ಬೆಳಗಾವಿ:ಪಿಎಸ್‌ಐ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮ ಪ್ರಕರಣದ ತನಿಖೆ ನಡೆಯುತ್ತಿರುವ ನಡುವೆಯೇ ಕೆಪಿಟಿಸಿಎಲ್‌ನ ಕಿರಿಯ ಸಹಾಯಕರ ಪರೀಕ್ಷೆಯಲ್ಲಿ ‘ಸ್ಮಾರ್ಟ್ ವಾಚ್’ ಬಳಸಿ ಅಕ್ರಮ ನಡೆಸಿರುವ ಅಭ್ಯರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮೂಡಲಗಿ ತಾಲೂಕಿನ ನಾಗನೂರ ಗ್ರಾಮದ ಸಿದ್ದಪ್ಪ ಮದಿಹಳ್ಳಿ(20) ಬಂಧಿತ ಅಭ್ಯರ್ಥಿ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)ದಿಂದ ಕೆಪಿಟಿಸಿಎಲ್‌ನಲ್ಲಿ ಖಾಲಿಯಿರುವ ಕಿರಿಯ ಸಹಾಯಕರ ಹುದ್ದೆಗಳಿಗೆ ಭಾನುವಾರ ಪರೀಕ್ಷೆ ನಡೆದಿತ್ತು.
ಬೆಳಗಾವಿ ಜಿಲ್ಲೆ ಗೋಕಾಕ ನಗರದ ಜೆಎಸ್‌ಎಸ್ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ನಡೆದ ಕೆಪಿಟಿಸಿಎಲ್ ಪರೀಕ್ಷೆಯಲ್ಲಿ ಬಂಧಿತ ಅಭ್ಯರ್ಥಿ ಸಿದ್ದಪ್ಪ, ಸ್ಮಾರ್ಟ್ ವಾಚ್ ಮೂಲಕ ಪ್ರಶ್ನೆಪತ್ರಿಕೆಯ ಫೋಟೋ ತೆಗೆದು ಕಳುಹಿಸುತ್ತಿದ್ದ. ಬಳಿಕ ಅದೇ ಸ್ಮಾರ್ಟ್ ವಾಚ್ ನೋಡಿಕೊಂಡು ಪರೀಕ್ಷೆ ಬರೆಯುತ್ತಿದ್ದ. ಇದು ಪರೀಕ್ಷಾ ಕೇಂದ್ರದಲ್ಲಿ ಅಳವಡಿಸಿರುವ ಸಿಸಿಟಿವಿಯಲ್ಲಿ ಅಭ್ಯರ್ಥಿಯ ಎಸಗಿರುವ ಕೃತ್ಯಗಳು ಸೆರೆಯಾಗಿವೆ. ಈ ಕುರಿತು ಪರೀಕ್ಷಾ ಕೇಂದ್ರದ ಅಧಿಕಾರಿಗಳು ಗೋಕಾಕ ನಗರದ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಕುರಿತು ತನಿಖೆ ನಡೆಸಿದ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.
ಆಷಾಢ ಹಿನ್ನೆಲೆ ತವರಿಗೆ ಬಂದಾಕೆ ದುರಂತ ಅಂತ್ಯ: ಆ ಒಂದು ತಿಂಗಳಲ್ಲಿ ಆಗಬಾರದ್ದೆಲ್ಲಾ ಆಗಿ ಹೋಯ್ತು…

ಚಾಮರಾಜನಗರ ಉಪನ್ಯಾಸಕಿ ದುರಂತ ಅಂತ್ಯ: ಗೊಂದಲದ ಗೂಡಿಗೆ ಸಿಲುಕಿದ ಚಂದನಾ… ಡೆತ್​ನೋಟಲ್ಲಿದೆ ಸಾವಿನ ಕಾರಣ

ತೇಜಸ್ವಿ ಸೂರ್ಯಗೆ ಒಳ್ಳೇ ಬುದ್ಧಿ ಬರಲೆಂದು ವಿಶೇಷ ಪೂಜೆ! ಪ್ರಸಾದ ತಲುಪಿಸಲು ಹೋದವರನ್ನ ವಶಕ್ಕೆ ಪಡೆದ ಪೊಲೀಸರು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + 7 =
Remember me
