ಬೆಂಗಳೂರು:ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ 40% ಕಮಿಷನ್​ ಆರೋಪ ಮಾಡಿದ್ದ ಬೆಳಗಾವಿಯ ಗುತ್ತಿಗೆದಾರ ಸಂತೋಷ ಪಾಟೀಲ್ ಡೆತ್​ನೋಟ್​ ಬರೆದಿಟ್ಟು ಉಡುಪಿಯ ಲಾಡ್ಜ್​ವೊಂದರಲ್ಲಿ ಆತ್ಮಹತ್ಮೆಗೆ ಶರಣಾಗಿದ್ದು, ರಾಜಕೀಯ ತಿರುವು ಪಡೆಯುತ್ತಿದೆ. ವಿಪಕ್ಷ ನಾಯಕರು ಈಶ್ವರಪ್ಪ ವಿರುದ್ಧ ಕೊಲೆ ಕೇಸ್​ ಹಾಕಬೇಕು, ಸಚಿವ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ. ಈ ನಡುವೆ ಸಂತೋಷ್​ ಸಾವಿನ ಬಳಿಕ ಸುದ್ದಿಗಾರರಿಗೆ ಮೊದಲ ಪ್ರತಿಕ್ರಿಯೆ ನೀಡಿರುವ ಸಚಿವ ಈಶ್ವರಪ್ಪ, ‘ಸಂತೋಷ್​ ಆತ್ಮಹತ್ಯೆಗೂ ನನಗೂ ಯಾವುದೇ ಸಂಬಂಧವಿಲ್ಲ… ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ನಾನು ಆತನ ಮೇಲೆ ಮಾನನಷ್ಟ ಕೇಸ್​ ಹಾಕಿದ್ದೆ. ಅದಕ್ಕೆ ಕೋರ್ಟ್​ ನೋಟಿಸ್​ ಕೊಟ್ಟಿದ್ದು, ಅದಕ್ಕೆ ಅವರು ಉತ್ತರಿಸಬೇಕಿತ್ತು. ಅದನ್ನು ಬಿಟ್ಟು ಸತ್ತರೆ ನಾನೇನು ಮಾಡಲಿ?’ ಎಂದಿದ್ದಾರೆ.
ಮೈಸೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ‘ನನ್ನ ವಿರುದ್ಧ ಆಪಾದನೆ ಮಾಡಿದವರು ಕೋರ್ಟ್​ನಲ್ಲಿ ಹೋರಾಡಬೇಕಿತ್ತು. 40% ಕಮಿಷನ್​ ಪಡೆದಿದ್ದಾರೆ ಎಂದು ನನ್ನ ವಿರುದ್ಧ ಆರೋಪಿಸಿ ಮಾನಹಾನಿ ಮಾಡಿದರು ಎಂದು ನಾನು ಕೋರ್ಟ್​ಗೆ ಹೋದೆ. ಕೋರ್ಟ್​ ನೋಟಿಸ್​ ಕೊಟ್ಟ ನಂತರ ನನ್ನ ವಿರುದ್ಧದ ಆರೋಪವನ್ನು ಸಾಬೀತು ಮಾಡಬೇಕಿತ್ತು. ನೋಟಿಸ್​ ಅನ್ನು ಅವರು ಎದುರಿಸಬೇಕಿತ್ತು. ಅದನ್ನ ಬಿಟ್ಟು ಆತ್ಮಹತ್ಯೆ ಮಾಡಿಕೊಂಡರೆ ನಾನೇಗೆ ಹೊಣೆಯಾಗ್ತೀನಿ? ನಾನು ಯಾವುದೇ ತಪ್ಪು ಮಾಡಿಲ್ಲ’ ಎಂದು ಸಚಿವ ಕೆ.ಎಸ್​.ಈಶ್ವರಪ್ಪ ಸ್ಪಷ್ಟನೆ ಪಡಿಸಿದರು.
ಈಶ್ವರಪ್ಪ ವಿರುದ್ಧ ಕಮಿಷನ್​ ಆರೋಪ ಮಾಡಿದ್ದ ಗುತ್ತಿಗೆದಾರ ಆತ್ಮಹತ್ಯೆ! ಸಾವಿಗೂ ಮುನ್ನ ಡೆತ್​ನೋಟ್​ ರವಾನೆ

ತಿಂಗಳ ಹಿಂದಷ್ಟೇ ಜನಿಸಿದ್ದ ಮುದ್ದು ಮಗುವಿಗೆ ತಂದೆಯಾಗಿದ್ದ ಪೊಲೀಸ್​ ಪೇದೆ ಬಾಳಲ್ಲಿ ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − one =
Remember me
