ದಾವಣಗೆರೆ:ಇಲ್ಲಿನ ಜಿಲ್ಲಾ ನ್ಯಾಯಾಂಗ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಜವಾನ, ಬೆರಳಚ್ಚುಗಾರ, ಬೆರಳಚ್ಚು ನಕಲುದಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್​ಲೈನ್​ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಎಲ್ಲ ಹುದ್ದೆಗಳಿಗೂ ಮೀಸಲಾತಿ ಕಲ್ಪಿಸಲಾಗಿದ್ದು, ಆಯಾ ಸ್ಥಾನಗಳಿಗೆ ಅಭ್ಯರ್ಥಿಗಳು ಇರದಿದ್ದರೆ ಇತರ ಅರ್ಹ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುವುದು.
ಹುದ್ದೆಗಳ ವಿವರಜವಾನ-2210ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕನ್ನಡ ಭಾಷೆಯನ್ನು ಓದುವ ಮತ್ತು ಬರೆಯುವ ಸಾಮರ್ಥ್ಯ ಹೊಂದಿರುವ 35 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. 17,000 ರೂ. ನಿಂದ 28,950 ರೂ. ಮಾಸಿಕ ವೇತನ ಇರಲಿದೆ.
ಬೆರಳಚ್ಚುಗಾರ -7, ಬೆರಳಚ್ಚು ನಕಲುದಾರ-2ದ್ವಿತೀಯ ಪಿಯು ಉತ್ತೀರ್ಣರಾಗಿರಬೇಕು/ ಕಮರ್ಷಿಯಲ್​ ಪ್ರಾಕ್ಟೀಸ್​ನಲ್ಲಿ 3 ವರ್ಷದ ಡಿಪ್ಲೊಮಾ ಮಾಡಿರಬೇಕು. ಗರಿಷ್ಠ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಹರಾಗಿದ್ದಾರೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಹಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಮಾಧ್ಯಮದ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಮಾಸಿಕ 21,400- 42,000 ರೂ. ವೇತನ ಇದೆ.
ಅರ್ಜಿ ಶುಲ್ಕ:ಸಾಮಾನ್ಯ ಅಭ್ಯರ್ಥಿಗೆ 200 ರೂ., ಇತರ ಅಭ್ಯರ್ಥಿಗಳಿಗೆ 100 ರೂ. ನಿಗದಿಯಾಗಿದ್ದು, ಪರಿಶಿಷ್ಟ ಜಾತಿ, ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ನಿಗದಿತ ಶುಲ್ಕವನ್ನು ವೆಬ್​ಸೈಟ್​ನಲ್ಲಿ ನೀಡಲಾದ ಲಿಂಕ್​ ಮೂಲಕ ಆನ್​ಲೈನ್​ನಲ್ಲಿ ನೆಟ್​ ಬ್ಯಾಂಕಿಂಗ್​ ಅಥವಾ ಕ್ರೆಡಿಟ್​ ಕಾರ್ಡ್​ ಮೂಲಕ ಪಾವತಿಸತಕ್ಕದ್ದು. ಅರ್ಜಿಯಲ್ಲಿ ಮೊಬೈಲ್​ ಸಂಖ್ಯೆ ಮತ್ತು ಇ-ಮೇಲ್​ ಐಡಿಯನ್ನು ಕಡ್ಡಾಯವಾಗಿ ನಮೂದಿಸಬೇಕು. ಅಂಚೆ ಮೂಲಕ ಬಂದ ಅರ್ಜಿ ಮತ್ತು ಶುಲ್ಕವನ್ನು ಸ್ವೀಕರಿಸುವುದಿಲ್ಲ.
ವೇತನ ಶ್ರೇಣಿ:2018ರ ಕರ್ನಾಟಕ ನಾಗರಿಕ ಸೇವಾ ನಿಯಮದನ್ವಯ
ಆಯ್ಕೆ ವಿಧಾನ:ಕರ್ನಾಟಕ ನಾಗರಿಕ ಸೇವಾ ನಿಯಮ ಹಾಗೂ ಕರ್ನಾಟಕ ಅಧೀನ ನ್ಯಾಯಾಲಯಗಳ ನಿಯಮದಡಿ 2007 ಮತ್ತು 2021ರ ಮೇರೆಗೆ ನೇರ ನೇಮಕಾತಿ ಮಾಡಿಕೊಳ್ಳಲಾಗುವುದು. ಸಂದರ್ಶನಕ್ಕೆ ಅರ್ಹ ಅಭ್ಯರ್ಥಿಗಳಿಗೆ ದೂರವಾಣಿ ಅಥವಾ ಇ-ಮೇಲ್​ ಮೂಲಕ ಮಾಹಿತಿ ನೀಡಲಾಗುವುದು. ಆಯ್ಕೆಯಾದವರ ಪಟ್ಟಿಯನ್ನು ನ್ಯಾಯಾಲಯದ ವೆಬ್​ಸೈಟ್​ನಲ್ಲಿ ಪ್ರಕಟಿಸಲಾಗುವುದು. ಪಟ್ಟಿಯ ಆಧಾರದ ಮೇಲೆ ಸಂದರ್ಶನಕ್ಕೆ ಹಾಜರಾಗಬೇಕು. ಹಾಜರಾಗಲು ಯಾವುದೇ ಭತ್ಯೆ ನೀಡುವುದಿಲ್ಲ.
ಅರ್ಜಿ ಸಲ್ಲಿಸಲು ಕೊನೇ ದಿನ:17.5.2022ಅರ್ಜಿ ಶುಲ್ಕ ಪಾವತಿಸಲು ಕೊನೇ ದಿನ:19.5.2022ಅಧಿಸೂಚನೆಗೆ:https://bit.ly/3xERuxQಮಾಹಿತಿಗೆ:districts.ecourts.gov.in/karnataka
ತಡರಾತ್ರಿ ಪಂಪ್​ಸೆಟ್ ಕದಿಯಲು ಬಂದ ಯುವಕರಿಬ್ಬರನ್ನು ಅಮಾನುಷವಾಗಿ ಕೊಂದ ತೋಟದ ಮಾಲೀಕ!

ಯಾವುದೇ ಶಾಲೆಯಾಗಿರಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇದ್ದರೆ ವಿಲೀನಗೊಳಿಸುತ್ತೇವೆ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − eight =
Remember me
