ಬೆಂಗಳೂರು:ಬಾಂಬೆ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಲೆ ಅವರನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ನೇಮಕ ಮಾಡಿ ಕೇಂದ್ರ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.
ಸಿಜೆಐ ಯು.ಯು.ಲಲಿತ್ ನೇತೃತ್ವದಲ್ಲಿ ಸೆ.28ರಂದು ನಡೆದ ಸುಪ್ರೀಂಕೋರ್ಟ್ ಕೊಲಿಜಿಯಂ ಸಭೆಯಲ್ಲಿ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಪಿ.ಬಿ.ವರಲೆ ಅವರ ಹೆಸರನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿತ್ತು. ಇದೀಗ ರಾಷ್ಟ್ರಪತಿಗಳ ಆದೇಶಾನುಸಾರು ಪ್ರಸನ್ನ ಬಿ.ವರಲೆ ಅವರನ್ನು ಕರ್ನಾಟಕ ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿ ಕಾನೂನು ಮತ್ತು ನ್ಯಾಯ ಸಚಿವಾಲಯ ಅಧಿಸೂಚನೆ ಹೊರಡಿಸಿದೆ.
ರಾಜ್ಯ ಹೈಕೋರ್ಟ್‌ನ ಹಿಂದಿನ ಸಿಜೆ ರಿತುರಾಜ್ ಅವಸ್ಥಿ ಕಳೆದ ಜು.2ರಂದು ಸೇವೆಯಿಂದ ನಿವೃತ್ತರಾದ ಹಿನ್ನೆಲೆಯಲ್ಲಿ ಹಿರಿಯ ನ್ಯಾಯಮೂರ್ತಿ ಅಲೋಕ್ ಅರಾಧೆ ಅವರು ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ನ್ಯಾ.ಪಿ.ಬಿ. ವರಲೆ ಹಿನ್ನೆಲೆ:ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ 1962ರ ಜೂ.23ರಂದು ಜನಿಸಿದ ಪ್ರಸನ್ನ ಬಿ.ವರಲೆ, ಡಾ.ಬಾಬಾಸಾಹೇಬ್ ಅಂಬೇಡ್ಕರ್ ಮರಾಠವಾಡ ವಿಶ್ವವಿದ್ಯಾಲಯದಿಂದ ಕಲಾ ಮತ್ತು ಕಾನೂನು ಪದವಿ ಪಡೆದಿದ್ದಾರೆ. 1985ರ ಆ.12ರಂದು ವಕೀಲಿಕೆ ಆರಂಭಿಸಿದ ಅವರು ವಕೀಲರಾದ ಎಸ್.ಎಲ್. ಲೋಯಾ ಕಚೇರಿಗೆ ಸೇರಿ ಸಿವಿಲ್ ಮತ್ತು ಕ್ರಿಮಿನಲ್ ಕೇಸ್‌ಗಳನ್ನು ನಿರ್ವಹಿಸಿದರು. 1990ರಿಂದ 92ವರೆಗೆ ಔರಂಗಾಬಾದ್‌ನ ಅಂಬೇಡ್ಕರ್ ಕಾನೂನು ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದರು. ಔರಂಗಾಬಾದ್ ಹೈಕೋರ್ಟ್ ಪೀಠದಲ್ಲಿ ಸಹಾಯಕ ಸರ್ಕಾರಿ ಪ್ಲೀಡರ್ ಹಾಗೂ ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಕರ್ತವ್ಯ ನಿರ್ವಹಿಸಿದ್ದ ಅವರು, ಕೇಂದ್ರ ಸರ್ಕಾರದ ಪರ ವಕೀಲರಾಗಿಯೂ ಸೇವೆ ಸಲ್ಲಿಸಿದ್ದರು. 2008ರ ಜು.18ರಂದು ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡ ಪ್ರಸನ್ನ ಬಿ. ವರಲೆ ಕಳೆದ 14 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ.
As per the Constitutional provisions, Justice Pankaj Mittal is transferred to Rajasthan as Chief Justice of Rajasthan HC, Justice PB Varale is appointed as Chief Justice of Karnataka HC & Justice AM Magrey as Chief Justice of J&K & Ladakh HC.I extend best wishes to all of them.
— Kiren Rijiju (@KirenRijiju)October 11, 2022

ಎಕ್ಸಾಂ ಹಾಲ್​ಟಿಕೆಟ್​ನಲ್ಲಿ ನಟಿ ಐಶ್ವರ್ಯಾ ರೈ ಫೋಟೋ-ಸಹಿ! ಪರೀಕ್ಷೆಗೂ ಮುನ್ನವೇ ವಿದ್ಯಾರ್ಥಿನಿಗೆ ಶಾಕ್

ನನ್ನ ತಂದೆ ಆರೋಗ್ಯವಾಗಿದ್ದಾರೆ, ದಯವಿಟ್ಟು ಯಾರೂ ವದಂತಿಗೆ ಕಿವಿಗೊಡಬೇಡಿ: ಹಂಸಲೇಖರ ಪುತ್ರಿ ಮನವಿ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:2 × 3 =
Remember me
