ಶಿವಮೊಗ್ಗ:ಸಾವು ಯಾವ ರೂಪದಲ್ಲಿ, ಯಾವಾಗ ಬರುತ್ತೆ ಎಂದು ಊಹಿಸುವಿಕೆ ಅಸಾಧ್ಯ ಎಂಬುದಕ್ಕೆ ಈ ಪ್ರಕರಣವೇ ಸಾಕ್ಷಿ. 13 ವರ್ಷದ ಬಾಲಕನೊಬ್ಬಸೀರೆಯಲ್ಲಿ ಜೋಕಾಲಿ ಕಟ್ಟಿಕೊಂಡು ಆಟವಾಡುತ್ತಾ ನಲಿಯುತ್ತಿರುವಾಗಲೇ ಅವನ ಪ್ರಾಣವನ್ನು ಜವರಾಯ ಹೊತ್ತೊಯ್ದಿದ್ದಾನೆ.
ಇಂತಹ ದುರ್ಘಟನೆ ಶುಕ್ರವಾರ ಶಿವಮೊಗ್ಗದ ಹಾಡೋನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಿಶೋರ್(13) ಮೃತ ದುರ್ದೈವಿ. ಮೂಲತಃ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ದೊಡ್ಡೇರಿ ಗ್ರಾಮದ ಕಿಶೋರ್​, ಹಾಡೋನಹಳ್ಳಿಯ ಸಂಬಂಧಿಕರ ಮನೆಯಲ್ಲಿ ಇದ್ದುಕೊಂಡು ವ್ಯಾಸಂಗ ಮಾಡುತ್ತಿದ್ದ.
ಶುಕ್ರವಾರ ಮನೆಯಲ್ಲಿ ಸೀರೆ ಕಟ್ಟಿಕೊಂಡು ಜೋಕಾಲಿ‌ ಆಡುತ್ತಿದ್ದಾಗ ಜೋಕಾಲಿ ಸೀರೆ ಉರುಳಾಗಿ ಸುತ್ತಿಕೊಂಡು ಕಿಶೋರ್​ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬಾಲಕ ಹಾಡೋನಹಳ್ಳಿಯ ವೆಂಕಟೇಶ್ವರ ವಿದ್ಯಾಲಯದಲ್ಲಿ 8ನೇ ತರಗತಿಯಲ್ಲಿ ಓದುತ್ತಿದ್ದ. ಶಿವಮೊಗ್ಗ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅರುಣಾಕುಮಾರಿಯ ಪ್ರೇಮ್​ಕಹಾನಿ ಬಿಚ್ಚಿಟ್ಟ ನಟ ದರ್ಶನ್​! 9 ವರ್ಷ ಚಿಕ್ಕವನೊಂದಿಗೆ ಲವ್ವಿಡವ್ವಿ ಶುರು ಮಾಡಿದ್ದಳಂತೆ…

ಪಿಎಸ್​ಐ ಆಗಿರುವ ತಾಯಿ ವಿರುದ್ಧವೇ ಗದಗ ಎಸ್​ಪಿಗೆ ದೂರು ಕೊಟ್ಟ ಯುವತಿ!

ಪಕ್ಕದೂರಲ್ಲಿ 22 ವರ್ಷದ ಯುವತಿ ಸಾವು! ಶವದ ಪಕ್ಕದಲ್ಲೇ ಇತ್ತು ಆಸಿಡ್​, ಚಾಕು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × one =
Remember me
