ಬೆಂಗಳೂರು:ಅಮಾಯಕರ ಸೈಟು, ಮನೆ, ಜಮೀನುಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಕೋರ್ಟ್‌ನಲ್ಲಿ ಸುಳ್ಳು ಪ್ರಕರಣ ದಾಖಲಿಸಿ ವಂಚಿಸುತ್ತಿದ್ದ ರೌಡಿಯನ್ನು ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ದೇವನಹಳ್ಳಿ ತಾಲೂಕಿನ ದ್ಯಾವರಹಳ್ಳಿ ಗ್ರಾಮದ ನಿವಾಸಿ ಡಿ.ಸಿ. ನಾರಾಯಣಸ್ವಾಮಿ ಅಲಿಯಾಸ್ ಬೂಟ್ ನಾರಾಯಣಸ್ವಾಮಿ(43) ಬಂಧಿತ. ದ್ಯಾವರಹಳ್ಳಿ ಗ್ರಾಮದ ಲಕ್ಷ್ಮೀ ಮಂಜಣ್ಣ ಎಂಬುವರಿಗೆ ಸೇರಿದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ ಅದೇ ದಾಖಲೆ ಬಳಸಿ ನ್ಯಾಯಾಲಯದಲ್ಲಿ ಸುಳ್ಳು ಪ್ರಕರಣ ದಾಖಲಿಸಿ ತೊಂದರೆ ನೀಡುತ್ತಿದ್ದ. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಡಿ.ಸಿ.ನಾರಾಯಣಸ್ವಾಮಿ ಅಪರಾಧ ಹಿನ್ನೆಲೆವುಳ್ಳವಾಗಿದ್ದು, ಈತನ ವಿರುದ್ಧ ವಿಶ್ವನಾಥಪುರ ಠಾಣೆಯಲ್ಲಿ ರೌಡಿ ಪಟ್ಟಿ ತೆರೆಯಲಾಗಿದೆ. ಈತನ ವಿರುದ್ಧ ಈ ಹಿಂದೆ ವಿಶ್ವನಾಥಪುರ, ವಿಜಯಪುರ, ಆರ್.ಟಿ.ನಗರ, ಹೈಗ್ರೌಂಡ್ಸ್ ಠಾಣೆಗಳಲ್ಲಿ ಹಲ್ಲೆ, ಪ್ರಾಣ ಬೆದರಿಕೆ, ಅಪಹರಣ, ಮೋಸ, ಮಹಿಳೆ ಮೇಲೆ ದೌರ್ಜನ್ಯ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿವೆ. ಆರ್.ಟಿ.ನಗರ ಠಾಣೆಯಲ್ಲಿ ದಾಖಲಾಗಿದ್ದ ಅಪರಾಧ ಪ್ರಕರಣಗಳಲ್ಲಿ ನಾರಾಯಣಸ್ವಾಮಿಗೆ 3 ವರ್ಷ ಜೈಲು, 5 ಸಾವಿರ ರೂ. ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇನ್ಯಾವತ್ತೂ ಧರ್ಮದ ವಿಷಯಕ್ಕೆ ಹೋಗಲ್ಲ… ರಂಭಾಪುರಿ ಜಗದ್ಗುರುಗಳ ಎದುರು ಪಶ್ಚಾತ್ತಾಪ ವ್ಯಕ್ತಪಡಿಸಿದ ಸಿದ್ದರಾಮಯ್ಯ

ರೈಲ್ವೆ ಪೊಲೀಸರಿಗೆ ಶೋಲ್ಡರ್ ಲೈಟ್: ರಾಜ್ಯದಲ್ಲಿ ಪ್ರಥಮ ಬಾರಿಗೆ ಜಾರಿ

‘ಜೊತೆ ಜೊತೆಯಲಿ’ ಧಾರಾವಾಹಿ ತಂಡದಲ್ಲಿ ಕಿರಿಕ್​: ಕಿರುತೆರೆಯಿಂದಲೇ ನಟ ಅನಿರುದ್ಧ್ ಬ್ಯಾನ್?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 13 =
Remember me
