ಬೆಂಗಳೂರು:ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ಮುಂದೂಡಲು ರಾಜ್ಯ ಸರ್ಕಾರ ಯಾವುದೇ ತಂತ್ರ ಹೆಣೆದಿಲ್ಲ. ಮಾ.31ರ ಬೆಳಗ್ಗೆ 11ಕ್ಕೆ ನಿಗದಿಯಾಗಿರುವ ಸರ್ವಪಕ್ಷಗಳ ಸಭೆಯಲ್ಲಿ ಗೊಂದಲಕ್ಕೆ ಅಂತಿಮ ಪರಿಹಾರ ಸಿಗುವ ನಿರೀಕ್ಷೆಯಿದೆ ಎಂದು ಸಚಿವ ಕೆ.ಎಸ್​.ಈಶ್ವರಪ್ಪ ಹೇಳಿದ್ದಾರೆ.
ವಿಧಾನ ಪರಿಷತ್​ನಲ್ಲಿ ಜೆಡಿಎಸ್​ ಮರಿತಿಬ್ಬೇಗೌಡ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಈಶ್ವರಪ್ಪ, ನಿವೃತ್ತ ಐಎಎಸ್​ ಅಧಿಕಾರಿ ಲಕ್ಷ್ಮೀನಾರಾಯಣ ನೇತೃತ್ವದ ಜಿಲ್ಲಾ, ತಾಲೂಕು ಪಂಚಾಯಿತಿ ಕ್ಷೇತ್ರಗಳ ಸೀಮಾ ನಿರ್ಣಯ ಆಯೋಗವು ವರದಿ ತಯಾರು ಬಹುತೇಕ ಅಂತಿಮಕ್ಕೆ ಬಂದಿದೆ. ಈ ನಡುವೆ ಸುಪ್ರೀಂ ಕೋರ್ಟ್​ ಆದೇಶದಂತೆ ಒಬಿಸಿಗೆ ರಾಜಕೀಯ ಮೀಸಲು ಕಲ್ಪಿಸುವ ಸಂಬಂಧ ಸರ್ಕಾರದಿಂದ ಪ್ರಮಾಣಪತ್ರ ಸಲ್ಲಿಸಬೇಕಾಗಿದ್ದು, ಮಾ.31ರ ಬೆಳಗ್ಗೆ 11ಕ್ಕೆ ನಿಗದಿಯಾಗಿರುವ ಸರ್ವಪಕ್ಷಗಳ ಸಭೆಯಲ್ಲಿ ಗೊಂದಲಕ್ಕೆ ಅಂತಿಮ ಪರಿಹಾರ ಸಿಗುವ ನಿರೀಕ್ಷೆ ಇದೆ ಎಂದಿದ್ದಾರೆ.
ಇತರ ಹಿಂದುಳಿದ ವರ್ಗದವರ ಮೀಸಲು ಗೊಂದಲ ಬಗೆಹರಿದ ನಂತರ ಚುನಾವಣೆ ನಡೆಸಲು ಬದ್ಧವಾಗಿದೆ. ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ ಆರ್ಥಿಕ, ಸಾಮಾಜಿಕ (ಜಾತಿ ಗಣತಿ) ಸಮೀಕ್ಷೆ ನಡೆಸಿದ ಎಚ್​.ಕಾಂತರಾಜು ನೇತೃತ್ವದ ಸಮಿತಿ ವರದಿಯಲ್ಲಿನ ದತ್ತಾಂಶಗಳನ್ನು ಬಳಸಿಕೊಳ್ಳುವ ಚಿಂತನೆ ನಡೆದಿದೆ ಎಂದು ಈಶ್ವರಪ್ಪ ತಿಳಿಸಿದ್ದಾರೆ.
ಕೇಸರಿ ಶಾಲು ಹಾಕಲ್ಲ, ಹಾಕಲ್ಲ… ವಿಧಾನಸಭೆಯಲ್ಲಿ ಸ್ವಾರಸ್ಯಕರ ಘಟನೆ
ನಾನೀಗ ಗರ್ಭಿಣಿ, ನನ್ನನ್ನು ತಬ್ಬಲಿ ಮಾಡಿಬಿಟ್ರು… ಮನದ ನೋವನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಮೇಘನಾ
9ನೇ ಕ್ಲಾಸ್​ ವಿದ್ಯಾರ್ಥಿನಿ ಕೊಲೆ ಕೇಸ್​ಗೆ ಸ್ಫೋಟಕ ತಿರುವು: 33 ದಿನದ ಬಳಿಕ ಅದೇ ಜಾಗದಲ್ಲಿ ಪ್ರಿಯಕರನ ಶವ ಪತ್ತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − ten =
Remember me
