ಮಂಗಳೂರು:ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಕಲ್ಕೂರ ಪ್ರತಿಷ್ಠಾನ ವತಿಯಿಂದ ಕದ್ರಿ ಶ್ರೀ ಮಂಜುನಾಥ ದೇವಳದ ಪ್ರಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ರಾಷ್ಟ್ರೀಯ ಮಕ್ಕಳ ಉತ್ಸವ-ಶ್ರೀಕೃಷ್ಣ ವೇಷ ಸ್ಪರ್ಧೆಯಲ್ಲಿ ಪುಟಾಣಿಗಳು ಮನಸೆಳೆದರು.
ಕರೊನಾ ಕಾರಣದಿಂದಾಗಿ ಎರಡು ವರ್ಷಗಳ ಬಳಿಕ ಸ್ಪರ್ಧೆ ಆಯೋಜನೆಗೊಂಡಿದ್ದು, ತಾಯಂದಿರ ಉತ್ಸಾಹ ಹೆಚ್ಚಾಗಿತ್ತು. ಮಕ್ಕಳಿಗೆ ಕೃಷ್ಣ ವೇಷ ಹಾಕಿಸಿ, ಮನೆಮಂದಿಯೆಲ್ಲ ಸೇರಿ ದೇವಳಕ್ಕೆ ಆಗಮಿಸಿದ್ದರಿಂದ ಹೊರ ಆವರಣ ಜನರಿಂದ ತುಂಬಿತ್ತು.

ರಾಷ್ಟ್ರೀಯ ಮಕ್ಕಳ ಉತ್ಸವವನ್ನು ಕಟೀಲು ಶ್ರೀ ದರ್ಗಾಪರಮೇಶ್ವರಿ ಕ್ಷೇತ್ರದ ಪ್ರಧಾನ ಅರ್ಚಕ ಲಕ್ಷ್ಮೀ ನಾರಾಯಣ ಅಸ್ರಣ್ಣ ಉದ್ಘಾಟಿಸಿದರು. ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ಎ.ಜೆ.ಶೆಟ್ಟಿ, ತಂತ್ರಿ ವಿಠಲದಾಸ ತಂತ್ರಿ, ಪ್ರಮುಖರಾದ ಕದ್ರಿ ವಾಸುದೇವ ಅಡಿಗ, ಹರಿಕೃಷ್ಣ ಪುನರೂರು, ಪ್ರೊ.ಎಂ.ಬಿ.ಪುರಾಣಿಕ್, ಶಶಿಧರ ಹೆಗ್ಡೆ, ಭಾಸ್ಕರಚಂದ್ರ, ಭುವನಾಭಿರಾಮ ಉಡುಪ, ಮಟ್ಟಿ ಲಕ್ಷ್ಮಿ ನಾರಾಯಣ ರಾವ್, ರತ್ನಾಕರ ಜೈನ್, ದಯಾನಂದ ಕಟೀಲ್ ಪುನೀತ್ ಬೆಂಗಳೂರು ಮೊದಲಾದವರಿದ್ದರು.
ಕಲ್ಕೂರ ಪ್ರತಿಷ್ಠಾನ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಸ್ವಾಗತಿಸಿದರು. ಕದ್ರಿ ನವನೀತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಶಾಸಕ ವೇದವ್ಯಾಸ ಕಾಮತ್ ಮತ್ತು ಮೇಯರ್ ಪ್ರೇಮಾನಂದ ಶೆಟ್ಟಿ ಆಗಮಿಸಿದ್ದರು.

ಒಟ್ಟು 33 ವಿಭಾಗಗಳಲ್ಲಿ, 9 ವೇದಿಕೆಗಳಲ್ಲಿ ಏಕ ಕಾಲದಲ್ಲಿ ಸ್ಪರ್ಧೆ ನಡೆಯಿತು. ಭಾಗವಹಿಸಿದ ಸ್ಪರ್ಧಾಳುಗಳಿಗೆ ಉಡುಪಿ ಕಡಗೋಲು ಕೃಷ್ಣನ ಪಂಚಲೋಹದ ವಿಗ್ರಹ, ಶ್ರೀ ಕಷ್ಣ ಚರಿತ್ರೆ ಪುಸ್ತಕ, ಕದ್ರಿ ಶ್ರೀ ಮಂಜುನಾಥ ದೇವರ ಭಾವಚಿತ್ರ, ಪ್ರೋತ್ಸಾಹಕರಿಂದ ನೀಡಲ್ಪಟ್ಟ ಇತರ ಉಡುಗೊರೆಗಳು ಹಾಗೂ ಪ್ರಶಂಸನಾ ಪತ್ರ ಮತ್ತು ಭಗವದ್ಗೀತೆಯ ಪ್ರತಿಯನ್ನು ಉಡಗೊರೆಯಾಗಿ ನೀಡಲಾಯಿತು. ಪ್ರತಿ ವಿಭಾಗದಲ್ಲೂ ಪ್ರಥಮ ದ್ವಿತೀಯ, ತೃತೀಯ ಬಹುಮಾನವಿತ್ತು.
ಮಿನಿಷ್ಟ್ರು ಬಂದ್ರೂ ಮೇಷ್ಟ್ರು ಬರಲಿಲ್ಲ! ಬಿ.ಸಿ.ನಾಗೇಶ್ ಎದುರೇ ಅವ್ಯವಸ್ಥೆ ಬಯಲು, ಶಿಕ್ಷಕರಿಗೆ ನೋಟಿಸ್ ಜಾರಿ

PSI ಆಗುವ ಕನಸು ಕಂಡಿದ್ದ ಬೆಂಗ್ಳೂರಿನ ಯುವಕ ಕಳ್ಳನಾದ! ಇಂಜಿನಿಯರಿಂಗ್​ನಲ್ಲಿ ಟಾಪರ್ ಆಗಿದ್ದವ ದಾರಿ ತಪ್ಪಿದ್ದೇಕೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × one =
Remember me
