ಹುಬ್ಬಳ್ಳಿ:ಶಿರುಗುಪ್ಪಿ ಬಳಿ ಐರಾವತ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಬುಧವಾರ ಸಂಭವಿಸಿದೆ.
ಹೈದ್ರಾಬಾದ್​ನಿಂದ ಹುಬ್ಬಳ್ಳಿಗೆ ಕೆಎಸ್​ಆರ್​ಟಿಸಿ ಐರಾವತ ಬಸ್ ಬರುತ್ತಿತ್ತು. ಹುಬ್ಬಳ್ಳಿಯಿಂದ ಹಂಪಿ ಕಡೆಗೆ ಕಾರು ಹೋಗುತ್ತಿತ್ತು. ಹುಬ್ಬಳ್ಳಿ ತಾಲೂಕಿನ ಶಿರುಗುಪ್ಪಿ ಬಳಿ ಬಸ್​ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದೆ. ಕಾರಿನಲ್ಲಿ ಗುಜರಾತ್​ನಿಂದ ಹಂಪಿ ಪ್ರವಾಸಕ್ಕೆಂದು ಬಂದಿದ್ದ ಪ್ರವಾಸಿಗರ ಪೈಕಿ ಕಾರು ಚಾಲಕ ಹಾಗೂ ಪ್ರವಾಸಿಗರೊಬ್ಬರು ಮೃತಪಟ್ಟಿದ್ದಾರೆ.
ಕಾರಿನಲ್ಲಿದ್ದ 7 ಜನರಲ್ಲಿ ಇಬ್ಬರು ಮೃತಪಟ್ಟಿದ್ದು, ಉಳಿದವರು ಗಾಯಗೊಂಡಿದ್ದಾರೆ. ಗಾಯಳುಗಳನ್ನು ಹುಬ್ಬಳ್ಳಿಯ ಕಿಮ್ಸ್​ಗೆ ರವಾನಿಸಲಾಗಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಪ್ರೀತಿಸಿ ಮದ್ವೆಯಾದ 7 ದಿನಕ್ಕೇ ಯುವತಿ ಬೀದಿಪಾಲು! 3 ದಿನದಲ್ಲಿ 2 ಬಾರಿ ಮದ್ವೆ ಆಗಿದ್ದವ ಇದ್ದಕ್ಕಿದ್ದಂತೆ ಏನಾದ?

ನಿನ್ನ ಹೆಂಡ್ತಿಯನ್ನ ನನ್ನ ಜತೆ ಕಳಿಸು… ಗಂಡನ ಎದುರಲ್ಲೇ ಪರಪುರುಷನ ರಂಪಾಟ! ದುಡುಕಿದ ಪತ್ನಿ, ನಡೆದೇ ಹೋಯ್ತು ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + 10 =
Remember me
