ಉಡುಪಿ:ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಶೇಕಡಾ 40 ಪರ್ಸೆಂಟೇಜ್ ಆರೋಪ ಮಾಡಿದ್ದ ಬೆಳಗಾವಿಯ ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ ಪಾಟೀಲ್ ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಮೆ ಮಾಡಿಕೊಂಡಿದ್ದಾರೆ.
ಸೋಮವಾರ ತಡರಾತ್ರಿ ಮಾಧ್ಯಮಪತ್ರಿನಿಧಿಗಳಿಗೆ ವಾಟ್ಸ್​ಆ್ಯಪ್​ ಮೂಲ ಡೆತ್​ನೋಟ್ ಕಳಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಸಂದೇಶ ರವಾನಿಸಿದ್ದರು. ‘ನನ್ನ ಸಾವಿಗೆ ಸಚಿವ ಕೆ.ಎಸ್.ಈಶ್ವರಪ್ಪ ಅವರೇ ಕಾರಣ. ಸಚಿವರಿಗೆ ಶಿಕ್ಷೆಯಾಗಬೇಕು, ನನ್ನೆಲ್ಲಾ ಆಸೆಗಳನ್ನ ಬದಿಗೊತ್ತಿ ಆತ್ಮಹತ್ಯೆಯ ನಿರ್ಧಾರ ಮಾಡಿದ್ದೇನೆ. ನನ್ನ ಹೆಂಡತಿ-ಮಕ್ಕಳಿಗೆ ಪ್ರಧಾನಿಗಳು, ಮುಖ್ಯಮಂತ್ರಿಗಳು, ಬಿ.ಎಸ್.ಯಡಿಯೂರಪ್ಪ ಸಹಾಯ ಮಾಡಬೇಕು’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ಡೆತ್​ನೋಟ್​ ಪೊಲೀಸರ ಗಮನಕ್ಕೆ ಬರುತ್ತಿದ್ದಂತೆ ಸಂತೋಷ ಪಾಟೀಲ್​ಗಾಗಿ ಪೊಲೀಸರು ಎಲ್ಲೆಡೆ ಹುಡುಕಾಟ ನಡೆಸಿದ್ದರು. ಉಡುಪಿಯ ಶಾಂಭವಿ ಲಾಡ್ಜಿನಲ್ಲಿ ಸಂತೋಷ್ ಮೃತದೇಹ ಮಂಗಳವಾರ ಬೆಳಗ್ಗೆ ಪತ್ತೆಯಾಗಿದೆ. ಪಕ್ಕದ ಕೊಠಡಿಯಲ್ಲಿ ಸಂತೋಷ್​ರ ಗೆಳೆಯರಿಬ್ಬರು ಪತ್ತೆಯಾಗಿದ್ದಾರೆ ಎನ್ನಲಾಗಿದೆ. ಪ್ರಕರಣ ಕ್ಷಣಕ್ಕೊಂದು ತಿರುವು ಪಡೆಯುತ್ತಿದೆ.
ಉಡುಪಿಯ ಕೆಎಸ್ಆರ್​ಟಿಸಿ ಬಸ್ ನಿಲ್ದಾಣ ಸಮೀಪದ ಶಾಂಭವಿ ಹೋಟೆಲ್ಸ್ ಬೋರ್ಡಿಂಗ್ ಆ್ಯಂಡ್ ಲಾಡ್ಜಿಂಗ್​ನಲ್ಲಿ ರೂಂ ನಂಬರ್ 207ರಲ್ಲಿ ಸಂತೋಷ್​ ಶವವಾಗಿ ಪತ್ತೆಯಾಗಿದ್ದಾರೆ. ಬಾಯಿಯಲ್ಲಿ ನೊರೆ ಬಂದಿದ್ದು, ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ.
ತಿಂಗಳ ಹಿಂದಷ್ಟೇ ಜನಿಸಿದ್ದ ಮುದ್ದು ಮಗುವಿಗೆ ತಂದೆಯಾಗಿದ್ದ ಪೊಲೀಸ್​ ಪೇದೆ ಬಾಳಲ್ಲಿ ದುರಂತ

ಖಾಸಗಿ ವಾಹನಕ್ಕೆ ಸರ್ಕಾರಿ ಲಾಂಛನ-ನಾಮಫಲಕ ಹಾಕಿಕೊಂಡು ಪ್ರವಾಸಕ್ಕೆ ಬಂದ ಗ್ರಾಪಂ ಅಧ್ಯಕ್ಷ!

ಬೆಂಗ್ಳೂರಲ್ಲಿ ಹಾಡಹಗಲೇ ಮಗನಿಗೆ ಬೆಂಕಿ ಇಟ್ಟು ಕೊಂದ ತಂದೆ! ಅಪ್ಪಾ.. ಪ್ಲೀಸ್​ ಬೇಡಪ್ಪ… ಅಂದ್ರೂ ಕರಗಲಿಲ್ಲ ಕ್ರೂರಿ ಮನಸ್ಸು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + 2 =
Remember me
