ಬೆಂಗಳೂರು:ರಾಷ್ಟ್ರಕವಿ‌ ಕುವೆಂಪು ರಚಿಸಿರುವ ನಾಡಗೀತೆಯನ್ನು ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿರುವುದು ರಾಜ್ಯಕ್ಕೆ ಮಾಡಿರುವ ಅಪಮಾನ‌. ಸರ್ಕಾರ ಕೂಡಲೇ ಪಠ್ಯ ಪರಿಶೀಲನಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಒಕ್ಕಲಿಗರ ಸಂಘ ಒತ್ತಾಯಿಸಿದೆ.
ಒಂದು ವೇಳೆ ಸರ್ಕಾರ ಕ್ರಮ ಕೈಗೊಳ್ಳಲು ವಿಫಲವಾದರೆ ಬರುವ ದಿನಗಳಲ್ಲಿ ಬೀದಿಗಿಳಿದು ಉಗ್ರ ಹೋರಾಟ ನಡೆಸುತ್ತೇವೆ ಎಂದು ಸಂಘದ ಅಧ್ಯಕ್ಷ ಸಿ.ಎನ್.ಬಾಲಕೃಷ್ಣ ಶನಿವಾರ ಸುದ್ದಿಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದರು.
ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಜತೆ ಈ ಬಗ್ಗೆ ಚರ್ಚಿಸಲಾಗುವುದು.‌ ನಾಡಿನ ಆರೂವರೆ ಕೋಟಿ ಕನ್ನಡಿಗರು ಸ್ವೀಕರಿಸಿರುವ ನಾಡಗೀತೆಯನ್ನು ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವುದು ಸರಿಯಲ್ಲ. ಜಗದ ಕವಿ, ಯುಗದ ಕವಿಯೆಂದು ಖ್ಯಾತಿ ಪಡೆದಿರುವ ಕುವೆಂಪು ಬಗ್ಗೆ ಅತ್ಯಂತ ಕೀಳುಮಟ್ಟದಲ್ಲಿ ಮಾತನಾಡಿರುವುದನ್ನು ಸಂಘದ ಅಧ್ಯಕ್ಷ ಖಂಡಿಸಿದರು.
ಕುವೆಂಪು ಅವರಿಗೆ ಕುವೆಂಪು ಅವರೇ ಸರಿಸಾಟಿ. ರೋಹಿತ್ ಚಕ್ರತೀರ್ಥ ಕುವೆಂಪು ನಾಡಗೀತೆಯನ್ನು ಅಗೌರವಗೊಳಿಸಿರುವುದು ನಾಡಿನಾದ್ಯಂತ ಅಲ್ಲದೆ ದೇಶ ವಿದೇಶಗಳಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ. 2019ರಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಇವರಿಗೆ ನೋಟಿಸ್ ನೀಡಿತ್ತು‌. ಕುವೆಂಪು ದೇವರು ಮತ್ತು ಧರ್ಮವನ್ನು ಸ್ವಾರ್ಥಕ್ಕೆ ಬಳಸುವವರ ವಿರುದ್ಧ ತಮ್ಮ ಕವನಗಳಲ್ಲಿ ಖಂಡಿಸಿದ್ದರು ಎಂದರು.
ಶ್ರೀ ರಾಮಾಯಣ ದರ್ಶನಂ ಕೃತಿಯನ್ನು ಅವರ ಗುರುಗಳಿಗೆ ಸರ್ಮಪಿಸಿದ್ದರು. ಸರ್ವ ಜನಾಂಗದ ಶಾಂತಿ ತೋಟಕ್ಕೆ ಪೂರಕವಾಗಿರುವ ಈ ನಾಡಗೀತೆಯನ್ನು ಪದೇಪದೆ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗುತ್ತಿದೆ.‌ ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಕಠಿಣ ಕ್ರಮ‌ ಕೈಗೊಳ್ಳಬೇಕು. ಅಲ್ಲದೆ, ಸರ್ಕಾರದಲ್ಲಿ ನಮ್ಮ‌ ಜನಾಂಗದ ಸಚಿವರು ತಕ್ಷಣ ರಾಜ್ಯಮಟ್ಟದ ಸಭೆ ನಡೆಸಿ ಚರ್ಚಿಸಿ ಸರ್ಕಾರದ ಮೇಲೆ ಒತ್ತಡ ತರಬೇಕು. ಎಲ್ಲರೂ ಎದ್ದು ನಿಂತು ಗೌರವಿಸುವ ನಾಡಗೀತೆ‌.‌ ಇದು ಸರ್ಕಾರಕ್ಕೆ ಅಗೌರವ‌ ಪ್ರಶ್ನೆಯಾಗಿದೆ. ಶಿಕ್ಷಣ ತಜ್ಞರು, ಸಾಹಿತಿಗಳು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಸರ್ಕಾರದ ಕಣ್ಣುತೆರೆಸುವ ಕೆಲಸವನ್ನು ಸದ್ಯ ಮಾಡುತ್ತಿದ್ದೇವೆ. ಸರ್ಕಾರದ ಎಚ್ಚೆತ್ತುಕೊಳ್ಳದಿದ್ದರೆ ಸಮುದಾಯ, ಸಂಘಟನೆಗಳು ಬೀದಿಗಿಳಿದು ಹೋರಾಟ ಮಾಡಿದರೆ ಸರ್ಕಾರವೇ ಹೊಣೆ. ರೋಹಿತ್ ಚಕ್ರತೀರ್ಥ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು. ನಾಡಗೀತೆ‌ಗೆ ಅವಮಾನ ಮಾಡಿರುವುದು ಸರ್ಕಾರಕ್ಕೆ ಅವಮಾನ‌ ಮಾಡಿದಂತಾಗಿದೆ ಎಂದು ಸಿ.ಎನ್.ಬಾಲಕೃಷ್ಣ ಎಚ್ಚರಿಸಿದರು.
ಕೆಜಿಎಫ್​ ಬಾಬು ಮನೆ ಮೇಲೆ IT ದಾಳಿ: ನಾಮಪತ್ರದಲ್ಲಿನ ಮಾಹಿತಿ ನೋಡಿ ಐಟಿ ಕಣ್ಣು ಬಿತ್ತಾ? ಬಾಬು ಮುಂದೆ ಡಿಕೆಶಿ, ಎಂಟಿಬಿ ಆಸ್ತಿಯೂ ಕಮ್ಮಿ

ಕಾವೇರಿ ನದಿಯಲ್ಲಿ ದುಬಾರಿ ಬೆಲೆಯ BMW ಕಾರು ಪತ್ತೆ! ರಾತ್ರಿ ನಾನೇ ನೀರಲ್ಲಿ ಮುಳುಗಿಸಿದೆ ಎಂದ ಮಾಲೀಕ… ಏಕೆ ಗೊತ್ತಾ?

ಮದ್ವೆಗೆ ಹೋಗಿದ್ದೆ, ಮಲಗಲು ಕೋಣೆಗೆ ಹೋಗುವಾಗ ದಾರೀಲಿ ಚಿನ್ನದ ಸರ ಸಿಕ್ತು.. ದಯವಿಟ್ಟು ವಾರಸುದಾರರಿಗೆ ತಲುಪಿಸಿ ಸರ್​…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:1 × 2 =
Remember me
