ಬೆಂಗಳೂರು:ರಾಜ್ಯದ ಲಕ್ಷಾಂತರ ಸ್ವತ್ತುದಾರರಿಗೆ ನೆಮ್ಮದಿ ತರುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ರಾಜ್ಯಾದ್ಯಂತ ಇರುವ ಬಿ ಖಾತಾ ಸ್ವತ್ತುಗಳನ್ನು ಎರಡು ತಿಂಗಳಿನಲ್ಲಿ ಎ ಖಾತೆಗೆ ಪರಿವರ್ತನೆ ಮಾಡಲು ಸರ್ಕಾರ ಮುಂದಾಗಿದ್ದು, ಇದರಿಂದಾಗಿ ಬೊಕ್ಕಸಕ್ಕೆ ಕೋಟ್ಯಂತರ ರೂ.ಗಳ ಆದಾಯ ಬರುವ ನಿರೀಕ್ಷೆ ಇದೆ.
ಬೆಂಗಳೂರಿನಲ್ಲಿ ಅಕ್ರಮ-ಸಕ್ರಮ ವಿಚಾರ ಸುಪ್ರೀಂಕೋರ್ಟ್ ಮುಂದಿದೆ. ಹಾಗಾಗಿ ರಾಜಧಾನಿ ಹೊರತುಪಡಿಸಿ ಇನ್ನುಳಿದ ನಗರಗಳಲ್ಲಿ ಬಿ ಖಾತೆಗಳನ್ನು ಎ ಖಾತೆಗಳಾಗಿ ಪರಿವರ್ತನೆ ಮಾಡಲಾಗುತ್ತದೆ. ಅಂದಾಜು 10 ಲಕ್ಷ ಬಿ ಖಾತೆಗಳು ಬೆಂಗಳೂರು ಬಿಟ್ಟು ಉಳಿದ ನಗರಗಳಲ್ಲಿವೆ. ಇವುಗಳಿಗೆ ತೆರಿಗೆ ನಿಗದಿಯಾದರೆ ಸ್ಥಳೀಯ ನಗರ ಸಂಸ್ಥೆಗಳಿಗೆ ಕನಿಷ್ಠ 100ರಿಂದ 150 ಕೋಟಿ ರೂ.ಗಳ ಆದಾಯ ಬರಲಿದೆ. ಎ ಖಾತೆಗೆ ಪರಿವರ್ತನೆಯಾಗುವ ನಿವೇಶನದಾರರು ಬ್ಯಾಂಕ್​ಗಳಿಂದ ಸಾಲ ಪಡೆಯುವುದು ಸೇರಿ ಹಲವು ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗಲಿದೆ ಎಂದು ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ ತಿಳಿಸಿದರು. ರಾಜ್ಯದ ಹತ್ತು ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಎರಡು ಲಕ್ಷಕ್ಕೂ ಅಧಿಕ ಬಿ ಖಾತೆದಾರರಿದ್ದು, ನಗರಸಭೆ ಮತ್ತಿತರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸೇರಿ 10 ಲಕ್ಷ ಖಾತೆ ಇರಬಹುದೆಂದು ಅಂದಾಜು ಮಾಡಲಾಗಿದೆ ಎಂದರು.
ಸಿಎ ನಿವೇಶನಗಳ ಮಾಹಿತಿ ಕೋರಿಕೆ:ವಿವಿಧ ನಗರಾಭಿವೃದ್ಧಿ ಪ್ರಾಧಿಕಾರಗಳ ವ್ಯಾಪ್ತಿಯಲ್ಲಿ ನಿರ್ವಿುಸಲಾದ ಲೇಔಟ್​ಗಳಲ್ಲಿ ನಾಗರಿಕ ಬಳಕೆಗೆಂದು ಮೀಸಲಿಟ್ಟ (ಸಿಎ) ನಿವೇಶನಗಳು ಸಮರ್ಪಕ ನಿರ್ವಹಣೆಯಿಲ್ಲದೆ ಒತ್ತುವರಿಯಾಗುತ್ತಿರುವ ಕುರಿತು ಸರ್ಕಾರಕ್ಕೆ ದೂರುಗಳು ಬಂದಿವೆ. ಇಂಥ ನಿವೇಶನಗಳ ಮಾಹಿತಿ ನೀಡುವಂತೆ ಪ್ರಾಧಿಕಾರಗಳಿಗೆ ಸೂಚನೆ ನೀಡಲಾಗಿದೆ ಎಂದು ಬಿ.ಎ.ಬಸವರಾಜ ವಿವರಿಸಿದರು. ವಿವರ ದೊರೆತ ನಂತರ ಒತ್ತುವರಿಯನ್ನು ನಿರ್ದಾಕ್ಷಿಣ್ಯವಾಗಿ ತೆರವು ಮಾಡಿಸಿ, ಶಾಲೆ, ಆಸ್ಪತ್ರೆ ಮತ್ತಿತರ ಸಾರ್ವಜನಿಕ ಉದ್ದೇಶಕ್ಕೆ ನೀಡುವ ಅಥವಾ ಸರ್ಕಾರದ ಬೇರೆ ಕೆಲಸಗಳಿಗೆ ಮೀಸಲಿಡುವ ಬಗ್ಗೆ ತೀರ್ವನಿಸುತ್ತೇವೆ ಎಂದರು.
ಕುಡಿಯುವ ನೀರು:ರಾಜ್ಯಾದ್ಯಂತ ಕುಡಿಯುವ ನೀರು ಒದಗಿಸಲು 9,335 ಕೋಟಿ ರೂ. ವೆಚ್ಚದ ಅಮೃತ ಯೋಜನೆ ಸಿದ್ದಪಡಿಸಲಾಗಿದೆ. ಇದಕ್ಕೆ ಸಂಬಂಧಿಸಿದ ಪ್ರಸ್ತಾವವನ್ನು ಸಿಎಂಗೆ ಸಲ್ಲಿಸಲಾಗಿದೆ ಎಂದು ಬಸವರಾಜ ತಿಳಿಸಿದರು. ಈ ಯೋಜನೆಗೆ ಕೇಂದ್ರ ಸರ್ಕಾರ ಶೇ.50 ಹಣ ನೀಡುತ್ತಿದೆ. ಈ ಯೋಜನೆಯಡಿ ರಾಜ್ಯದ ಎಲ್ಲರಿಗೂ ಕುಡಿಯುವ ನೀರು ಒದಗಿಸಲು ಯೋಚಿಸಲಾಗಿತ್ತಾದರೂ ಅದಕ್ಕೆ 20 ಸಾವಿರ ಕೋಟಿ ರೂ.ಗಳ ಅಗತ್ಯವಿತ್ತು. ಹೀಗಾಗಿ ಯೋಜನೆಯ ಶೇ.50 ಭಾಗವನ್ನು ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ ಎಂದರು.
ಎರಡು ದಶಕಗಳ ಮುನ್ನೋಟ:ಅಮೃತ ಕುಡಿಯುವ ನೀರು ಯೋಜನೆಯನ್ನು ರೂಪಿಸುವಾಗ 2040ವರೆಗೆ ನಗರಗಳು ಬೆಳೆಯುವ ವೇಗವನ್ನು ಮನಸ್ಸಿನಲ್ಲಿಟ್ಟುಕೊಳ್ಳಲಾಗಿದೆ. ಅದೇ ರೀತಿ ಪ್ರತಿಯೊಬ್ಬರಿಗೆ ದಿನವೊಂದಕ್ಕೆ 135 ಲೀಟರ್ ನೀರು ಕೊಡುವ ಗುರಿ ಇರಿಸಿಕೊಳ್ಳಲಾಗಿದೆ. ಈ ಯೋಜನೆಯನ್ನು ತ್ವರಿತವಾಗಿ ಕೈಗೆತ್ತಿಕೊಳ್ಳಲಾಗುವುದು. ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಆಹ್ವಾನಿಸಲು ಉದ್ದೇಶಿಸಲಾಗಿದೆ ಎಂದು ಸಚಿವರು ತಿಳಿಸಿದರು.
ನಲ್ಲಿಗಳ ಸಕ್ರಮ:ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಕ್ರಮ ನಲ್ಲಿ ಸಂಪರ್ಕ ಹೊಂದಿರುವವರು ಆಧಾರ್ ಸಂಖ್ಯೆ ಮತ್ತು ಬಾಂಡ್ ನೀಡಿ ಸಕ್ರಮಗೊಳಿಸಿಕೊಳ್ಳುವ ಯೋಜನೆಯನ್ನು ಸದ್ಯದಲ್ಲೇ ಜಾರಿಗೆ ತರಲಾಗುವುದು. ಒಡಿಶಾದಲ್ಲಿ ಇಂತಹ ಪದ್ಧತಿ ಇದೆ. ಈ ಪದ್ಧತಿ ಅಧ್ಯಯನ ಮಾಡಲು ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳ ತಂಡವನ್ನು ಒಡಿಶಾಗೆ ಕಳಿಸಲಾಗುವುದು ಎಂದು ಬಸವರಾಜ ಹೇಳಿದರು.
ನೀರಿನ ಬಾಕಿ ಬಡ್ಡಿ ಮನ್ನಾ:ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಬಿಲ್ ಬಾಕಿ ಪ್ರಮಾಣ 600 ಕೋಟಿ ರೂ.ಗಳಷ್ಟಿದ್ದು, ಒನ್ ಟೈಮ್ ಸೆಟ್ಲ್​ಮೆಂಟ್ ಆಧಾರದ ಮೇಲೆ ಬಾಕಿ ಪಾವತಿಗೆ ಅನುಕೂಲ ಮಾಡಿಕೊಡಲು ಯೋಚಿಸಲಾಗಿದೆ. ಗ್ರಾಹಕರು ನೀರಿನ ಬಾಕಿಯನ್ನು ಪಾವತಿಸಿದರೆ ಬಡ್ಡಿ ಮನ್ನಾ ಮಾಡುವುದು ಸರ್ಕಾರದ ಚಿಂತನೆ.
Video | ಚಲಿಸುತ್ತಿದ್ದ ಕಾರಿನ ಮೇಲೇ ಬಿತ್ತು ಬೃಹತ್ ಕೊಂಬೆ; ಬೆಚ್ಚಿ ಬೀಳಿಸುವಂಥ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + 18 =
Remember me
