ಹತಾ ಮಾನದಂಡ:10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕನ್ನಡ ಭಾಷೆಯನ್ನು ಓದುವ ಮತ್ತು ಬರೆಯುವ ಸಾಮರ್ಥ್ಯ ಹೊಂದಿರಬೇಕು. ಕನ್ನಡ ಭಾಷೆ ಓದಲು, ಬರೆಯಲು ಬರುವುದೇ ಎಂದು ಪರೀಕ್ಷೆ ನಡೆಸಲಾಗುವುದು. ಸಾಮಾನ್ಯವರ್ಗದ ಅಭ್ಯರ್ಥಿಗೆ ಗರಿಷ್ಠ 35 ವರ್ಷ, ಎಸ್ಸಿ, ಎಸ್ಟಿ, ಪ್ರವರ್ಗ 1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ, ಉಳಿದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ವೇತನ ಹಾಗೂ ಮೀಸಲಾತಿ:ಮಾಸಿಕ 17,000 ರೂ. ನಿಂದ 28,950 ರೂ. ಮಾಸಿಕ ವೇತನ ಇರಲಿದೆ. ಎಸ್ಸಿಗೆ 5 ಸ್ಥಾನ, ಎಸ್ಟಿಗೆ 1, ಪ್ರವರ್ಗ 1ಕ್ಕೆ 1, ಪ್ರವರ್ಗ 2ಎಗೆ 4, 2ಬಿಗೆ 1, 3ಎಗೆ 2, 3ಬಿಗೆ 2 ಹಾಗೂ ಸಾಮಾನ್ಯ ಅಭ್ಯರ್ಥಿಗೆ 17 ಸ್ಥಾನಗಳನ್ನು ಮೀಸಲಿರಿಸಲಾಗಿದ್ದು, ಇದರಲ್ಲಿ ಮಹಿಳಾ ಅಭ್ಯರ್ಥಿ, ಗ್ರಾಮೀಣ, ಕನ್ನಡ ಮಾಧ್ಯಮ, ಯೋಜನಾ ನಿರಾಶ್ರಿತ, ಮಾಜಿ ಸೈನಿಕ, ಅಂಗವಿಕಲ ಅಭ್ಯರ್ಥಿಗಳಿಗೆ ಸ್ಥಾನ ಕಾಯ್ದಿರಿಸಲಾಗಿದೆ.
ಅರ್ಜಿ ಶುಲ್ಕ:ಸಾಮಾನ್ಯ ಅಭ್ಯರ್ಥಿಗೆ 200 ರೂ., ಇತರ ಅಭ್ಯರ್ಥಿಗಳಿಗೆ 100 ರೂ. ನಿಗದಿಯಾಗಿದ್ದು, ಪರಿಶಿಷ್ಟ ಜಾತಿ, ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ನಿಗದಿತ ಶುಲ್ಕವನ್ನು ವೆಬ್​ಸೈಟ್​ನಲ್ಲಿ ನೀಡಲಾದ ಲಿಂಕ್​ ಮೂಲಕ ಆನ್​ಲೈನ್​ನಲ್ಲಿ ನೆಟ್​ ಬ್ಯಾಂಕಿಂಗ್​ ಅಥವಾ ಕ್ರೆಡಿಟ್​ ಕಾರ್ಡ್​ ಮೂಲಕ ಪಾವತಿಸತಕ್ಕದ್ದು.
ಆಯ್ಕೆ ವಿಧಾನ:ಶೈಕ್ಷಣಿಕ ಅಂಕ ಆಧಾರದ ಮೇಲೆ 1:10ರ ಅನುಪಾತದಲ್ಲಿ ಸಂದರ್ಶನಕ್ಕೆ ಆಹ್ವಾನಿಸಲಾಗುವುದು. ಶಾರ್ಟ್​ಲಿಸ್ಟ್​ ಮಾಡಲಾದ ಅಭ್ಯರ್ಥಿಗಳಿಗೆ ದೂರವಾಣಿ ಅಥವಾ ಇ-ಮೇಲ್​ ಮೂಲಕ ಮಾಹಿತಿ ನೀಡಲಾಗುವುದು. ಆಯ್ಕೆಯಾದವರ ಪಟ್ಟಿಯನ್ನು ನ್ಯಾಯಾಲಯದ ವೆಬ್​ಸೈಟ್​ನಲ್ಲಿ ಪ್ರಕಟಿಸಲಾಗುವುದು. ಪಟ್ಟಿಯ ಆಧಾರದ ಮೇಲೆ ಸಂದರ್ಶನಕ್ಕೆ ಹಾಜರಾಗಬೇಕು. ಹಾಜರಾಗಲು ಯಾವುದೇ ಭತ್ಯೆ ನೀಡುವುದಿಲ್ಲ.
ಅರ್ಜಿ ಸಲ್ಲಿಸಲು ಕೊನೇ ದಿನ:29.5.2022ಅರ್ಜಿ ಶುಲ್ಕ ಪಾವತಿಸಲು ಕೊನೇ ದಿನ:31.5.2022ಅಧಿಸೂಚನೆಗೆ:https://bit.ly/3Kinyuhಮಾಹಿತಿಗೆ:districts.ecourts.gov.in/karnataka
ಮದ್ವೆಯಾದ 11ನೇ ದಿನಕ್ಕೆ ವರ ಸಾವು, ವಧುವಿನ ಸ್ಥಿತಿ ಚಿಂತಾಜನಕ! ಕುಟುಂಬಸ್ಥರ ಗೋಳಾಟ ನೋಡಲಾಗ್ತಿಲ್ಲ

ಸಹ್ಯಾದ್ರಿ ಕಾಲೇಜಿನಲ್ಲಿ ಪ್ರೊಫೆಸರ್​ ಹುದ್ದೆ ನೇಮಕ: ಅರ್ಜಿ ಸಲ್ಲಿಕೆಗೆ ಮೇ 7 ಕೊನೇ ದಿನ

ಗ್ರಾಮ-ಒನ್​ ಫ್ರಾಂಚೈಸಿಗಳಿಗೆ ಆಹ್ವಾನ: ಪದವೀಧರರಿಗೆ ಸ್ವಉದ್ಯೋಗ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × five =
Remember me
