ಮಂಡ್ಯ:ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಇದೇ ಮೊದಲ ಬಾರಿಗೆ ಯುಜಿಸಿ ನಿಯಮಾವಳಿಯಂತೆ ಏಕಕಾಲಕ್ಕೆ ದ್ವಿ ಪದವಿ ಪಡೆಯುವ ಅವಕಾಶವನ್ನು ವಿದ್ಯಾರ್ಥಿಗಳಿಗೆ ಕಲ್ಪಿಸಿದೆ ಎಂದು ಕುಲಪತಿ ಪ್ರೊ.ಎಸ್​. ವಿದ್ಯಾಶಂಕರ್​ ತಿಳಿಸಿದರು.
ನಗರದ ಮುಕ್ತ ವಿವಿ ಪ್ರಾದೇಶಿಕ ಕಚೇರಿಯಲ್ಲಿ ಪ್ರವೇಶಾತಿಯ ಭಿತ್ತಿಪತ್ರ ಬಿಡುಗಡೆಗೊಳಿಸಿ ಮಾತನಾಡಿದ ಕುಲಪತಿ ಪ್ರೊ.ಎಸ್​. ವಿದ್ಯಾಶಂಕರ್​, ಮುಕ್ತ ವಿವಿಯಲ್ಲಿ ವಿದ್ಯಾರ್ಥಿಗಳು ಯಾವುದೇ ಪದವಿಯನ್ನು ಅಧ್ಯಯನ ಮಾಡುತ್ತಲೇ ಮತ್ತೊಂದು ಪದವಿ ಪಡೆಯುವಂತೆ ಯುಜಿಸಿ ಅನುಕೂಲ ಮಾಡಿಕೊಟ್ಟಿದೆ. ಬಿಎ, ಬಿ.ಕಾಂ, ಬಿಎಸ್ಸಿ ಪದವಿಯನ್ನು ಪ್ರತ್ಯೇಕವಾಗಿ ವ್ಯಾಸಂಗ ಮಾಡುತ್ತಿರುವವರು ಜತೆಯಲ್ಲೇ ದ್ವಿ ಪದವಿಯನ್ನು ಅಧ್ಯಯನ ಮಾಡಬಹುದು. ಯಾವುದೇ ಸ್ನಾತಕೋತ್ತರ ಪದವಿ ಪಡೆಯುತ್ತಲೇ ಮತ್ತೊಂದು ಸ್ನಾತಕೋತ್ತರ ಪದವಿಯನ್ನೂ ಒಮ್ಮೆಲೇ ಪಡೆಯಬಹುದು ಎಂದು ವಿವರಿಸಿದರು.
ಇದಲ್ಲದೆ, ಮೊದಲ ಬಾರಿಗೆ ಶುಲ್ಕ ಪಾವತಿಗೆ ಇಎಂಐ ಅವಕಾಶವನ್ನೂ ನೀಡಲಾಗಿದೆ. ಆಟೋ ಮತ್ತು ಕ್ಯಾಬ್​ ಚಾಲಕರ ಮಕ್ಕಳಿಗೆ ಶುಲ್ಕದಲ್ಲಿ ಶೇ.30 ವಿನಾಯಿತಿ ನೀಡಲಾಗಿದೆ. ವಿದ್ಯಾರ್ಥಿಗಳು ಹೆಚ್ಚು ಪ್ರವೇಶ ಪಡೆದು ಸಂಖ್ಯೆ ಹೆಚ್ಚಳವಾದಲ್ಲಿ ಮುಂದಿನ ದಿನಗಳಲ್ಲಿ ವೃತ್ತಿಪರರಿಗೆ ಮತ್ತಷ್ಟು ವಿನಾಯಿತಿ ನೀಡುವ ಬಗ್ಗೆಯೂ ಚಿಂತನೆ ನಡೆಸಲಾಗಿದೆ. ಆನ್​ಲೈನ್​ ಮುಖಾಂತರ ಈ- ಲರ್ನಿಂಗ್​ ಮೆಟೀರಿಯಲ್​ ಪಡೆಯುವ ವಿದ್ಯಾರ್ಥಿಗಳಿಗೆ ಶುಲ್ಕದಲ್ಲಿ ಶೇ.15 ರಿಯಾಯಿತಿ ನೀಡಲಾಗಿದೆ. ಎಸ್ಸಿ, ಎಸ್ಟಿ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುವುದು. ಇನ್ನು ಕರೊನಾದಲ್ಲಿ ಪಾಲಕರನ್ನು ಕಳೆದುಕೊಂಡ ಮಕ್ಕಳಿಗೆ ಉಚಿತ ಪ್ರವೇಶ ನೀಡಲಾಗುವುದು ಎಂದರು.
ಯೂಟ್ಯೂಬ್​ನಲ್ಲಿಯೇ ಪಾಠ:ವಿವಿಯ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಲು ಯೂಟ್ಯೂಬ್​ನಲ್ಲೂ ಪಾಠ-ಪ್ರವಚನ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳು ಆನ್​ಲೈನ್​ನಲ್ಲಿ ಪಾಠಗಳನ್ನು ಕೇಳಲಾಗದಿದ್ದಲ್ಲಿ, ಯೂಟ್ಯೂಬ್​ಗಳಲ್ಲಿ ಅಪ್​ಲೋಡ್​ ಮಾಡಿರುತ್ತೇವೆ. ಅದನ್ನು ಯಾವ ಸಮಯದಲ್ಲಾದರೂ ಕೇಳಬಹುದಾಗಿದೆ. ಇನ್ನು ಜ್ಞಾನಪೀಠ ಪುರಸ್ಕೃತರ ಬಗ್ಗೆ ಉಪನ್ಯಾಸ ಮಾಲಿಕೆಯನ್ನು ಪ್ರಾರಂಭಿಸಲಾಗುತ್ತಿದ್ದು, ಇದು ಕೂಡ ಆನ್​ಲೈನ್​ನಲ್ಲಿ ಲಭ್ಯವಿರುತ್ತದೆ. ಕಲಾ, ವಾಣಿಜ್ಯ ವಿಭಾಗಗಳಿಗಷ್ಟೇ ಮಾನ್ಯತೆ ನೀಡದೆ ಇದೀಗ ವಿಜ್ಞಾನ ವಿಭಾಗಕ್ಕೂ ಪ್ರಾಧಾನ್ಯತೆ ನೀಡಲಾಗಿದೆ. ಸುಸಜ್ಜಿತ ಪ್ರಯೋಗಾಲಯಗಳನ್ನು ಸ್ಥಾಪಿಸಲಾಗಿದೆ. ಸಂಶೋಧನೆಗೂ ಒತ್ತು ನೀಡುವ ಸಲುವಾಗಿ ಇಸ್ರೋ ಮತ್ತು ಡಿಆರ್​ಡಿಒನಲ್ಲಿ ತಲಾ 50 ಲಕ್ಷ ರೂ. ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದೆ. ಈಗಾಗಲೇ ಯುಜಿಸಿ ಮಾನ್ಯತೆ ದೊರೆತಿದ್ದು, ಎಂಎಚ್​ಆರ್​ಡಿ ಯೋಜನೆಯಡಿ 3 ಕೋಟಿ ರೂ. ಅನುದಾನ ಬಂದಿದೆ. ನ್ಯಾಕ್​ ಮಾನ್ಯತೆಗಾಗಿ ಎಲ್ಲ ದಾಖಲಾತಿಗಳನ್ನೂ ಸಲ್ಲಿಸಲಾಗಿದೆ ಎಂದು ಹೇಳಿದರು.
ಲಕ್ಷ ವಿದ್ಯಾರ್ಥಿಗಳ ಪ್ರವೇಶದ ಗುರಿ:ಕಳೆದ ವರ್ಷ 25 ಸಾವಿರ ವಿದ್ಯಾರ್ಥಿಗಳು ಪ್ರವೇಶಾತಿ ಪಡೆದಿದ್ದು, ಈ ಬಾರಿ 1 ಲಕ್ಷ ವಿದ್ಯಾರ್ಥಿಗಳ ಪ್ರವೇಶ ನಿರೀಕ್ಷಿಸಲಾಗಿದೆ. ಅಂತೆಯೇ, ಮಂಡ್ಯ ಜಿಲ್ಲೆಯಲ್ಲಿ 1,200 ವಿದ್ಯಾರ್ಥಿಗಳು ಪ್ರವೇಶಾತಿ ಪಡೆದಿದ್ದು, ಈ ಬಾರಿ 5 ಸಾವಿರಕ್ಕೂ ಹೆಚ್ಚು ಜನರು ಪ್ರವೇಶ ಪಡೆಯಬಹುದೆಂಬ ನಿರೀಕ್ಷೆ ಇದೆ. ಈ ಬಾರಿ ದ್ವಿ ಪದವಿಗೆ ಅವಕಾಶ ನೀಡಿರುವುದರಿಂದ ಹೆಚ್ಚು ವಿದ್ಯಾರ್ಥಿಗಳು ದಾಖಲಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮಂಡ್ಯ ಪ್ರಾದೇಶಿಕ ಕೇಂದ್ರದ ನಿರ್ದೇಶಕ ಡಾ.ಸುಧಾಕರ್​ ಹೊಸಳ್ಳಿ ಇದ್ದರು.
ಎಲ್ಲ ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೆವೆ. ಪರೀಕ್ಷೆಯಲ್ಲಿ ಅಕ್ರಮ ತಡೆಗೆ ಸರ್ಕಾರಿ ಕಾಲೇಜುಗಳನ್ನೇ ಆಯ್ಕೆ ಮಾಡಿಕೊಂಡು ಸರ್ಕಾರಿ ಉಪನ್ಯಾಸಕರು, ಶಿಕ್ಷಕರನ್ನೇ ಮೇಲ್ವಿಚಾರಕರಾಗಿ ನಿಯೋಜಿಸಲಾಗುತ್ತದೆ. ಒಂದು ವೇಳೆ ಪರೀಕ್ಷಾ ಅಕ್ರಮ ನಡೆದಲ್ಲಿ ಅಂತಹವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲೂ ಅವಕಾಶವಿದೆ.|ಪ್ರೊ.ಎಸ್​.ವಿದ್ಯಾಶಂಕರ್​ಕೆಎಸ್​ಒಯು ಕುಲಪತಿ
ಕಂಠದಲ್ಲಿ ಶ್ರೀಕೃಷ್ಣ! ಗಂಟಲು ನೋವೆಂದು ಆಸ್ಪತ್ರೆಗೆ ಹೋದ ವ್ಯಕ್ತಿಗೆ ಕಾದಿತ್ತು ಶಾಕ್​

ಕೂಲಿ ಕೆಲಸಕ್ಕಾಗಿ ಆಂಧ್ರದಿಂದ ಚಿಕ್ಕಬಳ್ಳಾಪುರಕ್ಕೆ ಬಂದವ ಈಗ ಕೋಟ್ಯಧೀಶ! ತನಿಖೆಯಲ್ಲಿ ಬಯಲಾಯ್ತು ಸ್ಫೋಟಕ ರಹಸ್ಯ

ಮದ್ವೆಯಾಗಿ ಇಬ್ಬರು ಮಕ್ಕಳಿದ್ರೂ 21 ವರ್ಷದ ಅರ್ಚಕನ ಜತೆ 35ರ ಮಹಿಳೆ ಪರಾರಿ! ಮಧ್ಯರಾತ್ರಿ ಕಾಡಲ್ಲಿ ಈಕೆ ಪಟ್ಟ ಪಾಡು ಅಷ್ಟಿಷ್ಟಲ್ಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × four =
Remember me
