ಬೆಂಗಳೂರು:ಕೋವಿಡ್‌ ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಪ್ರಕರಣಗಳಲ್ಲಿ ಪರಿಹಾರ ಕೋರಿ ಅರ್ಜಿ ಸಲ್ಲಿಸಲು ನಿಗದಿ ಪಡಿಸಲಾಗಿದ್ದ ದಿನಾಂಕವನ್ನು ವಿಸ್ತರಿಸಿ ಸರ್ಕಾರ ಸುತ್ತೋಲೆ ಹೊರಡಿಸಿದೆ.
ಈ ಮೊದಲು ಪರಿಹಾರಕ್ಕೆ ಅರ್ಜಿ ಸಲ್ಲಿಸಲು 2022ರ ಮಾ.20 ಕೊನೇ ದಿನ ಎಂದು ಸೂಚಿಸಲಾಗಿತ್ತು. ಅರ್ಜಿ ಸಲ್ಲಿಕೆಗೆ ಅವಧಿ ಮುಗಿದಿತ್ತು. ಇದೀಗ ಮತ್ತೆ 2022ರ ಜೂ.30ರವರೆಗೆ ಅವಧಿ ವಿಸ್ತರಿಸಲಾಗಿದೆ. ಕರೊನಾದಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬಕ್ಕೆ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ತಲಾ 50,000 ರೂಪಾಯಿ ಪರಿಹಾರ ಧನ ವಿತರಿಸಲಾಗುತ್ತಿದೆ.
ಕೋವಿಡ್​​ನಿಂದಾಗಿ ಸಾವು ದೃಢಪಟ್ಟಿದ್ದು, ಆರೋಗ್ಯ ಇಲಾಖೆಯ ದತ್ತಾಂಶದಲ್ಲಿ ಲಭ್ಯವಿಲ್ಲದ ಪ್ರಕರಣಗಳನ್ನು ಅಪರ ಜಿಲ್ಲಾಧಿಕಾರಿಗಳು/ಬಿಬಿಎಂಪಿ ಜಂಟಿ ಆಯುಕ್ತರ ಅಧ್ಯಕ್ಷತೆಯಲ್ಲಿ ರಚಿಸಲಾದ ಕುಂದು-ಕೊರತೆ ನಿವಾರಣಾ ಸಮಿತಿಯಲ್ಲಿ ತೀರ್ಮಾನಿಸಿ ಸ್ಟೇಟ್ ಕೋವಿಡ್ ವಾರ್ ರೂಂ ಲೈನ್ ಲಿಸ್ಟ್​ನಲ್ಲಿ ಸೇರ್ಪಡೆಗೊಳಿಸಿ ಎಸ್​ಡಿಆರ್​ಎಫ್ ಮಾರ್ಗಸೂಚಿಯನ್ವಯ ಪರಿಹಾರ ಪಾವತಿಸಲು ಸರ್ಕಾರ ಆದೇಶಿಸಿದೆ.
ಸುಪ್ರೀಂ ಕೋರ್ಟ್​ನ ಆದೇಶದಲ್ಲಿ ಕೋವಿಡ್​ನಿಂದ ಮೃತಪಟ್ಟ ವ್ಯಕ್ತಿಗಳ ಕಾನೂನುಬದ್ಧ ವಾರಸುದಾರರಿಗೆ ಪರಿಹಾರ ನೀಡಲು ಅರ್ಜಿ ಸ್ವೀಕಾರ ಹಾಗೂ ಅರ್ಹ ವ್ಯಕ್ತಿಗಳಿಗೆ ಪರಿಹಾರ ಪಾವತಿಸುವ ಕುರಿತು ನಿರ್ದೇಶನಗಳನ್ನು ನೀಡಲಾಗಿದೆ. ಇವುಗಳನ್ನು ಕಟ್ಟುನಿಟ್ಮಾಗಿ ಪಾಲಿಸುವಂತೆ ಹಾಗೂ ಅರ್ಜಿ ಸ್ವೀಕೃತಿಗೆ ಕಾಲಮಿತಿ ನಿಗದಿಪಡಿಸಲಾಗಿದೆ. ಆದರೆ, ಜಿಲ್ಲೆಗಳಿಂದ ಸ್ವೀಕೃತವಾದ ಕೋರಿಕೆಯ ಮೇರೆಗೆ ಗಡುವು ವಿಸ್ತರಿಸಿ ಸರ್ಕಾರ ಸುತ್ತೋಲೆ ಹೊರಡಿಸಿದೆ.
ಜ್ಯೋತಿಷಿ ಮಾತು ಕೇಳಿ ಕೆಟ್ಟ ಪ್ರೇಮಿಗಳು: ಮದ್ವೆಗೆ ಒಪ್ಪಿಗೆ ಸಿಕ್ಕರೂ ಆತ್ಮಹತ್ಯೆಗೆ ಯತ್ನಿಸಿದ ಮಹಿಳಾ ಪೇದೆ-ಅರಣ್ಯ ಅಧಿಕಾರಿ

4 ಮಕ್ಕಳಿಗೆ ಜನ್ಮ ನೀಡಿದ್ದ ಮಹಾತಾಯಿ ಆಸ್ಪತ್ರೆಯಿಂದ ಬಿಡುಗಡೆ: ತಾಯಿ-ಮಕ್ಕಳಿಗೆ ಬೀಳ್ಕೊಟ್ಟ ವೈದ್ಯರು

ಅಕ್ಕನ ಚಿತೆಗೆ ಹಾರಿ ಪ್ರಾಣಬಿಟ್ಟ ತಮ್ಮ! ನೋವಲ್ಲೇ 430km ದೂರದಿಂದ ಬಂದವ ನೋಡನೋಡುತ್ತಿದ್ದಂತೆ ಸುಟ್ಟು ಕರಕಲಾದ

ಗೊರವನಹಳ್ಳಿ ಸಮೀಪ ಘೋರ ಕೃತ್ಯ: 3 ವರ್ಷದ ಬಳಿಕ ಸಿಕ್ಕಿಬಿದ್ದವ ಬಾಯ್ಬಿಟ್ಟ ರಹಸ್ಯ ಕೇಳಿದ್ರೆ ಬೆಚ್ಚಿಬೀಳ್ತೀರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 10 =
Remember me
