ಬೆಂಗಳೂರು:ನಾಡಪ್ರಭು ಕೆಂಪೇಗೌಡರ ಗೌರವಾರ್ಥ ಈ ವರ್ಷದಿಂದ ರಾಜ್ಯ ಸರ್ಕಾರ ಕೊಡಮಾಡುತ್ತಿರುವ ‘ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ’ಗೆ ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ, ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್.ನಾರಾಯಣ ಮೂರ್ತಿ ಮತ್ತು ಖ್ಯಾತ ಬ್ಯಾಡ್ಮಿಂಟನ್ ಆಟಗಾರ ಪ್ರಕಾಶ್ ಪಡುಕೋಣೆ ಅವರನ್ನು ಆಯ್ಕೆ ಮಾಡಲಾಗಿದೆ.
ಈ ಕುರಿತು ಮಾಹಿತಿ ನೀಡಿರು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಜೂ.27ರಂದು ವಿಧಾನಸೌಧದಲ್ಲಿ ನಡೆಯಲಿರುವ ಕೆಂಪೇಗೌಡರ 513ನೇ ಜಯಂತ್ಯುತ್ಸವದಲ್ಲಿ ಎಸ್.ಎಂ.ಕೃಷ್ಣ, ಎನ್.ಆರ್.ನಾರಾಯಣ ಮೂರ್ತಿ ಮತ್ತು ಪ್ರಕಾಶ್ ಪಡುಕೋಣೆ ಅವರಿಗೆ ತಲಾ 5 ಲಕ್ಷ ರೂಪಾಯಿ ನಗದುಸಹಿತ ‘ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ’ಯನ್ನು ಸಿಎಂ ಬಸವರಾಜ ಬೊಮ್ಮಾಯಿ ಪ್ರದಾನ ಮಾಡುವರು ಎಂರು ತಿಳಿಸಿದ್ದಾರೆ.
ಮೂವರು ಗಣ್ಯರೂ ಬೆಂಗಳೂರಿನ ಬೆಳವಣಿಗೆಗೆ ಮತ್ತು ಕೀರ್ತಿಗೆ ತಮ್ಮದೇ ಆದ ಅನನ್ಯ ವಿಧಾನಗಳ ಮೂಲಕ ಅನುಪಮ ಕೊಡುಗೆ ನೀಡಿದ್ದಾರೆ. ಸಾಧಕರನ್ನು ಆಯ್ಕೆ ಮಾಡಲು ರಾಜ್ಯ ಸರ್ಕಾರದ ಸ್ಟಾರ್ಟಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಿತ್ತು. ಇದರಲ್ಲಿ ಉದ್ಯಮಿ ಮೋಹನದಾಸ್ ಪೈ, ವಿವೇಕಾನಂದ ಯೂತ್ ಮೂವ್​ಮೆಂಟ್ ಸ್ಥಾಪಕ ಆರ್.ಬಾಲಸುಬ್ರಹ್ಮಣ್ಯಂ, ನಿವೃತ್ತ ಐಎಎಸ್ ಅಧಿಕಾರಿ ಎಂ.ಕೆ.ಶಂಕರಲಿಂಗೇಗೌಡ ಅವರು ಸದಸ್ಯರಾಗಿದ್ದರು. ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಆರ್. ವಿನಯದೀಪ್ ಅವರು ಸದಸ್ಯ ಕಾರ್ಯದರ್ಶಿ ಆಗಿದ್ದರು.
ಸಿದ್ದುಗೆ ಸಿಕ್ತು ಸೇಫ್​ ಝೋನ್​… ಪದೇಪದೆ ಯತೀಂದ್ರ ಭೇಟಿ, ಸಿದ್ದುಗಾಗಿ ನನ್ನ ಕ್ಷೇತ್ರವನ್ನೇ ಬಿಟ್ಟುಕೊಡ್ತೀನಿ ಎಂದ ಶಾಸಕ

ಕೂಲಿ ಕೆಲಸಕ್ಕಾಗಿ ಆಂಧ್ರದಿಂದ ಚಿಕ್ಕಬಳ್ಳಾಪುರಕ್ಕೆ ಬಂದವ ಈಗ ಕೋಟ್ಯಧೀಶ! ತನಿಖೆಯಲ್ಲಿ ಬಯಲಾಯ್ತು ಸ್ಫೋಟಕ ರಹಸ್ಯ

ಕಂಠದಲ್ಲಿ ಶ್ರೀಕೃಷ್ಣ! ಗಂಟಲು ನೋವೆಂದು ಆಸ್ಪತ್ರೆಗೆ ಹೋದ ವ್ಯಕ್ತಿಗೆ ಕಾದಿತ್ತು ಶಾಕ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − eleven =
Remember me
