ಮೈಸೂರು:ಸಂಪೂರ್ಣ ಭರ್ತಿಯಾದ ಎಚ್.ಡಿ.‌ಕೋಟೆಯ ಕಬಿನಿ ಜಲಾಶಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಬಾಗಿನ ಅರ್ಪಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಶಾಸಕರಾದ ಅನಿಲ್ ಚಿಕ್ಕಮಾದು, ಹರ್ಷವರ್ಧನ್ ಇತರರು ಮುಖ್ಯಮಂತ್ರಿಗೆ ಸಾಥ್ ನೀಡಿದರು‌.
ಮೈಸೂರಿನಿಂದ ಹೆಲಿಕಾಪ್ಟರ್​ನಲ್ಲಿ ಕಬಿನಿಗೆ ಮಧ್ಯಾಹ್ನ 12.15ಕ್ಕೆ ಆಗಮಿಸಿದ ಸಿಎಂ ಅವರಿಗೆ ಪೂರ್ಣಕುಂಭ ಸ್ವಾಗತ ಕೋರಲಾಯಿತು. ನಂತರ ಪೂಜಾ ಕೈಂಕರ್ಯ ನೆರವೇರಿತು. ನಾಡಿನಲ್ಲಿ ಮಳೆ- ಬೆಳೆ ಉತ್ತಮವಾಗಿ ಆಗಲಿ ಎಂದು ಸಿಎಂ ಪ್ರಾರ್ಥಿಸಿದರು. 12.20ಕ್ಕೆ ಬಾಗಿನ ಅರ್ಪಿಸಿದರು.
ಕೇರಳದ ವಯನಾಡ್ ಹಾಗೂ ಜಿಲ್ಲೆಯಲ್ಲಿ ಸುರಿದ ಮಳೆಯಿಂದ ಕಬಿನಿ‌ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಗರಿಷ್ಠ 2,284 ಅಡಿಗಳಷ್ಟು ನೀರಿನ ಸಂಗ್ರಹಣಾ ಸಾಮರ್ಥ್ಯದ ಜಲಾಶಯದಲ್ಲಿ ಪ್ರಸ್ತುತ 2,283.79 ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಕಳೆದ ಬಾರಿ ಇದೇ ಅವಧಿಯಲ್ಲಿ 2,279.76 ಅಡಿಗಳಷ್ಟು ನೀರು ಸಂಗ್ರಹವಾಗಿತ್ತು. ಜಲಾಶಯಕ್ಕೆ 19,614 ಕ್ಯೂಸೆಕ್‌ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ ನದಿಗೆ 8,417 ಕ್ಯೂಸೆಕ್ ನೀರು ಹರಿಯ ಬಿಡಲಾಗುತ್ತಿದೆ.
ಗಗನಚುಕ್ಕಿ-ಭರಚುಕ್ಕಿಗೆ ಟೂರ್​ ಪ್ಯಾಕೇಜ್​ ಘೋಷಿಸಿದ ಕೆಎಸ್​ಆರ್​ಟಿಸಿ: ಪ್ರವಾಸ ದರ ತಲಾ 250 ರೂಪಾಯಿ

ಮೈಸೂರು-ತಾಳಗುಪ್ಪ ಪ್ಯಾಸೆಂಜರ್​ ರೈಲು ಸಂಚಾರ ಜು.25ರಿಂದ ಪುನರಾರಂಭ

ಡಿಕೆಶಿ ಒಡೆತನದ ಸ್ಕೂಲ್​ಗೆ ಬಾಂಬ್​ ಬೆದರಿಕೆ ಹಾಕಿದ್ದು ಹುಚ್ಚ ವೆಂಕಟ್​ ಅಲ್ಲ, SSLC ವಿದ್ಯಾರ್ಥಿ! ಕಾರಣ ಕೇಳಿದ್ರೆ ಶಾಕ್​ ಆಗ್ತೀರಿ

ವಿಷ ಸೇವಿಸಿ ಪ್ರೇಮಿಗಳು ಆತ್ಮಹತ್ಯೆ: ಒಂದೇ ಕಾಲೇಜಿನಲ್ಲಿ ಓದುತ್ತಿದ್ದವರ ಬಾಳಲ್ಲಿ ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 3 =
Remember me
