ಕೊಪ್ಪಳ:ತಡರಾತ್ರಿ ಊಟ ಇಲ್ಲ ಎಂದಿದ್ದಕ್ಕೆ ಆಕ್ರೋಶಗೊಂಡ ದುಷ್ಕರ್ಮಿಗಳು ಡಾಬಾಗೆ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾರೆ. ಅಷ್ಟೇ ಅಲ್ಲ ಅಡುಗೆ ಸಿಬ್ಬಂದಿ ಇದ್ದ ಕೋಣೆಗೆ ಹೊರಗಿನಿಂದ ಚಿಲಕ ಹಾಕಿ, ನೀರಿನ ಸಂಪರ್ಕವನ್ನೂ ಕಡಿತ ಮಾಡಿ ಪರಾರಿಯಾಗಿದ್ದಾರೆ. ಇಂತಹ ಅಮಾನವೀಯ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕು ಆನೆಗೊಂದಿ ಬಳಿ ನಡೆದಿದೆ.
ಬುಧವಾರ ರಾತ್ರಿ 12 ಗಂಟೆಗೆ ಡಾಬಗೆ ಬಂದ ಅಪರಿಚಿತರು ಊಟ ಕೇಳಿದ್ದಾರೆ. ಊಟ ಖಾಲಿ ಆಗಿದೆ, ಲಭ್ಯವಿಲ್ಲ ಎಂದು ಡಾಬಾ ಸಿಬ್ಬಂದಿ ಹೇಳಿದ್ದಾರೆ. ಇದಕ್ಕೆ ಸಿಡಿಮಿಡಿಗೊಂಡ ಅಪರಿಚಿತರು, ಅಡುಗೆ ಸಿಬ್ಬಂದಿಗೆ ಗೊತ್ತಾಗದಂತೆ ಕೋಣೆಯ ಹೊರಗಿನಿಂದ ಚಿಲಕ ಹಾಕಿ ಕೂಡಿ ಹಾಕಿದ್ದಾರೆ. ಬಳಿಕ ನೀರಿನ ಸಂಪರ್ಕ ಕಡಿತಗೊಳಿಸಿ ಬೆಂಕಿ ಹಚ್ಚಿದ್ದಾರೆ. ಗುಡಿಸಲು ಮಾದರಿಯಲ್ಲಿದ್ದ ಮಂಗಳೂರು ಹೆಂಚಿನ ಹೊದಿಕೆಯ ಒಟ್ಟು 11 ಕೊಠಡಿಗಳು ಬೆಂಕಿಗೆ ಆಹುತಿಯಾಗಿವೆ.
ಅಡುಗೆ ಕೋಣೆಯಲ್ಲಿದ್ದ ಸಿಬ್ಬಂದಿ ತಕ್ಷಣ ಫೋನ್ ಮೂಲಕ ಆನೆಗೊಂದಿ ಗ್ರಾಮಸ್ಥರನ್ನು ಸ್ಥಳಕ್ಕೆ ಕರೆಸಿಕೊಂಡು ಬಂಧನದಿಂದ ಹೊರ ಬಂದಿದ್ದಾರೆ. ಬೆಂಕಿ ನಂದಿಸುವ ಹೊತ್ತಿಗಾಗಲೇ ಡಾಬಾ ಸಂಪೂರ್ಣ ಭಾಗ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್​ ಯಾವುದೇ ಸಾವು-ನೋವು ಸಂಭವಿಸಿಲ್ಲ. ಸ್ಥಳಕ್ಕೆ ಗಂಗಾವತಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಡಿಕೆಶಿಗೆ ಮತ್ತೆ ಎದುರಾಯ್ತು ಸಂಕಷ್ಟ! ಚಾರ್ಜ್​ಶೀಟ್​ ಸಲ್ಲಿಸಿದ ಇಡಿ

ಈಕೆಗೆ ಲವರ್​ ಬೇಕು-ಮಗು ಬೇಡ, ವಿವಾಹಿತೆ ಜತೆಗಿನ ಲವ್ವಿಡವ್ವಿಗಾಗಿ ಯುವಕ ಹೀಗಾ ಮಾಡೋದು? ಇವರ ಕೃತ್ಯ ಕೇಳಿದ್ರೆ ಹಿಡಿಶಾಪ ಹಾಕ್ತೀರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + nine =
Remember me
