ಬೆಳಗಾವಿ:ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಶನಿವಾರ 4ನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ಸಾರಿಗೆ ನೌಕರರ ಸಂಘಟನೆ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್​ ಅವರನ್ನು ಪೊಲೀಸರು ಬೆಳಗಾವಿ ಜಿಲ್ಲೆಯಿಂದ ಗಡಿಪಾರು ಮಾಡಿದ್ದಾರೆ.
ಬೆಳಗಾವಿ ‌ಸುವರ್ಣಸೌಧ ಆವರಣದಲ್ಲಿ ರೈತರ‌‌ ಮತ್ತು ಸಾರಿಗೆ ನೌಕರರ ಸಭೆ, ಪ್ರತಿಭಟನೆ ನಡೆಸಲು ಕೋಡಿಹಳ್ಳಿ ಚಂದ್ರಶೇಖರ್​ ಮುಂದಾಗಿದ್ದರು. ಈ ಸಂಬಂಧ ಪೊಲೀಸರಿಂದ ಮುಂಚಿತವಾಗಿ ಅನುಮತಿ ಪಡೆದಿರಲಿಲ್ಲ. ಈ ಹಿನ್ನೆಲೆಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್​ ಅವರನ್ನ ವಶಕ್ಕೆ ಪಡೆದ ನಗರದ ಕ್ಯಾಂಪ್ ಠಾಣೆ ಪೊಲೀಸರು ಜಿಲ್ಲೆಯಿಂದ ಗಡಿಪಾರು‌ ಮಾಡಿದರು.ಇದನ್ನೂ ಓದಿರಿರಮೇಶ್ ಜಾರಕಿಹೊಳಿ ಅಪಾರ್ಟ್​ಮೆಂಟ್​ನಲ್ಲಿದೆ ಸೀಕ್ರೆಟ್​ ಡೋರ್​! ಸ್ಫೋಟಕ ರಹಸ್ಯ ಬಯಲು
ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದೆ. ಇಂತಹ ಸಂದರ್ಭದಲ್ಲಿ ಪ್ರತಿಭಟನೆಗೆ ಮುಂದಾಗಿದ್ದಕ್ಕೆ ಕೋಡಿಹಳ್ಳಿ ಚಂದ್ರಶೇಖರ್​ರನ್ನು ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ.
ಶಾಂತಿಯುತ ಹಾಗೂ ಅಹಿಂಸಾ ಮಾರ್ಗದ ಹೋರಾಟ ಹತ್ತಿಕ್ಕುವ ಪ್ರಯತ್ನವನ್ನ ಸರ್ಕಾರ ಮಾಡಿದೆ. ಎನೇ ಮಾಡಿದರೂ ಈ ರೀತಿಯ ಧಮನಕಾರಿ ನೀತಿಯಿಂದ ನಮ್ಮನ್ನು ಹತ್ತಿಕ್ಕಲು ಸಾಧ್ಯವಿಲ್ಲ. ಸರ್ಕಾರ ನಮ್ಮ ಮೇಲೆ ಎಂದು ಕಣ್ತೆರೆದು ನೋಡುತ್ತೋ ಆ ದಿನಕ್ಕಾಗಿ ನಾವು ಕಾದು ನೋಡ್ತೇವೆ ಎಂದು ಕೋಡಿಹಳ್ಳಿ ಚಂದ್ರಶೇಖರ್​ ಹೇಳಿದ್ದಾರೆ.
ಕೂತು ಮಾತುಕತೆಗೆ ಸರ್ಕಾರ ಕರೆಯಲಿ. ನಾವು ಬರುತ್ತೇವೆ. ಸರ್ಕಾರ ಮಧ್ಯರಾತ್ರಿ 2 ಗಂಟೆಗೆ ಕರೆದರೂ ನಾವು ಹೋಗಿ ಸಂಧಾನ ಚರ್ಚೆ ಮಾಡಲು ಸಿದ್ಧರಿದ್ದೇವೆ. ಸಂಧಾನ ಸಫಲ ಆದ ಮರುಕ್ಷಣವೇ ನಮ್ಮೆಲ್ಲ ವಾಹನಗಳು ರಸ್ತೆಗೆ ಇಳಿಯುತ್ತವೆ ಎಂದಿದ್ದಾರೆ.
ಪ್ರೇಮಿಗಳ ಮಧ್ಯೆ ಹುಳಿ ಹಿಂಡಿದ್ಲಾ ಆಕೆ? ಆತ್ಮಹತ್ಯೆ ಯತ್ನಕ್ಕೂ ಮುನ್ನ ಮನದ ನೋವನ್ನು ಅಕ್ಷರಕ್ಕಿಳಿಸಿದ ಚೈತ್ರಾ ಕೋಟೂರ್​

ಡೆತ್​ನೋಟ್​ ಬರೆದಿಟ್ಟು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮನೆ ಮುಂದೆ ಮಹಿಳೆ ಆತ್ಮಹತ್ಯೆ!

ಪಾರ್ಟಿಗೆ ಹೋಗ್ಬೇಕು ಚಪಾತಿ ಮಾಡಮ್ಮ ಎಂದ ಮಗ ಶವವಾಗಿ ಪತ್ತೆ!

ರೌಡಿಶೀಟರ್ ಪತ್ನಿ ಜತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪ್ರಿಯಕರ! ಮುಂದೆ ಆಗಿದ್ದೆಲ್ಲವೂ ಅವಾಂತರ

ರಮೇಶ್ ಜಾರಕಿಹೊಳಿ ಅಪಾರ್ಟ್​ಮೆಂಟ್​ನಲ್ಲಿದೆ ಸೀಕ್ರೆಟ್​ ಡೋರ್​! ಸ್ಫೋಟಕ ರಹಸ್ಯ ಬಯಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − three =
Remember me
