ಬೆಂಗಳೂರು: ಪ್ರಜ್ವಲ್‌ನು ಎಲ್ಲಿದ್ದರೂ ಬಂದು, ಪೋಲಿಸರ ಮುಂದೆ ಶರಣಾಗಿ, ವಿಚಾರಣೆಯನ್ನು ಎದುರಿಸಬೇಕು. ಇದು ನಾನು ಅವನಿಗೆ ಕೊಡುತ್ತಿರುವ ಎಚ್ಚರಿಕೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಬಹಿರಂಗ ಪತ್ರ ಬರೆದಿದ್ದಾರೆ.
ವಿಚಾರಣೆ ಎದುರಿಸುವಂತೆ ನಾನು ನಿನಗೆ ಯಾವುದೇ ಮುಲಾಜು, ಮರ್ಜಿಯಿಲ್ಲದೆ ಹೇಳಬಲ್ಲೆ ಮತ್ತು ಹೇಳುತ್ತಿದ್ದೇನೆ. ಅವನು ಈ ಎಚ್ಚರಿಕೆಗೆ ಮನ್ನಣೆ ಕೊಡದಿದ್ದಲ್ಲಿ ಅವನು ನನ್ನ ಮತ್ತು ಕುಟುಂಬದವರೆಲ್ಲರ ಕೋಪವನ್ನೂ ಎದುರಿಸಬೇಕಾಗುತ್ತದೆ ಎಂದು ಎರಡು ಪುಟಗಳ ಸುದೀರ್ಘ ಪತ್ರ ಬರೆದು ವಿದೇಶದಲ್ಲಿ ತಲೆಮರೆಸಿಕೊಂಡಿರುವ ಮೊಮ್ಮಗನಿಗೆ ಖಡಕ್ ಸಂದೇಶ ರವಾನಿಸಿದ್ದಾರೆ.
ನಾನು ಮೇ 18ನೇ ತಾರೀಖಿನಂದು ದೇವಸ್ಥಾನಕ್ಕೆ ಹೊರಟಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣನ ಕುರಿತಾಗಿ ಮಾತನಾಡಿದ್ದೆ. ಆತ ನನಗೆ, ನನ್ನ ಕುಟುಂಬಕ್ಕೆ, ನನ್ನ ಸಹೋದ್ಯೋಗಿಗಳಿಗೆ, ಸ್ನೇಹಿತರಿಗೆ ಮತ್ತು ನನ್ನ ಪಕ್ಷದ ಕಾರ್ಯಕರ್ತರಿಗೆ ತಂದೊಡ್ಡಿರುವ ಆಘಾತ ಮತ್ತು ನೋವಿನಿಂದ ಹೊರಬಂದುಮಾತನಾಡಲು ಕೊಂಚ ಸಮಯ ಹಿಡಿಯಿತು.ನಾನು ಈಗಾಗಲೇ ಸ್ಪಷ್ಟಪಡಿಸಿರುವ ಹಾಗೆ ಕಾನೂನಿನ ಪ್ರಕಾರ ಅವನು ತಪ್ಪಿತಸ್ಥನೆಂದಾದರೆ, ಅವನಿಗೆ ಅತ್ಯಂತ ಕಠಿಣ ಶಿಕ್ಷ ವಿಧಿಸಬೇಕು. ನನ್ನ ಈ ನಿಲುವನ್ನು ನನ್ನ ಮಗ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ಪಾಮಿ ಹಗರಣ ಹೊರಬಿದ್ದ ಮೊದಲ ದಿನದಿಂದಲೇ ಪ್ರತಿಪಾದಿಸಿದ್ದಾರೆ.ಈ ಕೆಲವು ವಾರಗಳಿಂದ ಜನರು ನನ್ನ ಮತ್ತು ನನ್ನ ಕುಟುಂಬದವರ ಕುರಿತಾಗಿ ಅತ್ಯಂತ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದೆಲ್ಲವೂ ನನಗೆ ತಿಳಿದಿದೆ. ನಾನು ಅವರು ಮಾತನಾಡುವುದನ್ನು ನಿಲ್ಲಿಸುವ ಪ್ರಯತ್ನ ಮಾಡುವುದಿಲ್ಲ. ನಾನು ಅವರನ್ನು ಟೀಕೆ ಮಾಡಲೂ ಹೋಗುವುದಿಲ್ಲ. ಈ ಹಗರಣದ ಎಲ್ಲ ಸತ್ಯಾಂಶಗಳು ಹೊರಬರುವವರೆಗೂ ಅವರು ತಾಳ್ಮೆಯಿಂದ ಕಾಯಬೇಕಿತ್ತು ಎಂದು ಅವರೊಂದಿಗೆ ವಾದಕ್ಕೆ ಇಳಿಯುವುದಿಲ್ಲ. ಪ್ರಜ್ವಲ್‌ನ ಚಟುವಟಿಕೆಗಳ ಬಗ್ಗೆ ನನಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ನಾನು ಅವರಿಗೆ ಮನವರಿಕೆ ಮಾಡಿಕೊಡಲು ಸಾಧ್ಯವಿಲ್ಲ. ಅವನನ್ನು ರಕ್ಷಿಸುವ ಯಾವುದೇ ಇರಾದೆಯೂ ನನಗಿಲ್ಲ. ಅವನ ಈಗಿನ ಚಲನ-ವಲನ ಮತ್ತು ಅವನ ವಿದೇಶಿ ಯಾತ್ರೆಯ ಬಗ್ಗೆ ನನಗೆ ಏನೂ ತಿಳಿದಿಲ್ಲ, ತಿಳಿದಿರಲಿಲ್ಲ ಎಂದು ನಾನು ಜನರಿಗೆ ಅರ್ಥ ಮಾಡಿಸಲು ಸಾಧ್ಯವಿಲ್ಲ. ನಾನು ನನ್ನ ಆತ್ಮಸಾಕ್ಷಿಗೆ ಮಾತ್ರ ಉತ್ತರಿಸಬಲ್ಲೆ. ನನಗೆ ದೇವರಲ್ಲಿ ನಂಬಿಕೆ ಇದೆ ಮತ್ತು ಆ ದೇವರಿಗೆ ಎಲ್ಲ ಸತ್ಯ ತಿಳಿದಿದೆ ಎಂದು ನಾನು ನಂಬಿದ್ದೇನೆ.
ನಾನು ಈಚಿನ ದಿನಗಳಲ್ಲಿ ನಡೆದಿರುವ ರಾಜಕೀಯ ಪಿತೂರಿಗಳು, ಚಿತಾವಣೆಗಳು, ಉತ್ಪೇಕ್ಷೆಗಳು ಮತ್ತು ಮಿಥ್ಯಾರೋಪಗಳ ಬಗ್ಗ ಈಗ ವಿಶ್ಲೇಷಣೆ ಮಾಡಲು ಹೋಗುವುದಿಲ್ಲ. ಅವುಗಳನ್ನು ಮಾಡಿದವರು ದೇವರಿಗೆ ಉತ್ತರಿಸಬೇಕಾಗುತ್ತದೆ ಮತ್ತು ತಾವು ಎಸಗಿದ ಕೃತ್ಯಗಳಿಗೆ ಸೂಕ್ತ ಬೆಲೆ ತೆರಬೇಕಾಗುತ್ತದೆ ಎಂದು ನಂಬಿದ್ದೇನೆ. ಪ್ರಜ್ವಲ್ ಎಸಗಿದ್ದಾನೆ ಎನ್ನಲಾದ ತಪ್ಪುಗಳನ್ನು ತೀರ್ಮಾನಿಸಲು ಕಾನೂನು ಇದೆ. ಆದರೆ ಈ ಎಚ್ಚರಿಕೆಗೆ ಅವನು ತಲೆಬಾಗದಿದ್ದಲ್ಲಿ, ಅವನು ಮನೆಯವರ ಕಣ್ಣಲ್ಲಿ ಏಕಾಂಗಿಯಾಗುವುದರಲ್ಲಿ ಸಂದೇಹವಿಲ್ಲ. ನನ್ನ ಬಗ್ಗೆ ಅವನಿಗೆ ಏನಾದರೂ ಗೌರವವಿದ್ದಲ್ಲಿ ಅವನು ಕೂಡಲೆ ಹಿಂದಿರುಗಿ ಬರಬೇಕು.
ನಾನಾಗಲಿ, ನನ್ನ ಕುಟುಂಬದವರಾಗಲಿ ಈ ವಿಚಾರಣೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಭರವಸೆ ಕೊಡುತ್ತೇನೆ. ಇದರಲ್ಲಿ ಯಾವುದೇ ಭಾವನೆಗೆ ಸಿಲುಕದೆ, ಅವನು ಎಸಗಿದ್ದಾನೆ ಎನ್ನಲಾದ ಕೃತ್ಯಗಳು ಮತ್ತು ತಪ್ಪುಗಳಿಂದ ನೊಂದಿರುವ, ಅನ್ಯಾಯಕ್ಕೆ ಒಳಗಾಗಿರುವ ಎಲ್ಲರಿಗೂ ನ್ಯಾಯ ಸಿಗುವುದಷ್ಟೆ ನನಗೆ ಮುಖ್ಯ. ಜನರ ವಿಶ್ವಾಸವನ್ನು ಮರಳಿ ಪಡೆಯುವುದಷ್ಟೆ ನನ್ನ ಗುರಿ. ಜನರು ಆರು ದಶಕಗಳ ಕಾಲದ ನನ್ನ ರಾಜಕೀಯ ಜೀವನದುದ್ದಕ್ಕೂ ನನ್ನ ಜತೆಗೆ ನಿಂತಿದ್ದಾರೆ. ಅವರಿಗೆ ನಾನು ಸದಾ ಋಣಿ ಮತ್ತು ನಾನು ಬದುಕಿರುವವರೆಗೂ ಅವರ ಹಿತದ ವಿರುದ್ಧ ನಡೆದುಕೊಳ್ಳುವುದಿಲ್ಲ ಎಂದು ಮಾಜಿ ಪ್ರಧಾನಿ ದೇವೇಗೌಡ ಪತ್ರದಲ್ಲಿ ವಿವರಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + twelve =
Remember me
