ಬೆಂಗಳೂರು:ಮುಂಬರುವ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣಗೊಳಿಸುವುದು ಹಾಗೂ ಸಂಭ್ರಮಾಚರಣೆಗೆ ಹೊಸ ರೂಪ ಕೊಡುವ ಉದ್ದೇಶದಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಶೇಷ ಕಾರ್ಯಕ್ರಮ ರೂಪಿಸಿದ್ದು, ಏಕ ಕಾಲದಲ್ಲಿ ಒಂದು ಕೋಟಿ ಜನರು ನಾಡಗೀತೆ ಹಾಡುವ ಪ್ರಯತ್ನ ಮಾಡಲಾಗುತ್ತಿದೆ.
ರಾಜ್ಯದ ಸಾಂಸ್ಕೃತಿಕ ಲೋಕದಲ್ಲೇ ವಿನೂತನವಾದ ಕೋಟಿ ಕಂಠ ಗಾಯನ ಎಂಬ ಕಾರ್ಯಕ್ರಮವನ್ನು ಆಯೋಜಿಸಿದ್ದು, ಅ.28ರಂದು ನಾಡಿನಾದ್ಯಂತ ಏಕಕಾಲದಲ್ಲಿ ಕನ್ನಡದ ಕವಿಗಳ ಜನಪ್ರಿಯ ಗೀತೆಗಳನ್ನು ಕೋಟಿ ಕಂಠಗಳಲ್ಲಿ ಪ್ರಸ್ತುತಪಡಿಸಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್​ ಕುಮಾರ್​ ತಿಳಿಸಿದ್ದಾರೆ.
ಕಳೆದ ವರ್ಷ ‘ಮಾತಾಡ್​ ಮಾತಾಡ್​ ಕನ್ನಡ’ ಎಂಬ ಘೋಷವಾಕ್ಯದೊಂದಿಗೆ ಆಯೋಜಿಸಿದ್ದ ಲಕ್ಷಕಂಠ ಗಾಯನಕ್ಕೆ ನಾಡಿನಾದ್ಯಂತ ವ್ಯಾಪಕ ಪ್ರಶಂಸೆ ವ್ಯಕ್ತವಾಗಿತ್ತು. ಈ ಬಾರಿ ರಾಜ್ಯೋತ್ಸವ ಪ್ರಯುಕ್ತ ಮತ್ತೆ ಈ ಅಭಿಯಾನವನ್ನು ಪ್ರಾರಂಭಿಸಲಾಗುತ್ತಿದ್ದು, ಕೋಟಿ ಕಂಠ ಗಾಯನ ಅಭಿಯಾನ ನಡೆಸಲು ತೀರ್ಮಾನಿಸಲಾಗಿದೆ.
ಅಂದು ಏಕಕಾಲದಲ್ಲಿ ರಾಜ್ಯಾದ್ಯಂತ ಕೋಟಿ ಕಂಠಗಳಲ್ಲಿ ಕನ್ನಡ ಗೀತೆಗಳನ್ನು ಪ್ರಸ್ತುತಪಡಿಸುವ ಮಹತ್ವದ ನಿರ್ಧಾರವನ್ನು ನಮ್ಮ ಇಲಾಖೆ ತೆಗೆದುಕೊಂಡಿದೆ. ಕನ್ನಡಿಗರು, ಅನಿವಾಸಿ ಕನ್ನಡಿಗರು, ಹೊರನಾಡ ಕನ್ನಡಿಗರು ಹಾಗೂ ಗಡಿನಾಡ ಕನ್ನಡಿಗರು ಈ ಅಭಿಯಾನದಲ್ಲಿ ಭಾಗವಹಿಸಲಿದ್ದು, ಪ್ರಪಂಚದಾದ್ಯಂತ ಕನ್ನಡದ ಕಂಪನ್ನು ಪಸರಿಸುವ ವಿನೂತನ ಕಾರ್ಯಕ್ರಮ ಇದಾಗಲಿದೆ ಎಂದು ಸಚಿವರು ವಿವರಿಸಿದ್ದಾರೆ.
ಈ ಅಭಿಯಾನ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ, ಶಾಲಾ ಕಾಲೇಜುಗಳಲ್ಲಿ ಸಂಘ-ಸಂಸ್ಥೆಗಳ ಕಚೇರಿ, ವಿಧಾನಸೌಧದ ಮೆಟ್ಟಿಲು ಹಾಗೂ ವಿಧಾನಸೌಧ- ವಿಕಾಸಸೌಧದ ಮಧ್ಯೆ ಇರುವ ಗಾಂಧಿ ಪ್ರತಿಮೆ ಎದುರು, ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಸಮೂಹ ಗಾಯನ ನಡೆಸುವರು. ಅದೇ ರೀತಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಮೆಜೆಸ್ಟಿಕ್​ ರೈಲು ನಿಲ್ದಾಣ, ಮೆಟ್ರೋ ನಿಲ್ದಾಣದಲ್ಲೂ ಈ ಐದು ಕನ್ನಡ ಗೀತೆಗಳನ್ನು ಹಾಡುವುದಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.
ಏಕಕಾಲದಲ್ಲಿ ಐದು ಗೀತೆಗಳ ಪ್ರಸ್ತುತಿ…1. ಕುವೆಂಪು ವಿರಚಿತ ನಾಡಗೀತೆ-ಜಯ ಭಾರತ ಜನನಿಯ ತನುಜಾತೆ…2. ಡಾ.ಚನ್ನವಿರ ಕಣವಿ ಅವರ ವಿಶ್ವ ವಿನೂತನ ವಿದ್ಯಾ ಚೇತನ…3. ಕುವೆಂಪು ಅವರ ಬಾರಿಸು ಕನ್ನಡ ಡಿಂಡಿಮವಾ…4. ಡಾ.ಡಿ.ಎಸ್​.ಕರ್ಕಿಯವರ ಹಚ್ಚೇವು ಕನ್ನಡದ ದೀಪ…5. ಹಂಸಲೇಖ ಅವರ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು…
ಲವ್​ ಜಿಹಾದ್​ ಬಲೆಗೆ ಕನ್ನಡದ ನಟಿ? ಕಣ್ಣೀರಿಟ್ಟು ಮನದ ನೋವನ್ನು ಎಳೆಎಳೆಯಾಗಿ ಬಿಚ್ಚಿಟ್ಟ ದಿವ್ಯಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − seven =
Remember me
