ತುಮಕೂರು:ತಿಪಟೂರು ತಾಲೂಕಿನ ಬಿದರೆಗುಡಿಯ ಮತ್ತಿಹಳ್ಳಿ ಬಳಿ ಗುರುವಾರ ಬೆಳಗ್ಗೆ ಕೆಎಸ್ಆರ್​ಟಿಸಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಮತ್ತಿಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಶಿವಮೊಗ್ಗದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕೆಎಸ್​ಆರ್​ಟಿಸಿ ಬಸ್​, ತುಮಕೂರಿನಿಂದ ಅರಸೀಕೆರೆ ಕಡೆಗೆ ಹೋಗುತ್ತಿದ್ದ ಕಾರು ಮುಖಾಮುಖಿ ಡಿಕ್ಕಿಯಾಗಿವೆ. ಬಸ್​ ಮತ್ತು ಕಾರು ಒಂದೊಂದು ದಿಕ್ಕಿನಲ್ಲಿ ರಸ್ತೆಬದಿಯ ಹಳ್ಳಕ್ಕೆ ನುಗ್ಗಿವೆ.
ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರಂತ ಅಂತ್ಯಕಂಡಿದ್ದಾರೆ. ಮತ್ತಿಬ್ಬರು ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್​ನಲ್ಲಿದ್ದ ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಹೊನ್ನವಳ್ಳಿ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದಯವಿಟ್ಟು ನನ್ನ ಮಗನಿಗೆ ಯಾರೂ ಸಾಲ ಕೊಡ್ಬೇಡಿ… ಸುಳ್ಳು ಹೇಳಿ ಜನರಿಗೆ ಮೋಸ ಮಾಡ್ತಿದ್ದಾನೆ: ಮಾಜಿ ಶಾಸಕ ಮನವಿ

ಚಂದ್ರಶೇಖರ ಗುರೂಜಿ ಹಂತಕರ ಬಂಧನ: ಅಸಲಿ ವಿಚಾರ ಮುಚ್ಚಿಟ್ರಾ ಪೊಲೀಸರು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + 10 =
Remember me
