ಚಾಮರಾಜನಗರ:ತಾಲೂಕಿನ ಬಾಣಳ್ಳಿ ಗೇಟ್ ಬಳಿ ಬುಧವಾರ ರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಕೊಳ್ಳೇಗಾಲ ಮಾಜಿ ಶಾಸಕ ಎಸ್.ಬಾಲರಾಜು ಸೇರಿ ಮೂವರು ಗಾಯಗೊಂಡಿದ್ದಾರೆ.
ಬಾಲರಾಜು ತೆರಳುತ್ತಿದ್ದ ಕಾರು ಮತ್ತು ಅಶೋಕ ಲೈಲ್ಯಾಂಡ್ ಗಾಡಿ ಮುಖಾಮುಖಿ ಡಿಕ್ಕಿ ಹೊಡೆದಿದೆ. ಪರಿಣಾಮ ಬಾಲರಾಜು ಮತ್ತು ಅವರ ಕಾರು ಚಾಲಕ ಮೋಹನ್ ಕಾಲಿಗೆ ಪೆಟ್ಟು ಬಿದ್ದಿದೆ. ಇವರ ಕಾರಿಗೆ ಡಿಕ್ಕಿ ಹೊಡೆದ ವಾಹನದ ಚಾಲಕ ಮತ್ತು ಕ್ಲೀನರ್​ನ ಸ್ಥಿತಿ ಗಂಭೀರವಾಗಿದೆ. ನಾಲ್ವರು ಗಾಯಾಳುಗಳನ್ನೂ ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.
ಬಾಲರಾಜು ಬುಧವಾರ ರಾತ್ರಿ ಯಳಂದೂರಿನಿಂದ ಮೈಸೂರಿಗೆ ತೆರಳುತ್ತಿದ್ದರು. ಈ ವೇಳೆ ಬಾಣಳ್ಳಿ ಗೇಟ್ ಬಳಿ ಅಪಘಾತವಾಗಿದೆ. ಬಾಲರಾಜು ಅವರ ಕಾರಿನಲ್ಲಿ ಏರ್ ಬ್ಯಾಗ್ ಇದ್ದದ್ದರಿಂದ ಅವರಿಗೆ ಮತ್ತು ಅವರ ಕಾರು ಚಾಲಕನಿಗೆ ಹೆಚ್ಚು ಪೆಟ್ಟು ಬಿದ್ದಿಲ್ಲ. ಆದರೆ ಅಶೋಕ ಲೈಲ್ಯಾಂಡ್ ಗಾಡಿಯಲ್ಲಿದ್ದ ಚಾಲಕ ಮತ್ತು ಕ್ಲೀನರ್​ಗೆ ತೀವ್ರ ಗಾಯಗಳಾಗಿರುವುದಾಗಿ ಎಂದು ತಿಳಿದುಬಂದಿದೆ.
ಸ್ಥಳೀಯರು ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ರವಾನಿಸಿದ್ದಾರೆ. ಸಂತೇಮರಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಮಂಡ್ಯದಲ್ಲಿ ಐವರ ಕೊಲೆ: ನಮ್ಮಿಬ್ಬರಿಗೂ ಆಫೇರ್ ಇತ್ತು, ಪಂಚಾಯ್ತಿ ಮಾಡಿ ಸೀರೆ ಹಾಕಿಸಿದ್ರು… ಸ್ಫೋಟಕ ರಹಸ್ಯ ಬಾಯ್ಬಿಟ್ಟ ಮೃತಳ ಗಂಡ

ಮದ್ವೆಗೂ ಮುನ್ನ ಆಕೆಗೆ ತಿಳಿಯದಂತೆ ಅಶ್ಲೀಲ ಫೋಟೋ ಕ್ಲಿಕ್ಕಿಸಿದ, ಮದ್ವೆ ಬಳಿಕ ಪತ್ನಿಗೆ ಆತ ಕೊಟ್ಟ ಚಿತ್ರಹಿಂಸೆ ಅಷ್ಟಿಷ್ಟಲ್ಲ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 4 =
Remember me
