ಸಿದ್ದಾಪುರ:ಮೈಸೂರು ರಸ್ತೆ ಬಡಾವಣೆಯಲ್ಲಿ ಉರಗ ರಕ್ಷಕ ಸ್ನೇಕ್​ ಸುರೇಶ್​ ರಕ್ಷಣೆ ಮಾಡಿದ ಕೊಳಕು ಮಂಡಲ ಹಾವು 41 ಮರಿಗಳಿಗೆ ಜನ್ಮ ನೀಡಿದೆ. ಸ್ನೇಕ್​ ಸುರೇಶ್​ ಹಾವು ಹಿಡಿಯುವ ಸಂದರ್ಭದಲ್ಲಿ ಹಾವಿಗೆ ಸಣ್ಣಪುಟ್ಟ ಗಾಯ ಆಗಿದ್ದರಿಂದ ತಮ್ಮ ಮನೆಯಲ್ಲಿ ಎರಡು ದಿನ ಇರಿಸಿಕೊಂಡು ಸ್ನೇಕ್​ ನವೀನ್​ ಅವರೊಂದಿಗೆ ಚಿಕಿತ್ಸೆ ನೀಡಿದ್ದರು. ಇದೀಗ ಸ್ನೇಕ್​ ಸುರೇಶ್​ ಮನೆಯಲ್ಲಿ ಆ ಹಾವು 41 ಮರಿಗಳಿಗೆ ಜನ್ಮ ನೀಡಿದೆ.
ಸ್ನೇಕ್​ ನವೀನ್​, ಸ್ನೇಕ್​ ವಿನೋದ್​ ಬಾವೆ, ಸ್ನೇಕ್​ ಮನೋಜ್​, ಸ್ನೇಕ್​ ರೋಷನ್​ ಅವರು ಕೊಳಕು ಮಂಡಲ ಹಾವು ಮತ್ತು 41 ಮರಿಗಳನ್ನು ಅರಣ್ಯ ಅಧಿಕಾರಿ ಉಮಾಶಂಕರ್​ ನೇತೃತ್ವದಲ್ಲಿ ಸೋಮವಾರ ತಿತಿಮತಿ ಅರಣ್ಯಕ್ಕೆ ಬಿಟ್ಟಿದ್ದಾರೆ.
ಕೊಡಗು ಉರಗ ಸಂರಕ್ಷರ ಸಂಘದ ಸದಸ್ಯರು ಹಲವು ವರ್ಷಗಳಿಂದ ಹಾವಿನ ಮೊಟ್ಟೆಗಳ ರಕ್ಷಣೆ ಮಾಡಿ, ಮರಿ ಮಾಡಿಸುವ ಕೆಲಸ ಮಾಡುತ್ತಿದ್ದಾರೆ. ಹಾವುಗಳಿಗೆ ಗಾಯಗಳಾದರೆ ಚಿಕಿತ್ಸೆ ನೀಡಿ ಒಂದು ದಿನದ ಮಟ್ಟಿಗೆ ಮನೆಯಲ್ಲಿ ಇಟ್ಟು ನಂತರ ಅರಣ್ಯಕ್ಕೆ ಬಿಡಲಾಗುವುದು ಎಂದು ಕೊಡಗು ಉರಗ ಸಂರಕ್ಷಕರ ಸಂಘದ ಅಧ್ಯಕ್ಷ ಸ್ನೇಕ್​ ಸುರೇಶ್​, ಸ್ನೇಕ್​ ನವೀನ್​ ಮಾಹಿತಿ ನೀಡಿದ್ದಾರೆ.
ಕುಜ ದೋಷಕ್ಕೆ ಮಹಿಳಾ ಪೊಲೀಸ್​ ಬಲಿ! ಮದ್ವೆ ನಿರಾಕರಿಸಿ ವಿಷ ಕುಡಿಸಿದ್ದ ಪ್ರಿಯಕರ… ಶಿವಮೊಗ್ಗದಲ್ಲಿ ಮನಕಲಕುವ ಘಟನೆ

ಯೋಗಕ್ಕೆ ಧರ್ಮದ ಪಟ್ಟಿ ಕಟ್ಟಿರುವುದು ಬೇಸರ: ನಟಿ ಅದಿತಿ ಪ್ರಭುದೇವ ವಿಷಾದ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:1 × 2 =
Remember me
