ಸಾಗರ:ಕರೊನಾ ಸೋಂಕಿಗೆ ಇಡೀ ಜಗತ್ತು ತಲ್ಲಣಗೊಂಡಿದೆ. ಈ ನಡುವೆ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಜನರಲ್ಲಿ ಮತ್ತಷ್ಟು ಭೀತಿ ಹುಟ್ಟಿಸಿದೆ.
ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಲ್ಲಿ ಮತ್ತೊಮ್ಮೆ ಮಂಗನ ಕಾಯಿಲೆ ಸೋಂಕು ಪತ್ತೆಯಾಗಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದೆ. ಜನವರಿ ನಂತರ ಇದೇ ಮೊದಲ ಬಾರಿಗೆ ಸಾಗರ ತಾಲೂಕಿನ ತ್ಯಾಗರ್ತಿ ಸಮೀಪ ಮುತ್ತಲಬೈಲು ಗ್ರಾಮದ 18 ವರ್ಷದ ಯುವಕ, ತೀರ್ಥಹಳ್ಳಿ ತಾಲೂಕು ಮೇಗರವಳ್ಳಿಯ 40 ವರ್ಷದ ಮಹಿಳೆ ಹಾಗೂ ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ 40 ವರ್ಷದ ಮಹಿಳೆಯಲ್ಲಿ ಸೋಂಕು ದೃಢಪಟ್ಟಿದೆ.
2019ರಲ್ಲಿ ಸಾಗರ ತಾಲೂಕು ಅರಳಗೋಡು ಸುತ್ತಮುತ್ತ ಭಾರಿ ಸಾವು-ನೋವು ಉಂಟುಮಾಡಿದ್ದ ಮಂಗನ ಕಾಯಿಲೆ ಇಲ್ಲಿಯವರೆಗೂ ಸಂರ್ಪೂಣ ಹತೋಟಿಯಲ್ಲಿತ್ತು. ಸರ್ಕಾರ ಕೈಗೊಂಡ ಮುನ್ನೆಚ್ಚರಿಕಾ ಕ್ರಮಗಳಿಂದ ಯಾವುದೇ ಪ್ರಕರಣ ದಾಖಲಾಗಿರಲಿಲ್ಲ. ಆದರೆ ಪ್ರಸ್ತುತ ಮೂವರಲ್ಲಿ ಸೋಂಕು ಕಾಣಿಸಿಕೊಂಡು ಆತಂಕ ಸೃಷ್ಟಿಸಿದೆ.
18 ಮಂದಿಗೆ ಕರೊನಾ ಅಂಟಿಸಿದ ಒಂದೇ ಒಂದು ಸಿಗರೇಟ್​!
ನಡುರಸ್ತೆಯಲ್ಲೇ ಟ್ರಾಫಿಕ್​ ಪೊಲೀಸ್​ಗೆ ಅವಾಜ್​ ಹಾಕಿದ ಮಹಿಳೆ! ವಿಡಿಯೋ ವೈರಲ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × three =
Remember me
