ನವದೆಹಲಿ:ದೆಹಲಿ ನಡೆದ 73ನೇ ಗಣರಾಜ್ಯೋತ್ಸವ ಪರೇಡ್​ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ ಗಮನಸೆಳೆಯಿತು. ಈ ಬಾರಿ ದಕ್ಷಿಣ ಭಾರತದಿಂದ ಕರ್ನಾಟಕದ ಸ್ತಬ್ಧಚಿತ್ರ ಮಾತ್ರ ಆಯ್ಕೆಯಾಗಿದ್ದು ಮತ್ತೊಂದು ವಿಶೇಷ.
ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ಎಂಬ ವಿಷಯಾಧಾರಿತ ಸ್ತಬ್ಧಚಿತ್ರದಲ್ಲಿ ಕೌಶಲ್ಯದಿಂದ ತಯಾರಿಸಿದ ಮಡಕೆ, ಸೂಕ್ಷ್ಮವಾಗಿ ಕೆತ್ತನೆ ಮಾಡಿದ ಶ್ರೀಗಂಧದ ಚಿಕಣಿ (ಮಿನಿಯೇಚರ್ಸ್ ಅಥವಾ ಕಿರು ಮಾದರಿ ವಸ್ತುಗಳು), ಕೈಮಗ್ಗದ ಸೀರೆಗಳು, ಕೈಯಿಂದಲೇ ವಿಶಿಷ್ಠ ಕಲಾಕೃತಿಗಳೂ ಒಳಗೊಂಡಂತೆ 16 ಕರಕುಶಲ ವಸ್ತುಗಳು ಭೌಗೋಳಿಕ ಸೂಚಿ ಸಂಕೇತದ ಪಟ್ಟಿಯಲ್ಲಿ ಸೇರ್ಪಡೆಯಾಗಿತ್ತು. ಈ ಟ್ಯಾಬ್ಲೋ ಕರ್ನಾಟಕವನ್ನ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ಎಂದೇ ಸಾರುತ್ತಿತ್ತು. ಸ್ವಾತಂತ್ರ್ಯ ಹೋರಾಟಗಾರರು, ಅಭಿನೇತ್ರಿ, ಸಮಾಜ ಸೇವಕರು, ಕಲಾ ಉತ್ತೇಜಕರೂ ಆಗಿದ್ದ ರಾಜ್ಯದ ಕಮಲಾದೇವಿ ಚಟ್ಟೋಪಾಧ್ಯಾಯ ಅವರು ನಶಿಸಿಹೋಗುತ್ತಿದ್ದ ಪಾರಂಪರಿಕ ಕರಕುಶಲ ವಸ್ತುಗಳ ತಯಾರಿಕಾ ಕಲೆಯನ್ನು ಉಳಿಸಲು ಪ್ರಮುಖ ಪಾತ್ರ ವಹಿಸಿದ್ದರು. ಸ್ತಬ್ಧಚಿತ್ರದ ಕೇಂದ್ರಬಿಂದು ಅವರೇ ಆಗಿದ್ದಾರೆ.

ಸ್ತಬ್ಧಚಿತ್ರದ ಮುಂಭಾಗದಲ್ಲಿ ಮೈಸೂರಿನ ಬೀಟೆ ಮರ ಹಾಗೂ ದಂತದ ಕಸೂತಿ ಕೆತ್ತನೆಯ ಬೃಹದಾಕಾರದ ಆನೆಯ ಕಲಾಕೃತಿ ಹಾಗೂ ಕೆಳಭಾಗದಲ್ಲಿ ಯಕ್ಷಗಾನ ಬೊಂಬೆಯಾಟದ ಚಿತ್ರಣವಿದೆ. ಗಂಜೀಫಾ ಕಲಾಕೃತಿ, ಮಧ್ಯದಲ್ಲಿ ಕಣ್ಮನ ಸೆಳೆಯುವ ಬಿದರಿ ಕಲೆಯಲ್ಲಿ ರೂಪಿಸಿದ ದೊಡ್ಡ ಪ್ರಮಾಣದ ಹೂಜಿ, ಅದರ ಇಕ್ಕೆಲಗಳಲ್ಲಿ ಕರಾವಳಿಯ ವೈಶಿಷ್ಠ್ಯ ಬಿಂಬಿಸುವ ಭೂತಾರಾಧನೆಯ ಮುಖವಾಡ ಹೊತ್ತ ಲೋಹದ ಕಲಾಕೃತಿಗಳಿವೆ. ಹೂಜಿಯ ಹಿಂಬದಿಯಲ್ಲಿ ಬಿದರಿ ಕಲೆ ಬಳಸಿ ಸಿದ್ದಪಡಿಸಿರುವ ನವಿಲುಗಳಿವೆ. ಮಧ್ಯ ಭಾಗದ ಹಿಂಬಂದಿಯಲ್ಲಿ ಕಿನ್ನಾಳದ ವೈಶಿಷ್ಠಪೂರ್ಣ ಕಲೆಯಲ್ಲಿ ಮೇಳೈಸಿದ ಬೃಹತ್ ಗಾತ್ರದ ಆಂಜನೇಯ ಸ್ವಾಮಿಯ ಮೂರ್ತಿ ಕಂಗೊಳಿಸುತ್ತಿದೆ. ಆಂಜನೇಯ ಸ್ವಾಮಿಯ ಮೂರ್ತಿಯ ಅಕ್ಕ-ಪಕ್ಕದಲ್ಲಿ ಚನ್ನಪಟ್ಟಣದ ಬೊಂಬೆಗಳು, ಮೆರುಗೆಣ್ಣೆಯ ಆಟಿಕೆ, ನವಲಗುಂದ ಧರಿ (ಜಮಖಾನೆ), ಶ್ರೀಗಂಧ ಮರದ ಕೆತ್ತನೆಯ ಹಾಗೂ ಮಣ್ಣಿನ ಕಲಾಕೃತಿಗಳಿವೆ. ಸ್ತಬ್ಧಚಿತ್ರದ ಕೊನೆಯಲ್ಲಿ ಪಾರಂಪರಿಕ ಕರಕುಶಲ ಉತ್ಪನ್ನಗಳ ತಯಾರಿಕೆಗೆ ಉತ್ತೇಜನ ನೀಡಿ ಪ್ರೋತ್ಸಾಹಿಸಿದ ಮಹಾ ಮಾತೆ, ಸ್ವಾತಂತ್ರ್ಯ ಹೋರಾಟಗಾರ್ತಿ, ಕಮಲಾದೇವಿ ಚಟ್ಟೋಪಾಧ್ಯಾಯ ಗಂಧದ ಪೆಟ್ಟಿಗೆ, ನವಿಲಿನಾಕಾರದ ದೀಪದ ಕಲಶಗಳು, ಸಂಡೂರಿನ ಬಾಳೆ ನಾರಿನ ಚೀಲಗಳು… ಹೀಗೆ ವಿವಿಧ ಕರಕುಶಲ ವಸ್ತುಗಳನ್ನು ಬಾಗಿನ ರೂಪದಲ್ಲಿ ನೀಡುತ್ತಿರುವ ದೃಶ್ಯಾವಳಿಯ ದೊಡ್ಡ ಪ್ರತಿಮೆಯನ್ನು ಟ್ಯಾಬ್ಲೋ ಒಳಗೊಂಡಿದೆ.

ಅದೇ ಭಾಗದಲ್ಲಿ ಕರ್ನಾಟಕದ ಕೈಮಗ್ಗದ ಹಿರಿಮೆಯ ಇಳಕಲ್ ಕಸೂತಿ ಸೀರೆಗಳು, ಮೊಳಕಾಲ್ಮೋರು ಸೀರೆಗಳು ಹಾಗೂ ಮೈಸೂರು ರೇಷ್ಮೆ ಸೀರೆಗಳು, ಕಿನ್ನಾಳ ಕಲೆಯಲ್ಲಿ ತಯಾರಿಸಿದ ಬಾಲೆಯರ ಕಲಾಕೃತಿಗಳು, ಪಶ್ಚಿಮ ಘಟ್ಟಗಳಲ್ಲಿ ಲಭ್ಯವಿರುವ ಬೆತ್ತ, ಬಿದಿರು, ಕಾಡುಬಳ್ಳಿಗಳು ಹಾಗೂ ತಾಟಿನಿಂಗು ಮರದ ಎಲೆಯಿಂದ ತಯಾರಿಸಿದ ಬಗೆ ಬಗೆಯ ಬುಟ್ಟಿಗಳೂ ಕೂಡ ಸ್ತಬ್ಧಚಿತ್ರಕ್ಕೆ ವಿಶೇಷ ಮೆರುಗು ನೀಡಿದೆ.

ಸ್ತಬ್ಧಚಿತ್ರ ನಿರ್ಮಾಣ ಕಾರ್ಯದಲ್ಲಿ ಹೆಸರಾಂತ ಕಲಾ ನಿರ್ದೇಶಕ ಶಶಿಧರ್ ಅಡಪ ನೇತೃತ್ವದ ಪ್ರತಿರೂಪಿ ಸಂಸ್ಥೆಯ ಒಂದು ನೂರಕ್ಕೂ ಹೆಚ್ಚು ಕಲಾವಿದರು, ಸುಪ್ರಸಿದ್ಧ ಸಂಗೀತ ನಿರ್ದೇಶಕ ಪ್ರವೀಣ್ ದಯಾನಂದ ರಾವ್ ಮತ್ತು ತಂಡ ಹಾಗೂ ಜಾನಪದ ತಜ್ಞ ಡಾ. ರಾಧಾಕೃಷ್ಣ ಉರಾಳ ನೇತೃತ್ವದ ಕಲಾ ಕದಂಬ ಕಲಾ ಕೇಂದ್ರದ ತಂಡವೂ ಶ್ರಮಿಸಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಡಾ..ಪಿ.ಎಸ್.‌ ಹರ್ಷ ಅಗತ್ಯ ಸಲಹೆ, ನಿರ್ದೇಶನ ನೀಡಿದ್ದಾರೆ.
ಗಣರಾಜ್ಯೋತ್ಸವದಲ್ಲಿ ಭಾಗವಹಿಸಿದ್ದ ಪೊಲೀಸ್ ಅಧಿಕಾರಿ ಕುಸಿದು ಬಿದ್ದು ಸಾವು

ಶಾಲೆಯಲ್ಲೇ ವಿದ್ಯಾರ್ಥಿನಿ ಜತೆ ಮುಖ್ಯಶಿಕ್ಷಕ ರೊಮಾನ್ಸ್​! ತಬ್ಬಿಕೊಂಡು ಮುತ್ತಿಡುತ್ತಿರುವ ವಿಡಿಯೋ ವೈರಲ್​, ಎಚ್​.ಡಿ.ಕೋಟೆಯಲ್ಲಿ ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 4 =
Remember me
