ಬೆಂಗಳೂರು:ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್​ ಇಟ್ಟು ಸ್ಫೊಟಿಸುವುದಾಗಿ ಇಂದು(ಶುಕ್ರವಾರ) ಮುಂಜಾನೆ ಬೆದರಿಕೆ ಹಾಕಿ ಕೆಲ ಕಾಲ ಆತಂಕ ಸೃಷ್ಟಿಸಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಾವನ ಮೇಲಿನ ಸೇಡಿಗಾಗಿ ಏರ್‌ಪೋರ್ಟ್‌ಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ ಮಾಡಿದ್ದಾಗಿ ಆರೋಪಿ ಬಾಯ್ಬಿಟ್ಟಿದ್ದಾನೆ.
ಪಶ್ಚಿಮ ಬಂಗಾಳ ಮೂಲದ ಆರೋಪಿ ಸುಭಾಷ್ ಗುಪ್ತಾನನ್ನು ಈಶಾನ್ಯ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಈತ ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದ. ಇಂದು ಮುಂಜಾನೆ 3:30ರ ಸಮಯದಲ್ಲಿ ಪೊಲೀಸ್ ಕಂಟ್ರೋಲ್ ರೂಮ್​ಗೆ ಕರೆ ಮಾಡಿದ್ದ ಈತ, ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದ. ಕೂಡಲೇ ಬೆದರಿಕೆ ಕರೆಯ ಜಾಡು ಹಿಡಿದು ಹೊರಟ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ತನ್ನ ಅಕ್ಕನಿಗೆ ವಿಚ್ಛೇದನ ನೀಡಿದ ಬಾವನ ವಿರುದ್ಧ ಸೇಡು ತೀರಿಸಿಕೊಳ್ಳು ಬೆದರಿಕೆ ಹಾಕಿದ್ದಾಗಿ ವಿಚಾರಣೆ ವೇಳೆ ಆರೋಪಿ ಬಾಯ್ಬಿಟ್ಟಿದ್ದಾನೆ.
‘ಮಸೀದಿಯಲ್ಲಿ ಸಿಕ್ಕಿದ್ದು ಶಿವಲಿಂಗವಲ್ಲ, ಕಾರಂಜಿ ಕಲ್ಲು! ಡಮರುಗ, ಕಮಲ, ಆನೆ, ಕುದುರೆ… ಹಿಂದೂ ಚಿಹ್ನೆಯಲ್ಲ’

ದೊಡ್ಡ ತ್ಯಾಗಕ್ಕೆ ಸಿದ್ಧರಾದರೇ ಡಿಕೆಶಿ? ಕುತೂಹಲ ಮೂಡಿಸಿದೆ ಅವರ ಈ ಮಾತು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + 7 =
Remember me
