ಬೆಂಗಳೂರು:‘ಇನ್ನು ಆರೇಳು ತಿಂಗಳಲ್ಲಿ ಗಡ್ಡಧಾರಿ ವ್ಯಕ್ತಿಯೊಬ್ಬರು ಕರ್ನಾಟಕ ರಾಜ್ಯದ ಗದ್ದುಗೆ ಏರಲಿದ್ದಾರೆ’ ಎಂದು ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಸುಕ್ಷೇತ್ರ ಮೈಲಾರದ ಧರ್ಮಕರ್ತ ವೆಂಕಪ್ಪಯ್ಯ ಒಡೆಯರ್ ಭವಿಷ್ಯವಾಣಿ ನುಡಿದಿದ್ದು, ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ.
ಮೈಲಾರದ ಭವಿಷ್ಯವಾಣಿಯಂತೆ ಈಗಿರುವ ಸರ್ಕಾರದಲ್ಲಿ ಮೂವರು ಸಿಎಂ ಆಗಿ ಮುಕ್ತಾಯ ಆಗುತ್ತೆ. ಇನ್ನು ಕೆಲವೇ ತಿಂಗಳಲ್ಲಿ ರಾಜ್ಯದ ಮುಖ್ಯಮಂತ್ರಿ ಬದಲಾವಣೆ ಆಗುವುದು ಖಚಿತ. ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈಗ ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿದ್ದಾರೆ. ಅವರು 6-7 ತಿಂಗಳು ಮಾತ್ರ ರಾಜ್ಯಭಾರ ಮಾಡ್ತಾರೆ. 2022ರ ಮಾರ್ಚ್​ನಲ್ಲಿ ಗಡ್ಡಧಾರಿ ವ್ಯಕ್ತಿ ಸಿಎಂ ಆಗ್ತಾರೆ ಎಂದು ಮೈಲಾರಲಿಂಗೇಶ್ವರನ ಭವಿಷ್ಯವಾಣಿ ಹೇಳಿದೆ. ಈ ಸುದ್ದಿ ಹರಡುತ್ತಿದ್ದಂತೆ ಸಿ.ಟಿ. ರವಿ ಸ್ಫೋಟಕ ಹೇಳಿಕೆ ಕೊಟ್ಟಿದ್ದಾರೆ.
ಚಿಕ್ಕಮಗಳೂರಿನ ಮಲ್ಲೇನಹಳ್ಳಿಯಲ್ಲಿ ಮಾತನಾಡಿದ ಸಿ.ಟಿ.ರವಿ, ‘ಸಿಎಂ ಆಗೋಕೆ ಯೋಗಬೇಕು. ಅದು ಬೊಮ್ಮಾಯಿ ಅವರಿಗೆ ಇದೆ. ನಾನು ಸಿಎಂ ಆಗಲು ಗಡ್ಡ ಬಿಟ್ಟಿಲ್ಲ. ಗಡ್ಡ ಬಿಟ್ಟಾಕ್ಷಣ ಸಿಎಂ ಆಗಲ್ಲ’ ಎಂದು ಸಿ.ಟಿ.ರವಿ ಹೇಳಿದ್ದಾರೆ. ‘ನನಗೆ ಕಾಲೇಜು ದಿನಗಳಿಂದಲೂ ಗಡ್ಡ ಬಿಡುವ, ಹಣೆಗೆ ಕುಂಕುಮ ಇಡುವ, ಕಿವಿಗೆ ಟಿಕ್ಕಿ ಹಾಕುವ ಹವ್ಯಾಸ ಇದೆ. ಗಡ್ಡ ಬಿಟ್ಟಿರುವುದಕ್ಕೆ ವಿಶೇಷ ಅರ್ಥ ಕಲ್ಪಿಸಬೇಡಿ. ನನ್ನನ್ನು ನೋಡಿದಾಕ್ಷಣ ಸಿಟಿ ರವಿ ಎಂಬುದು ಗೊತ್ತಾಗಲಿ ಎಂದೇ ನಾನು ಹೀಗಿರುವೆ’ ಎಂದ ಸಿ.ಟಿ.ರವಿ, ‘ಸಿಎಂ ಆಗುವ ಆಸೆಯಿಂದ ಕೆಲವರು ಗಡ್ಡ ಬಿಟ್ಟಿರಬಹುದು’ ಎಂದರು.
2022ರ ಮಾರ್ಚ್​ನಲ್ಲಿ ಕರ್ನಾಟಕದ ಸಿಎಂ ಆಗ್ತಾರೆ ಗಡ್ಡಧಾರಿ ವ್ಯಕ್ತಿ! ಭಾರೀ ಕುತೂಹಲ ಮೂಡಿಸಿದೆ ಈ ಭವಿಷ್ಯವಾಣಿ

ಮನೆಯೊಳಗೆ ಅಕ್ಕ-ತಂಗಿ ನಿಗೂಢ ಸಾವು! 5 ದಿನದ ಹಿಂದೆ ಆ ಮನೆಗೆ ಬಂದು ಹೋಗಿದ್ದ ಅಕ್ಕನ ಗಂಡ

ಬೆಳ್ಳಂಬೆಳಗ್ಗೆ 62 ಮನೆಗಳ ಮೇಲೆ ದಾಳಿ: ಸುಖ ನಿದ್ದೆಯಲ್ಲಿದ್ದ ರೌಡಿಗಳಿಗೆ ಬಿಸಿ ಮುಟ್ಟಿಸಿದ ಪೊಲೀಸರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − 2 =
Remember me
