ವಿಟ್ಲ:ಅನ್ಯ ಧರ್ಮದ ಮದುಮಗನೊಬ್ಬ ತನ್ನ ಮದುವೆಯಲ್ಲಿ ತುಳುನಾಡ ಆರಾಧ್ಯ ದೈವ ಕೊರಗಜ್ಜನ ವೇಷ ಧರಿಸಿ ಕುಣಿದಿದ್ದ ಪ್ರಕರಣದಲ್ಲಿ ಈತನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಉಪ್ಪಳದ ಉಮರುಲ್ಲಾ ಬಾಷಿತ್ ಬಂಧಿತ. ವಧುವಿನ ಮನೆಗೆ ಬರುವ ಸಂದರ್ಭದಲ್ಲಿ ಈತ, ಕೊರಗಜ್ಜನ ವೇಷ ಧರಿಸಿ ತಲೆಗೆ ಅಡಿಕೆ ಹಾಳೆಯ ಟೋಪಿ ಹಾಕಿ ಮುಖಕ್ಕೆ ಮಸಿ ಬಳಿದುಕೊಂಡು ನೃತ್ಯ ಮಾಡುತ್ತಾ ಬಂದಿದ್ದ. ಇದಕ್ಕೆ ಈತನ ಸ್ನೇಹಿತರೂ ಸಾಥ್​ ಕೊಟ್ಟಿದ್ದರು. ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದಲ್ಲಿ ಕಳೆದ ತಿಂಗಳು ನಡೆದಿದ್ದ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಮುಸ್ಲಿಂ ಯುವಕರ ವರ್ತನೆಗೆ ಹಿಂದೂ ಹಾಗೂ ಮುಸ್ಲಿಂ ಎರಡೂ ಸಮುದಾಯದವರು ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರತಿಭಟನೆಗಳೂ ನಡೆದಿದ್ದವು. ವರ ಹಾಗೂ ಆತನ ಸ್ನೇಹಿತರ ವಿರುದ್ಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣ ಸಂಬಂಧ ಜ.11ರಂದು ಮಂಗಳೂರಿನ ಮಂಗಲ್ಪಾಡಿ ನಿವಾಸಿ ಅಹ್ಮದ್ ಮುಜಿತಾಬು(28) ಮತ್ತು ಬಾಯಾರು ಪದವು ನಿವಾಸಿ ಮೊಯ್ದೀನ್ ಮುನಿಶ್(19) ಎಂಬುವರನ್ನು ಪೊಲೀಸರು ಬಂಧಿಸಿದ್ದರು. ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ, ಮದುಮಗ ಉಮರುಲ್ಲಾ ಬಾಷಿತ್​ ಇದೀಗ ಸಿಕ್ಕಿಬಿದ್ದಿದ್ದಾನೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + twenty =
Remember me
