ಬೆಂಗಳೂರು:ತಮ್ಮನ್ನು ತಳ್ಳಿ ಅವಮಾನಿಸುವ ಯಾವುದೇ ಉದ್ದೇಶ ಇಲ್ಲ, ನನ್ನ ಅರಿವಿನಲ್ಲೂ ಇಲ್ಲ. ಜನರ ಗುಂಪಿನಲ್ಲಿ ನನ್ನ ಅರಿವಿಗೆ ಬಾರದೇ ಅಚಾತುರ್ಯವಾಗಿದ್ದರೆ ವಿಷಾದಿಸುವೆ… ಎಂದು ಮಾಜಿ ಶಾಸಕ ಬಿ.ಆರ್​. ಪಾಟೀಲ್​ ಅವರಿಗೆ ಪತ್ರ ಬರೆದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಕ್ಷಮೆ ಕೋರಿದ್ದಾರೆ.
ಮೇಕೆದಾಟು ಪಾದಯಾತ್ರೆಯ ವೇಳೆ ಬಿ.ಆರ್​. ಪಾಟೀಲ್​ ಅವರನ್ನು ತಳ್ಳಿ, ಟೋಪಿ ಕಿತ್ತು ಹಾಕಿದರೆಂಬ ಆರೋಪಕ್ಕೆ ಸಂಬಂಧಿಸಿದಂತೆ ಡಿಕೆಶಿ ಪತ್ರ ಬರೆದು ಕ್ಷಮೆ ಕೋರಿದ್ದಾರೆ. ಪಾದಯಾತ್ರೆ ಅರಮನೆ ಮೈದಾನಕ್ಕೆ ಬಂದ ಸಂದರ್ಭದಲ್ಲಿ ಪಾಟೀಲ್​ ಅವರನ್ನು ಅನುಚಿತವಾಗಿ ನಡೆಸಿಕೊಂಡರೆಂಬ ಆರೋಪ ಕೇಳಿ ಬಂದಿತ್ತು. ಪಾಟೀಲ್​ ಈ ಬಗ್ಗೆ ಪಕ್ಷದ ಹೈಕಮಾಂಡ್​ಗೂ ದೂರು ನೀಡಿದ್ದರು. ಹಿರಿಯ ಮುಖಂಡರಿಗೆ ಅಪಮಾನ ಮಾಡಿದ ಬಗ್ಗೆ ಹೈಕಮಾಂಡ್​ ಸಹ ಅಸಮಾಧಾನ ವ್ಯಕ್ತಪಡಿಸಿತ್ತು. ಆ ಹಿನ್ನೆಲೆಯಲ್ಲಿ ಡಿಕೆಶಿ ಗುರುವಾರ ಪತ್ರ ಬರೆದಿದ್ದಾರೆ. ಗೋವಾದಿಂದ ವಾಪಸಾದ ಬಳಿಕ ಖುದ್ದು ಭೇಟಿ ಮಾಡುವುದಾಗಿಯೂ ಪತ್ರದಲ್ಲಿ ಡಿಕೆಶಿ ತಿಳಿಸಿದ್ದಾರೆ.
ತುಮಕೂರು ಮಾಜಿ ಕಾರ್ಪೋರೇಟರ್​ನ ಕಾಮದಾಹಕ್ಕೆ ಯುವತಿ ಬಲಿ! ಬೆಚ್ಚಿಬೀಳಿಸುತ್ತೆ ಕೊನೇ ಕ್ಷಣದಲ್ಲಿ ಆಕೆ ಬಾಯ್ಬಿಟ್ಟ ರಹಸ್ಯ

ಹಿಂದೂ ಯುವತಿ ಬಾಳಲ್ಲಿ ಘೋರ ದುರಂತ: ಗಂಡನ ರಹಸ್ಯ ಬಯಲಾದ ಬೆನ್ನಲ್ಲೇ ಮತ್ತೊಂದು ನರಕ ದರ್ಶನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 15 =
Remember me
