ಮಂಡ್ಯ:ಹೆಗಲ ಮೇಲೆ ಕೈ ಹಾಕಲು ಬಂದ ಕಾರ್ಯಕರ್ತನ ತಲೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೊಡೆದಿರುವ ವಿಡಿಯೋ ವೈರಲ್​ ಆಗಿದೆ.
ಸಂಸದೆ ಸುಮಲತಾ v/s ಮಾಜಿ ಸಿಎಂ ಕುಮಾರಸ್ವಾಮಿ ನಡುವಿನ ಸಮರ ರಾಜ್ಯಾದ್ಯಂತ ಭಾರೀ ಸದ್ದು ಮಾಡುತ್ತಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್​ ಕಾರ್ಯಕರ್ತನ ತಲೆಗೆ ಡಿಕೆಶಿ ಭಾರಿಸಿದ ಏಟು ಮತ್ತಷ್ಟು ಸದ್ದು ಮಾಡುತ್ತಿದೆ. ಶನಿವಾರ ಬೆಳಗ್ಗೆ ಡಾ.ಜಿ.ಮಾದೇಗೌಡರ ಆರೋಗ್ಯ ವಿಚಾರಿಸಲು ಕೆ.ಎಂ.ದೊಡ್ಡಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಆಗಮಿಸಿದ್ದರು. ಈ ವೇಳೆ ಪಕ್ಕ‌ದಲ್ಲಿಯೇ ಬರುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತನೊಬ್ಬನಿಗೆ ಡಿಕೆಶಿ ಹೊಡೆದಿದ್ದಾರೆ.

ಹಿಂಭಾಗದಿಂದ ಡಿಕೆಶಿ ಹೆಗಲ ಮೇಲೆ ಕೈ ಹಾಕಿದ್ದಕ್ಕೆ ಹೊಡೆದಿದ್ದಾರೆ ಎನ್ನಲಾಗಿದೆ. ಮೊಬೈಲ್​ನಲ್ಲಿ ವಿಡಿಯೋ ಮಾಡ್ತಿರೋದನ್ನ ನೋಡಿ ಹೆಗಲ ಮೇಲೆ ಕೈ ಹಾಕ್ತಿಯಾ? ಕಾಮನ್‌ಸೆನ್ಸ್ ಇಲ್ವಾ? ಎಂದು ಕಾರ್ಯಕರ್ತನಿಗೆ ಡಿಕೆಶಿ ಗದರಿದರು. ಡಿಕೆಶಿ ಕೊಟ್ಟ ಏಟಿಗೆ ಕಾರ್ಯಕರ್ತರು ತಬ್ಬಿಬ್ಬಾದರು. ಡಿಕೆ ವರ್ತನೆಗೆ ಕೆಲ ಕಾರ್ಯಕರ್ತರು ಅಸಮಧಾನ ಹೊರಹಾಕಿದ್ದಾರೆ. ಈ ಹಿಂದೆಯೂ ಸೆಲ್ಫಿ ತೆಗೆದುಕೊಳ್ಳಲು ಬಂದ ಕಾರ್ಯಕರ್ತನಿಗೂ ಡಿಕೆಶಿ ಬಾರಿಸಿದ್ದರು.
ಆಂಟಿಗೆ ನವವಿವಾಹಿತ ಯುವಕನ ಮೇಲೆ ಮೋಹ! ಮುಂದಾಗಿದ್ದು ಘನಘೋರ ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + fifteen =
Remember me
